ಅಧಿಕಾರಿಗಳು ಶಾಸಕರ ಕೈಗೊಂಬೆಯಾಗಿ ಕೆಲಸ ಮಾಡಿದರೆ ತಮ್ಮ ಕಛೇರಿ ಮುಂದೆ ಧರಣಿ ನಡೆಸಲಾಗುವುದು ; ಹರತಾಳು ಹಾಲಪ್ಪ ಎಚ್ಚರಿಕೆ

ಅಧಿಕಾರಿಗಳು ಶಾಸಕರ ಕೈಗೊಂಬೆಯಾಗಿ ಕೆಲಸ ಮಾಡಿದರೆ ತಮ್ಮ ಕಛೇರಿ ಮುಂದೆ ಧರಣಿ ನಡೆಸಲಾಗುವುದು ; ಹರತಾಳು ಹಾಲಪ್ಪ ಎಚ್ಚರಿಕೆ

ಹೊಸನಗರ ; ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸ್ಥಾಪನೆಗೊಂಡ ಬಳಿಕ ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿಯ ವಿಷಯದಲ್ಲಿ ಸಂಪೂರ್ಣ ವೈಫಲ್ಯ ಕಂಡುಬಂದಿದೆ. ಅದು ಅಲ್ಲದೇ ಹೊಸನಗರ ತಾಲ್ಲೂಕಿನ ಅಧಿಕಾರಿಗಳು ಶಾಸಕರ ಮತ್ತು ಅವರ ಹಿಂಬಾಲಕರ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದು ಬಡವರಿಗೆ, ರೈತರಿಗೆ ಹಾಗೂ ಬಿಜೆಪಿ ಕಾರ್ಯಕರ್ತರಿಗೆ ಹಿಂಸೆ ನೀಡುತ್ತಿದ್ದಾರೆ. ಇನ್ಮುಂದೆ ಶಾಸಕರ ಹಾಗೂ ಅವರ ಹಿಂಬಾಲಕರ ಆಟ ನಡೆಯುವುದಿಲ್ಲ ಅಧಿಕಾರಿಗಳ ಕಛೇರಿಯ ಮುಂದೆ ಧರಣಿ ನಡೆಸಿ ನ್ಯಾಯ ಕೊಡಿಸುವುದಾಗಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ ಎಚ್ಚರಿಕೆ ನೀಡಿದರು.

ತಾಲೂಕು ಕಛೇರಿ ಆವರಣದಲ್ಲಿ ಬಿಜೆಪಿ ಮಂಡಲ ಶನಿವಾರ ನಡೆಸಿದ ಪ್ರತಿಭಟನೆಯ ನೇತೃತ್ವ ವಹಿಸಿದ್ದ ಅವರು ಮಾತನಾಡಿ, ಸಾಗರ ವಿಧಾನಸಭಾ ಕ್ಷೇತ್ರದ ಶಾಸಕರು ಅಭಿವೃದ್ಧಿಯ ವಿಷಯದಲ್ಲಿ ಎಡವಿದ್ದಾರೆ. ಬಡವರು, ರೈತರ ಪರ ಕಾಳಜಿ ಇಲ್ಲದಂತೆ ವರ್ತಿಸುತ್ತಿದ್ದಾರೆ. ರೈತರ ಬಗರ್‌ಹುಕುಂ ಸಾಗುವಳಿ ಜಮೀನು ತೆರವುಗೊಳಿಸಿದ್ದಷ್ಟೇ ಈವರೆಗಿನ ಇವರ ಸಾಧನೆಯಾಗಿದೆ. ಬಿಜೆಪಿ ಕಾರ್ಯಕರ್ತರ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲು ಮಾಡಲಾಗುತ್ತಿದೆ ಎಂದು ಆಪಾದಿಸಿದರು.

ಸ್ಥಳೀಯ ಶಾಸಕರು ಅಧಿಕಾರಿ ವರ್ಗವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಕೆಲ ಅಧಿಕಾರಿಗಳು ಸಹಾ ಶಾಸಕರ ಹಿಂಬಾಲಕರಂತೆ ವರ್ತಿಸುತ್ತಿದ್ದಾರೆ. ಇದು ಆಡಳಿತ ವೈಫಲ್ಯಕ್ಕೆ ಸಾಕ್ಷಿಯಾಗಿದೆ. ಶಾಸಕರ ಹಿಂಬಾಲಕರು ಸರ್ಕಾರಿ ಕಛೇರಿಗಳಲ್ಲಿಯೇ ಠಿಕಾಣಿ ಹೂಡಿಕೊಂಡಿದ್ದು, ಜನಸಾಮಾನ್ಯರು ಅಸಹ್ಯ ಪಡುವಂತಾಗಿದೆ ಎಂದು ಕಿಡಿಕಾರಿದರು.

ಆರ್.ಎಸ್.ಎಸ್ ವಿರುದ್ಧ ಬೇಳೂರು ಗೋಪಾಲಕೃಷ್ಣ ಮಾತನಾಡಿದ್ದು (ಬ್ರಿಟಿಷರನ್ನೇ ಓಡಿಸಿದ ಈ ನಮ್ಮ ಕಾಂಗ್ರೆಸ್ ಪಕ್ಷ ಆರ್.ಎಸ್.ಎಸ್ ಯಾವ ಲೆಕ್ಕ) ಇವರು 10 ವರ್ಷದ ಹಿಂದೆ ಆರ್‌ಎಸ್‌ಎಸ್ ಚಡ್ಡಿ ಹಾಕಿಕೊಂಡು ಬಿಜೆಪಿಯಿಂದ ಶಾಸಕರಾದವರು ಅದನ್ನು ಮರೆತಂತೆ ಕಾಣುತ್ತಿದ್ದೆ. ಆರ್‌ಎಸ್‌ಎಸ್‌ನ್ನು ಭಾರತ ದೇಶದಿಂದ ಓಡಿಸಲು ಇವರಿಂದ ಸಾಧ್ಯವಿಲ್ಲ ಎಂದರು.

ತಹಸೀಲ್ದಾರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ, ವಿವಿಧ ಇಲಾಖೆ ಎಂಜಿನಿಯರ್, ಶಿಕ್ಷಣ ಇಲಾಖೆಯ ಅಧಿಕಾರಿಗಳ ಹುದ್ದೆಗಳು ಖಾಲಿ ಉಳಿದಿವೆ. ಜನಸಾಮಾನ್ಯರು ಅಹವಾಲು ಸಲ್ಲಿಸಲು ಕಛೇರಿಗೆ ಬಂದರೆ ಕೇಳುವವರಿಲ್ಲದಂತಾಗಿದೆ. ತಾಲೂಕಿನ ಬಹುತೇಕ ರಸ್ತೆಗಳು ಹೊಂಡ ಬಿದ್ದರೂ ಮುಚ್ಚುವವರಿಲ್ಲದಂತಹ ಸ್ಥಿತಿ ತಲುಪಿವೆ. ಮೊದಲು ಅಭಿವೃದ್ಧಿಯ ಕಡೆ ಗಮನ ಹರಿಸಲಿ ಎಂದರು.

ಮಂಡಲದ ಅಧ್ಯಕ್ಷ ಮತ್ತಿಮನೆ ಸುಬ್ರಮಣ್ಯ ಮಾತನಾಡಿ, ರಾಜ್ಯ ಸರ್ಕಾರ ಬಿಪಿಎಲ್ ಕಾರ್ಡ್‌ಗಳನ್ನು ವಜಾ ಮಾಡುವ ಮೂಲಕ ಬಡವರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಯಾವುದೇ ಇಲಾಖೆಯಲ್ಲಿಯೂ ಶಾಸಕರು ಅವರ ಹಿಂಬಾಲಕರು ಕೈಯಾಡಿಸುವ ಕೆಲಸ ನಡೆಯುತ್ತಿದೆ ಅದು ಅಲ್ಲದೆ ಕೆಲವು ಹಿಂಬಾಲಕರು ಶಾಸಕರ ಹೆಸರನ್ನು ಬಳಸಿಕೊಂಡು ಅಧಿಕಾರಿಗಳ ಮುಂದೆ ಕಾಲು ಅಲುಗಡಿಸುತ್ತಾ ಬೆಳಿಗ್ಗೆಯಿಂದ ಸಂಜೆಯವರೆಗೆ ಕುಳಿತಿರುತ್ತಾರೆ. ಈ ಹಿಂಬಾಲಕರಿಗೆ ಯಾರ ಭಯವು ಇಲ್ಲದಾಂತಾಗಿದೆ ಎಂದ ಅವರು, ಆರ್‌ಎಸ್‌ಎಸ್ ಸಂಘಟನೆಯನ್ನು ನಿಷೇಧಿಸುವುದಾಗಿ ಹೇಳಿರುವ ಶಾಸಕರ ಹೇಳಿಕೆಯನ್ನು ಖಂಡಿಸಿದರು.

ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡರಾದ ಎನ್.ಆರ್.ದೇವಾನಂದ, ಉಮೇಶ ಕಂಚುಗಾರ್, ಹಾಲಗದ್ದೆ ಉಮೇಶ, ಎನ್ ಶ್ರೀಧರ ಉಡುಪ, ವೀರೇಶ್ ಆಲವಳ್ಳಿ, ಆರ್‌ಟಿ.ಗೋಪಾಲ, ಸುರೇಶ್ ಸ್ವಾಮಿರಾವ್, ನಾಗಾರ್ಜುನ ಸ್ವಾಮಿ, ಸತ್ಯನಾರಾಯಣ, ಚಾಲುಕ್ಯ ಬಸವರಾಜ್, ಶ್ರೀಪತಿರಾವ್, ಮಂಡಾನಿ ಮೋಹನ್, ಅಭಿಲಾಷ್, ಮಂಜುನಾಥ್ ಸಂಜೀವ, ನಾಗರತ್ನ ದೇವರಾಜ್, ಶಶಿಕಲಾ, ಸುಮಾ ಸುರೇಶ್, ಎನ್.ವೈ.ಸುರೇಶ್, ಬಂಕ್ರಿಬೀಡು ಮಂಜುನಾಥ್, ಪುರುಷೋತ್ತಮ ಶಾನುಭೋಗ್, ನರಲೆ ರಮೇಶ, ಸವಿತಾ, ನಿರ್ಮಾಲ ರಾಘವೇಂದ್ರ,  ಗಾಯಿತ್ರಿ ನಾಗರಾಜ್, ಕೃಷ್ಣವೇಣಿ, ಮನೋಧರ, ನಗರ ನಿತಿನ್, ಕಾರಣಗಿರಿ ಕಾವ್ಯ, ಕಾವೇರಿ ವಿಜಯ, ಮಾವಿನಕೊಪ್ಪ ಗೌತಮ್, ಮಹೇಂದ್ರ,  ಮತ್ತಿತರರು ಇದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

41 minutes ago

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

18 hours ago

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…

18 hours ago

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…

20 hours ago

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

2 days ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

2 days ago