ಹೊಸನಗರ ಸಿಪಿಐ ಗುರಣ್ಣ ಹೆಬ್ಬಾಳ್ ವರ್ಗಾವಣೆ | ಜಿಲ್ಲೆಯ ಹಲವು ಸರ್ಕಲ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ ,
ಶಿವಮೊಗ್ಗ: ರಾಜ್ಯ ಸರ್ಕಾರವು ಇಂದು ಹಲವು ವರ್ಗಾವಣೆ ಆದೇಶವನ್ನು ಹೊರಡಿಸಿದ್ದು, 27 ಡಿವೈಎಸ್ಪಿ ಮತ್ತು 131 ಇನ್ಸ್ಪೆಕ್ಟರ್ಗಳ ವರ್ಗಾವಣೆ ನಡೆದಿದೆ. ಈ ಪಟ್ಟಿಯಲ್ಲಿ ಹೊಸನಗರ ವೃತ್ತದ ಸರ್ಕಲ್ ಇನ್ಸ್ಪೆಕ್ಟರ್ ಗುರಣ್ಣ ಹೆಬ್ಬಾಳ್ ಅವರಿಗೂ ಬದಲಾವಣೆ ಆದೇಶ ಹೊರಡಿಸಲಾಗಿದೆ.
ಹೊಸನಗರದ ಸಿಪಿಐ ಆಗಿದ್ದ ಗುರಣ್ಣ ಹೆಬ್ಬಾಳ್ ಅವರನ್ನು ಕರ್ನಾಟಕ ಲೋಕಾಯುಕ್ತ ಇಲಾಖೆಗೆ ವರ್ಗಾಯಿಸಲಾಗಿದೆ, ಅವರ ಸ್ಥಾನಕ್ಕೆ ಹಾವೇರಿ ಜಿಲ್ಲೆಯ ಡಿಎಸ್ಬಿ ಘಟಕದ ಮುತ್ತನಗೌಡ ಐ. ಗೌಡಪ್ಪಗೌಡರ್ ಅವರನ್ನು ನಿಯುಕ್ತಿಗೊಳಿಸಲಾಗಿದೆ.
ಇತರ ಸರ್ಕಲ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆಗಳು ಹೀಗಿವೆ:
ಚಿದಾನಂದ – ಆಂತರಿಕ ಭದ್ರತಾ ವಿಭಾಗದಿಂದ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಗೆ.
ಜಗದೀಶ್ ಸಿ. ಹಂಚಿನಾಳ – ಭದ್ರಾವತಿ ಗ್ರಾಮಾಂತರ ಠಾಣೆಯಿಂದ ಶಿವಮೊಗ್ಗ ಡಿಎಸ್ಬಿಗೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್