ಗೊಡೌನ್ ಬೀಗ ಮುರಿದು ಲಕ್ಷಾಂತರ ರೂ ಮೌಲ್ಯದ ಅಡಿಕೆ ಕಳ್ಳತನ
ಶಿವಮೊಗ್ಗ: ನಗರದ ಆರ್.ಎಂ.ಎಲ್. ನಗರ ಪ್ರದೇಶದಲ್ಲಿ ಕಳ್ಳರು ಬೀಗ ಒಡೆದು ಗೋದಾಮಿನಿಂದ ಅಡಿಕೆ ಕಳ್ಳತನ ಮಾಡಿದ ಘಟನೆ ನಡೆದಿದೆ. ಉದ್ಯಮಿಯೊಬ್ಬರಿಗೆ ಸೇರಿದ ಈ ಗೋದಾಮಿನಿಂದ ಸುಮಾರು 8 ಲಕ್ಷ ರೂಪಾಯಿ ಮೌಲ್ಯದ 20 ಚೀಲ ಅಡಿಕೆ ನಾಪತ್ತೆಯಾಗಿವೆ.
ದೂರುದಾರರು ತಮ್ಮ ಮಳಿಗೆಯಲ್ಲಿ ಇರಿಸಲು ಸ್ಥಳಾವಕಾಶವಿಲ್ಲದೆ, ಕಳೆದ ಸೆಪ್ಟೆಂಬರ್ 21ರಂದು ಅನುಪಿನಕಟ್ಟೆ ಸಮೀಪದ ಶೀಟಿನ ಗೋದಾಮಿನಲ್ಲಿ ಅಡಿಕೆಯನ್ನು ಇಟ್ಟಿದ್ದರು. ಮಾರಾಟಕ್ಕೆ ಸಿದ್ಧಪಡಿಸಿದ್ದ ಈ ಅಡಿಕೆಯನ್ನು ನೋಡಿಕೊಳ್ಳಲು ಪರಿಚಯಸ್ಥರೊಬ್ಬರಿಗೆ ಜವಾಬ್ದಾರಿ ನೀಡಲಾಗಿತ್ತು.
ಸೆಪ್ಟೆಂಬರ್ 22ರ ರಾತ್ರಿ ಸುಮಾರು 8 ಗಂಟೆಯವರೆಗೆ ಅವರು ಗೋದಾಮಿನಲ್ಲಿ ಇದ್ದು, ಬಳಿಕ ಬೀಗ ಹಾಕಿ ತೆರಳಿದ್ದರು. ಆದರೆ ಮರುದಿನ ಸೆಪ್ಟೆಂಬರ್ 23ರಂದು ಮಧ್ಯಾಹ್ನ 1 ಗಂಟೆಗೆ ಗೋದಾಮಿಗೆ ಬಂದಾಗ, ಬಾಗಿಲಿನ ಬೀಗ ಒಡೆದು ಕಳ್ಳರು ಒಳನುಗ್ಗಿರುವುದು ಮತ್ತು ಅಡಿಕೆ ತುಂಬಿದ್ದ 20 ಚೀಲಗಳು ನಾಪತ್ತೆಯಾಗಿರುವುದು ಪತ್ತೆಯಾಯಿತು.
ಈ ಘಟನೆ ಬಗ್ಗೆ ದೂರು ದಾಖಲಾದ ಹಿನ್ನೆಲೆಯಲ್ಲಿ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ಪ್ರಾರಂಭವಾಗಿದೆ.
ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ A man identified…
ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು SSLC student Krishna drowned while swimming in Tunga Channel…
ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ Shivamogga witnessed a grand and peaceful Eid Milad procession…
ಹುಂಚ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ Postman News report brings action on…
ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ Two accused persons were…
ಬೀದಿ ನಾಯಿಗಳ ದಾಳಿ: ಆರು ಕುರಿಗಳು ಸಾವು Six sheep belonging to a resident of Sagar were…