January 11, 2026

ರಿಪ್ಪನ್‌ಪೇಟೆ ಪೊಲೀಸ್ ಠಾಣೆ ಸೇರಿದಂತೆ ವಿವಿಧೆಡೆ ಸಂಭ್ರಮದ ಆಯುಧ ಪೂಜೆ

ರಿಪ್ಪನ್‌ಪೇಟೆ ಪೊಲೀಸ್ ಠಾಣೆ ಸೇರಿದಂತೆ ವಿವಿಧೆಡೆ ಸಂಭ್ರಮದ ಆಯುಧ ಪೂಜೆ

ರಿಪ್ಪನ್‌ಪೇಟೆ : ನಾಡಹಬ್ಬ ದಸರಾ ಹಿಂದಿನ ದಿನವಾದ ಇಂದು ಆಯುಧ ಪೂಜೆಯನ್ನು ಪಟ್ಟಣದ ಗ್ರಾಮ ಪಂಚಾಯತ್ , ನಾಡ ಕಛೇರಿ ಸೇರಿದಂತೆ ಹಲವಾರು ಕಡೆಗಳಲ್ಲಿ ಸಡಗರ ಮತ್ತು ಸಂಭ್ರಮದಿಂದ ಆಚರಿಸಲಾಯಿತು. ಸರ್ಕಾರಿ ವಾಹನಗಳು, ಖಾಸಗಿ ವಾಹನಗಳಿಗೆ ಪೂಜೆ ಸಲ್ಲಿಸಿ ಸಂಭ್ರಮದಿಂದ ಹಬ್ಬ ಆಚರಣೆ ಮಾಡಲಾಯಿತು.

ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ  ಚಾಮುಂಡೇಶ್ವರಿ ದೇವಿಯ ಫೋಟೋ ಪ್ರತಿಷ್ಠಾಪನೆ ಮಾಡಿ ವಾಹನಗಳಿಗೆ ಪೂಜೆ ಸಲ್ಲಿಸಿ ಬಂದೂಕು ಮತ್ತು ರಿವಾಲ್ವರ್ ಗಳಿಗೆ ಪೂಜೆ ಮಾಡಲಾಯಿತು.

ಈ ಪಿಎಸ್‌ಐ ರಾಜುರೆಡ್ಡಿ ಸಿಬ್ಬಂದಿಗಳಾದ ಉಮೇಶ್  ,ಗಿರೀಶ್ , ಪರಮೇಶ್ವರಪ್ಪ, ಸಂತೋಷ್ ಕೊರವರ  , ರಾಮಚಂದ್ರಪ್ಪ, ಸೇರಿದಂತೆ ಪೊಲೀಸ್ ಸಿಬ್ಬಂದಿಗಳು ಭಾಗಿಯಾಗಿದ್ದರು.

About The Author