Headlines

ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣ ಕಾರ್ಯ ವಿರೋಧಿಸಿ ಹೊಳೆಬೆನವಳ್ಳಿ ಗ್ರಾಮಸ್ಥರ ಪ್ರತಿಭಟನೆ

ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣ ಕಾರ್ಯ ವಿರೋಧಿಸಿ ಹೊಳೆಬೆನವಳ್ಳಿ ಗ್ರಾಮಸ್ಥರ ಪ್ರತಿಭಟನೆ

ಶಿವಮೊಗ್ಗ : ಹೊಳೆಬೆನವಳ್ಳಿ ಗ್ರಾಮ ಠಾಣಾ ಜಾಗದಲ್ಲಿ ಸ್ವಚ್ಛ ಸಂಕೀರ್ಣ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣ ಕಾರ್ಯ ವಿರೋಧಿಸಿ ಇಂದು ಹೊಳೆಬೆನವಳ್ಳಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

ಹೊಳೆಬೆನವಳ್ಳಿ ಗ್ರಾಮದಲ್ಲಿ ಗ್ರಾಮ ಠಾಣಾ ಜಾಗವಿದ್ದು, ಈ ಜಾಗದ ಸುತ್ತಮುತ್ತ ಉಡಸಲಮ್ಮ, ಮಾತಂಗೆಮ್ಮ, ನಂದಿಬಸವೇಶ್ವರ ದೇವಸ್ಥಾನಗಳಿವೆ. ತ್ಯಾಜ್ಯ ವಿಲೇವಾರಿ ಘಟಕದಿಂದಾಗಿ ಊರಿನ ನಾಗರೀಕರಿಗೆ ಸಾಂಕ್ರಾಮಿಕ ರೋಗ ಹರಡುವ ಸಂಭವವಿದೆ. ಹೀಗಾಗಿ ಸಾರ್ವಜನಿಕರ ಹಿತದೃಷ್ಟಿಯಿಂದ ಹಾಗೂ ನಾಗರೀಕರ ವಿರೋಧವಿದ್ದರೂ ಈ ಜಾಗದಲ್ಲಿ ಸ್ವಚ್ಚ ಸಂಕೀರ್ಣ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣ ಮಾಡಬಾರದು ಎಂದು ಆಗ್ರಹಿಸಿದರು.

ಹೊಳೆಬೆನವಳ್ಳಿ ಗ್ರಾಮ ಪಂಚಾಯ್ತಿ ಆವರಣದಲ್ಲಿ ಇಂದಿನಿಂದ ಅನಿರ್ಧಿಷ್ಟಾವಧಿ ಸತ್ಯಾಗ್ರಹ ಕೈಗೊಳ್ಳಲಾಗಿದೆ.

ಪ್ರತಿಭಟನೆಯಲ್ಲಿ ಗ್ರಾಮಸ್ಥರು ಪ್ಲೇಕಾರ್ಡ್‍ಗಳನ್ನು ಹಿಡಿದು, ಘೋಷಣೆಗಳನ್ನು ಕೂಗಿ, ಆಕ್ರೋಶ ವ್ಯಕ್ತಪಡಿಸಿದರು.