Headlines

15 ದಿನಗಳ ಹಿಂದೆ ಕಾಣೆಯಾಗಿದ್ದ ವ್ಯಕ್ತಿ ರಸ್ತೆ ಬದಿಯಲ್ಲಿ ಶವವಾಗಿ ಪತ್ತೆ

ಕಾಣೆಯಾದ ವ್ಯಕ್ತಿ ಶವವಾಗಿ ಪತ್ತೆ

ಸಾಗರ: ಹಲವು ದಿನಗಳಿಂದ ಕಾಣೆಯಾಗಿದ್ದ ವ್ಯಕ್ತಿಯೊಬ್ಬರ ಮೃತದೇಹ ರಸ್ತೆ ಪಕ್ಕದಲ್ಲಿ ಪತ್ತೆಯಾಗಿರುವ ದುರ್ಘಟನೆ ಬೆಳಕಿಗೆ ಬಂದಿದೆ. ಸಾಗರ ತಾಲೂಕಿನ ಯಲಗಳಲೆ ಗ್ರಾಮದ ಸಮೀಪ ರಸ್ತೆ ಬದಿಯಲ್ಲಿ ಪತ್ತೆಯಾದ ಶವವನ್ನು, ಜಂಬಗಾರು ಗ್ರಾಮದ ಹನುಮಂತಪ್ಪ (65) ಎಂದು ಗುರುತಿಸಲಾಗಿದೆ.

ಹನುಮಂತಪ್ಪ ಅವರು ಖಿನ್ನತೆಯಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದ್ದು, 15 ದಿನಗಳ ಹಿಂದೆ ಕಾಣೆಯಾಗಿದ್ದಾರೆಂದು ಕುಟುಂಬದವರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version