ರಿಪ್ಪನ್ಪೇಟೆ : 32ನೇ ವರ್ಷದ ಕಲಾ ಕೌಸ್ತುಭ ಕನ್ನಡ ಸಂಘಕ್ಕೆ ಹಾಗೂ 70ನೇ ವರ್ಷದ ಕನ್ನಡ ರಾಜ್ಯೋತ್ಸವ ಸಮಿತಿಗೆ ಆಧ್ಯಕ್ಷರಾಗಿ ಮುರುಳಿ ಕೆರೆಹಳ್ಳಿ, ಪ್ರಧಾನ ಕಾರ್ಯದರ್ಶಿಯಾಗಿ ರಾಮಚಂದ್ರ ಬಳೆಗಾರ್ ಆಯ್ಕೆಯಾಗಿದ್ದಾರೆ.
ಕಳೆದ ಸಾಲಿನ ಅಧ್ಯಕ್ಷರಾದ ರವೀಂದ್ರ ಕೆರೆಹಳ್ಳಿ ಇವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೂತನ ಅಧ್ಯಕ್ಷ ಪ್ರಧಾನ ಕಾರ್ಯದರ್ಶಿ ಸೇರಿದಂತೆ ಇತರ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಕಲಾ ಕೌಸ್ತುಭ ಕನ್ನಡ ಸಂಘ 32ನೇ ವರ್ಷದ ವಾರ್ಷಿಕೋತ್ಸವ ಮತ್ತು 70ನೇ ವರ್ಷದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಬರುವ ನವೆಂಬರ್ 01 ರಿಂದ 3 ರವರೆಗೆ ಮೂರು ದಿನಗಳ ಕಾಲ ಅದ್ದೂರಿಯಾಗಿ ಆಚರಿಸುವ ಬಗ್ಗೆ ಪೂರ್ವಭಾವಿ ಸಭೆಯನ್ನು ನಡೆಸಲಾಯಿತು.
ಈ ಸಂಧರ್ಭದಲ್ಲಿ ಸುರೇಶ್ ಸಿಂಗ್ , ನಿರೂಪ್ಕುಮಾರ್ ರಾಮಚಂದ್ರ, ನಾಗರತ್ನ ದೇವರಾಜ್ , ರಾಘವೇಂದ್ರ ಆರ್ಟಿಸ್ಟ್, ಶೈಲಾ ಆರ್.ಪ್ರಭು, ಉಮಾ ಸುರೇಶ್ , ರೇಖಾ ರವಿ, ಪಿ.ಜೆ.ವರ್ಗೀಸ್ ,ದಿವಾಕರ್ ಕೆದಲುಗುಡ್ಡೆ ಹಾಗೂ ಇನ್ನಿತರರು ಇದ್ದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್