Headlines

ಹುಂಚದಲ್ಲಿ ನಾಳೆ ಬೃಹತ್ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಹುಂಚದಲ್ಲಿ ನಾಳೆ ಬೃಹತ್ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಹುಂಚಾ : ಗ್ರಾಮ ಪಂಚಾಯಿತಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ಆಶ್ರಯದಲ್ಲಿ, ಪರಮಪೂಜ್ಯ ಜಗದ್ಗುರು ಸ್ವಸ್ತಿ ಶ್ರೀ ಡಾ. ದೇವೇಂದ್ರ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳ ಕೃಪಾಶೀರ್ವಾದ ಮತ್ತು ಮಾರ್ಗದರ್ಶನದಲ್ಲಿ, ಮೆಗ್ಗಾನ್‌ ಜಿಲ್ಲಾ ಆಸ್ಪತ್ರೆ ಶಿವಮೊಗ್ಗ ಸೇರಿದಂತೆ ವಿವಿಧ ಸಾಮಾಜಿಕ ಸಂಘ‧ಸಂಸ್ಥೆಗಳ ಸಹಯೋಗದಿಂದ ಸ್ವಯಂ ಪ್ರೇರಿತ ಬೃಹತ್ ರಕ್ತದಾನ ಶಿಬಿರ ನಾಳೆ (29-10-2025) ನಡೆಯಲಿದೆ.

ಶಿಬಿರವು ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 3.00 ಗಂಟೆಯವರೆಗೆ ಹುಂಚಾ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆಯಲಿದ್ದು, ಗಂಡು–ಹೆಣ್ಣು ಭೇದವಿಲ್ಲದೆ 18 ರಿಂದ 60 ವರ್ಷದೊಳಗಿನ, 50 ಕೆ.ಜಿ.ಗಿಂತ ಹೆಚ್ಚು ತೂಕದ ಆರೋಗ್ಯವಂತರು ರಕ್ತದಾನದಲ್ಲಿ ಭಾಗವಹಿಸಬಹುದು.

ರಕ್ತದಾನದ ಮೊದಲು ಉಚಿತ ಆರೋಗ್ಯ ತಪಾಸಣೆ (ಹಿಮೋಗ್ಲೋಬಿನ್, ರಕ್ತದೊತ್ತಡ ಇತ್ಯಾದಿ) ಮಾಡಲಾಗುತ್ತದೆ. ಶಿಬಿರದಲ್ಲಿ ಭಾಗವಹಿಸುವ ದಾನಿಗಳಿಗೆ ಪ್ರಶಸ್ತಿ ಪತ್ರ ವಿತರಿಸಲಾಗುವುದು.

ಅಪಘಾತ, ಶಸ್ತ್ರಚಿಕಿತ್ಸೆ ಹಾಗೂ ಹೆರಿಗೆ ಸಮಯದಲ್ಲಿ ಉಂಟಾಗುವ ತುರ್ತು ಪರಿಸ್ಥಿತಿಗಳಲ್ಲಿ ರಕ್ತದ ಅವಶ್ಯಕತೆ ಹೆಚ್ಚಾಗಿದ್ದು, ಮಾನವ ದೇಹವೇ ರಕ್ತವನ್ನು ಉತ್ಪಾದಿಸುವ ಏಕೈಕ ಮೂಲ. ರಕ್ತದಾನದಿಂದ ಅನೇಕ ಜೀವಗಳನ್ನು ಉಳಿಸಲು ಸಾಧ್ಯವಾಗುತ್ತದೆ ಎಂದು ಆಯೋಜಕರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ :

ಡಾ. ನಿತೀಶ್ ಎಚ್.ಆರ್ – 9738672240
ಸುಮಂಗಲ ದೇವರಾಜ್ – 9741651716
ನಾಗರತ್ನಮ್ಮ – 9880981858

ಗ್ರಾಮ ಪಂಚಾಯ್ತಿ ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಆರೋಗ್ಯ ಇಲಾಖೆ ಹಾಗೂ ಹಲವು ಸಂಘ ಸಂಸ್ಥೆಗಳು ಶಿಬಿರದಲ್ಲಿ ಭಾಗವಹಿಸಲು ಗ್ರಾಮಸ್ಥರಿಗೆ ಮನವಿ ಮಾಡಿದ್ದಾರೆ.