ಅ.6 ರಿಂದ ಅರಸಾಳು, ಕುಂಸಿಯಲ್ಲಿ ಇಂಟರ್ಸಿಟಿ ರೈಲು ನಿಲುಗಡೆ
ಶಿವಮೊಗ್ಗ : ಕುಂಸಿ ಮತ್ತು ಅರಸಾಳು ರೈಲ್ವೆ ನಿಲ್ದಾಣಗಳಲ್ಲಿ ಬೆಂಗಳೂರು – ತಾಳಗುಪ್ಪ ಇಂಟರ್‌ಸಿಟಿ ಎಕ್ಸ್‌ಪ್ರೆಸ್ ರೈಲು (ಸಂಖ್ಯೆ: 20651 / 20652) ನಿಲುಗಡೆಗೆ ಸೌಲಭ್ಯ ಒದಗಿಸಲು ತಾತ್ಕಾಲಿಕವಾಗಿ ಆದೇಶ ಹೊರಡಿಸಲಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಅವರು ತಿಳಿಸಿದ್ದಾರೆ.
ಈ ನಿಲುಗಡೆ ಸೌಲಭ್ಯವನ್ನು 2025ರ ಅಕ್ಟೋಬರ್ 6 ರಿಂದ 2026ರ ಜನವರಿ 5 ರವರೆಗೆ ಪ್ರಾಯೋಗಿಕ ಆಧಾರದ ಮೇಲೆ ಜಾರಿಗೊಳಿಸಿ ರೈಲ್ವೆ ಇಲಾಖೆಯು ಆದೇಶ ನೀಡಿದೆ.
ಈ ಹಿಂದೆ, ಕುಂಸಿ ಮತ್ತು ಅರಸಾಳು ರೈಲ್ವೆ ನಿಲ್ದಾಣಗಳಲ್ಲಿ ಇಂಟರ್‌ಸಿಟಿ ಎಕ್ಸ್‌ಪ್ರೆಸ್ ರೈಲಿಗೆ ನಿಲುಗಡೆ ಇರಲಿಲ್ಲ. ಇದರಿಂದಾಗಿ ಈ ಪ್ರದೇಶಗಳ ಸಾರ್ವಜನಿಕ ಪ್ರಯಾಣಿಕರಿಂದ ರೈಲು ನಿಲುಗಡೆಗಾಗಿ ಬಹುದಿನಗಳಿಂದ ಬಲವಾದ ಬೇಡಿಕೆ ಮತ್ತು ಒತ್ತಡವಿತ್ತು. ಸಾರ್ವಜನಿಕರ ಹಿತದೃಷ್ಟಿಯಿಂದ, ಸಂಸದ ಬಿ.ವೈ. ರಾಘವೇಂದ್ರ ಅವರು ಕಳೆದ ವಾರ ಹುಬ್ಬಳ್ಳಿಯಲ್ಲಿ ನೈರುತ್ಯ ರೈಲ್ವೆ ವಲಯದ ಜನರಲ್ ಮ್ಯಾನೇಜರ್ ಮುಕುಲ್ ಸರಣ್ ಮಾಥುರ್ ಅವರನ್ನು ಭೇಟಿ ಮಾಡಿ ಈ ಕುರಿತು ವಾಸ್ತವಾಂಶಗಳನ್ನು ಮನವರಿಕೆ ಮಾಡಿಕೊಟ್ಟಿದ್ದರು. ಕುಂಸಿ ಮತ್ತು ಅರಸಾಳು ರೈಲ್ವೆ ನಿಲ್ದಾಣಗಳಲ್ಲಿ ಇಂಟರ್‌ಸಿಟಿ ರೈಲನ್ನು ನಿಲ್ಲಿಸುವ ಮೂಲಕ ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡುವಂತೆ ಸಂಸದರು ಮನವಿ ಮಾಡಿಕೊಂಡಿದ್ದರು.ಸಂಸದರ ನಿರಂತರ ಪ್ರಯತ್ನದ ಫಲವಾಗಿ ನೈರುತ್ಯ ರೈಲ್ವೆ ವಲಯದಿಂದ ಇದೀಗ ಅನುಮತಿ ದೊರೆತಿದೆ.
ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…
ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…
ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…
ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…
ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…
ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…