Headlines

ನಿಟ್ಟೂರಿನಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟ

ನಿಟ್ಟೂರಿನಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟ

ನಿಟ್ಟೂರು: ಪ್ರಜ್ಞಾಭಾರತಿ ವಿದ್ಯಾ ಕೇಂದ್ರದ ಆಶ್ರಯದಲ್ಲಿ ನಗರ ಹೋಬಳಿ ವ್ಯಾಪ್ತಿಯ 17 ವರ್ಷದೊಳಗಿನ ವಯೋಮಿತಿಯ ಪ್ರೌಢಶಾಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರ ಕ್ರೀಡಾಕೂಟ ಇಂದು ನಿಟ್ಟೂರಿನ ಕಾಲೇಜು ಮೈದಾನದಲ್ಲಿ ಭವ್ಯವಾಗಿ ಆರಂಭವಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಹೊಸನಗರ ತಾಲೂಕು ಕೆ.ಡಿ.ಪಿ ಸದಸ್ಯೆ ಸುಮಾ ಸುಬ್ರಹ್ಮಣ್ಯ ಅವರು ನೆರವೇರಿಸಿ ನಂತರ ಮಾತನಾಡಿ“ವಿದ್ಯಾರ್ಥಿಗಳ ಉನ್ನತಿಗಾಗಿ ಶ್ರಮಿಸುತ್ತಿರುವ ಪೋಷಕರಿಗೆ ಗೌರವ ನೀಡಬೇಕು, ಶಿಕ್ಷಕರ ಮಾರ್ಗದರ್ಶನದಲ್ಲಿ ಉತ್ತಮ ನಾಗರಿಕರಾಗಿ ಬೆಳೆಯಬೇಕು,” ಎಂದು ಹಾರೈಸಿದರು. ಕ್ರೀಡೆ ದೈಹಿಕ ಹಾಗೂ ಮಾನಸಿಕ ಅಭಿವೃದ್ಧಿಗೆ ಅನನ್ಯವಾದ ಪಾತ್ರವಹಿಸುತ್ತದೆ ಎಂದು ಅವರು ಮನಮುಟ್ಟುವಂತೆ ಹೇಳಿದರು.

ಗ್ರಾಮ ಪಂಚಾಯತ್ ಸದಸ್ಯ ನಾಗೋಡಿ ವಿಶ್ವನಾಥ್ ಮಾತನಾಡಿ, “ನಿಟ್ಟೂರು ಭಾಗದ ಯುವಕರ ಹಾಗೂ ವಿದ್ಯಾರ್ಥಿಗಳ ಬಹುಕಾಲದ ಕನಸಾಗಿರುವ ಸುಸಜ್ಜಿತ ಕ್ರೀಡಾಂಗಣ ನಿರ್ಮಾಣಕ್ಕಾಗಿ ಶಾಸಕರೊಂದಿಗೆ ಚರ್ಚಿಸಿ ಶೀಘ್ರದಲ್ಲೇ ಅನುದಾನ ತರುವ ಪ್ರಯತ್ನ ಮಾಡಲಾಗುವುದು,” ಎಂದು ಭರವಸೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಜ್ಞಾಭಾರತಿ ವಿದ್ಯಾ ಕೇಂದ್ರದ ಅಧ್ಯಕ್ಷ ಶ್ರೀಕಾಂತ್ ಅಟ್ಟಳ್ಳಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಚಂದ್ರಾವತಿ ಶೆಟ್ಟಿ, ಸದಸ್ಯರಾದ ಶೋಭಾ ಉದಯ್ ಕುಮಾರ್, ಪುರುಷೋತ್ತಮ್ ಶಾನ್ಬೊಗ್, ಕಾಲೇಜು ಆಡಳಿತ ಮಂಡಳಿಯ ಉಪಾಧ್ಯಕ್ಷ ಜೆ.ವಿ. ಸುಬ್ರಹ್ಮಣ್ಯ, ಎಸ್‌ಡಿಎಂಸಿ ಅಧ್ಯಕ್ಷ ಗೋಪಾಲ ಕಟ್ಟಿನಹೊಳೆ, ನಿಟ್ಟೂರು ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಗಣೇಶ, ಹಾಗೂ ತಾಲೂಕು ದೈಹಿಕ ಪರಿವೀಕ್ಷಕ ವಿನಯ್ ಉಪಸ್ಥಿತರಿದ್ದರು.

ಈ ಸಂದರ್ಭ ನಿಟ್ಟೂರಿನ ಹಿರಿಯ ಕ್ರೀಡಾಪಟು ಹಾಗೂ ವಾಲಿಬಾಲ್ ತರಬೇತುದಾರ ಲಕ್ಮನೆ ರಾಧಾಕೃಷ್ಣ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳು ಉತ್ಸಾಹಭರಿತವಾಗಿ ಭಾಗವಹಿಸಿ ಕ್ರೀಡಾಸ್ಫೂರ್ತಿಯ ಮಾದರಿ ಪ್ರದರ್ಶಿಸಿದರು.

Exit mobile version