
ಕಸ್ತೂರಿ ಕನ್ನಡ ಸಂಘದ ಅಧ್ಯಕ್ಷರಾಗಿ ಜಿ ಆರ್ ಗೋಪಾಲಕೃಷ್ಣ ಆಯ್ಕೆ
ರಿಪ್ಪನ್ ಪೇಟೆ : ಕಸ್ತೂರಿ ಕನ್ನಡ ಸಂಘ ಮತ್ತು ಪುನೀತ್ ರಾಜ್ಕುಮಾರ್ ಆಭಿಮಾನಿ ಬಳಗದ ಐದನೇ ವರ್ಷದ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆದಿದ್ದು ಅಧ್ಯಕ್ಷರಾಗಿ ಜಿ ಆರ್ ಗೋಪಾಲಕೃಷ್ಣ , ಪ್ರಧಾನ ಕಾರ್ಯದರ್ಶಿಗಳಾಗಿ ಹಸನಬ್ಬ ಬ್ಯಾರಿ ಹಾಗೂ ಶ್ರೀಧರ್ ಚಿಗುರು ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರಾಗಿ ದೇವರಾಜ್ ಕೆ ,ರಮೇಶ್ ಫ್ಯಾನ್ಸಿ , ಸಾಜೀದಾ ಹನೀಪ್, ವಾಣಿ ಗೋವಿಂದಪ್ಪ ಗೌಡ , ಸಹಕಾರ್ಯದರ್ಶಿಯಾಗಿ ದೀಪಾ ನಾಗರಾಜ್ ರವರನ್ನು ಆಯ್ಕೆ ಮಾಡಲಾಗಿದೆ.
ನವೆಂಬರ್ 1ಕ್ಕೆ ವಿನಾಯಕ ವೃತ್ತದಲ್ಲಿ ಧ್ವಜಾರೋಹಣ
ನವೆಂಬರ್ 1 ರಂದು ಪಟ್ಟಣದ ವಿನಾಯಕ ವೃತ್ತದಲ್ಲಿ ಕಸ್ತೂರಿ ಕನ್ನಡ ಸಂಘದ ವತಿಯಿಂದ ಧ್ವಜಾರೋಹಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಸ್ತೂರಿ ಕನ್ನಡ ಸಂಘದ ಅಧ್ಯಕ್ಷರಾದ ಜಿ ಆರ್ ಗೋಪಾಲಕೃಷ್ಣ ಹೇಳಿದರು.
ಪಟ್ಟಣದಲ್ಲಿ ಬುಧವಾರ ಗ್ರಾಮ ಪಂಚಾಯತ್ ನ ಕುವೆಂಪು ಸಭಾಂಗಣದಲ್ಲಿ ಕಸ್ತೂರಿ ಕನ್ನಡ ಸಂಘ ಹಾಗೂ ಪುನಿತ್ ರಾಜ್ ಕುಮಾರ್ ಅಭಿಮಾನಿ ಬಳಗದ ವತಿಯಿಂದ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ನವೆಂಬರ್1 ರಂದು ವಿನಾಯಕ ವೃತ್ತದಲ್ಲಿ ಧ್ವಜಾರೋಹಣ ನೆರವೇರಿಸಿ , ಶಾಲಾ ಮಕ್ಕಳು ಹಾಗೂ ಸಾರ್ವಜನಿಕರೊಂದಿಗೆ ಕನ್ನಡ ಭುವನೇಶ್ವರಿ ದೇವಿಯೊಂದಿಗೆ ಮೆರವಣಿಗೆ ನಡೆಸಿ ಶಾಲಾ ಮಕ್ಕಳಿಗೆ ವಿನಾಯಕ ವೃತ್ತದಲ್ಲಿ ಸಿಹಿ ಹಂಚುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ ಎಂದು ಹೇಳಿದರು.
ನವೆಂಬರ್ 14 ರಂದು ಸಾಂಸ್ಕೃತಿಕ ಕಾರ್ಯಕ್ರಮ :
ನವೆಂಬರ್ 14 ರ ಮಕ್ಕಳ ದಿನಾಚರಣೆಯಂದು ಪಟ್ಟಣದ ಹಿಂದೂ ಮಹಾಸಭಾ ಸಭಾಂಗಣದಲ್ಲಿ ಕಸ್ತೂರಿ ಕನ್ನಡ ಸಂಘ ಹಾಗೂ ಪುನಿತ್ ರಾಜ್ ಕುಮಾರ್ ಅಭಿಮಾನಿ ಬಳಗದ ವತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ ಎಂದರು.
ಈ ಸಂಧರ್ಭದಲ್ಲಿ ಕಸ್ತೂರಿ ಕನ್ನಡ ಸಂಘದ ಮಾಜಿ ಅಧ್ಯಕ್ಷರಾದ ಅರ್ ಎ ಚಾಬುಸಾಬ್ , ಆನಂದ್ ಮೆಣಸೆ , ಉಪಾಧ್ಯಕ್ಷರಾದ ರಮೇಶ್ ಫ್ಯಾನ್ಸಿ , ದೇವರಾಜ್ ಕೆ ,ಪ್ರಧಾನ ಕಾರ್ಯದರ್ಶಿಗಳಾದ ಹಸನಬ್ಬ ಬ್ಯಾರಿ , ಶ್ರೀಧರ್ ಚಿಗುರು ಸಲಹಾ ಸಮಿತಿಯ ಆಸೀಫ಼್ ಭಾಷಾ , ಈಶ್ವರಪ್ಪ ಗೌಡ ಹಾಗೂ ಇನ್ನಿತರರು ಇದ್ದರು.