RIPPONPETE | ವಿನಾಯಕ ವೃತ್ತ ಶೀಘ್ರ ಅಗಲೀಕರಣ – ನೀಲನಕ್ಷೆ ಬಿಡುಗಡೆಗೊಳಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ

RIPPONPETE | ವಿನಾಯಕ ವೃತ್ತ ಶೀಘ್ರ ಅಗಲೀಕರಣ – ನೀಲನಕ್ಷೆ ಬಿಡುಗಡೆಗೊಳಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ

ರಿಪ್ಪನ್‌ಪೇಟೆ : ನಾಲ್ಕು ಜಿಲ್ಲೆಗಳನ್ನು ಸಂಪರ್ಕಿಸುವ ಹೃದಯಭಾಗವಾಗಿರುವ ರಿಪ್ಪನ್‌ಪೇಟೆ ವಿನಾಯಕ ಸರ್ಕಲ್ ಶೀಘ್ರದಲ್ಲೇ ಅಗಲೀಕರಣಗೊಂಡು, ಅತ್ಯಾಧುನಿಕ ಸೌಲಭ್ಯಗಳೊಂದಿಗೆ “ಮಾದರಿ ಸರ್ಕಲ್” ಆಗಿ ರೂಪಾಂತರಗೊಳ್ಳಲಿದೆ. ಈ ಸಂಬಂಧ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಲೋಕೋಪಯೋಗಿ ಮತ್ತು ಮೆಸ್ಕಾಂ ಇಲಾಖೆಯ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿ, ತಯಾರಾಗಿರುವ ನೀಲನಕ್ಷೆ (ಬ್ಲೂಪ್ರಿಂಟ್) ಅನ್ನು ಬಿಡುಗಡೆಗೊಳಿಸಿದರು.

ನಂತರ ಮಾದ್ಯಮದವರೊಂದಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಮಾತನಾಡಿ,“ಸರ್ಕಲ್ ವಿಸ್ತರಣೆ, ಬಸ್ ಶೆಲ್ಟರ್ ನಿರ್ಮಾಣ, ಬಾಕ್ಸ್ ಡ್ರೈನೇಜ್ ವ್ಯವಸ್ಥೆ, ಹೈಮಾಸ್ಟ್ ದೀಪ, ನಾಮಫಲಕ ಮತ್ತು ವಿದ್ಯುತ್ ಕಂಬಗಳ ಸ್ಥಳಾಂತರ ಸೇರಿದಂತೆ ಒಟ್ಟು ₹2 ಕೋಟಿ ರೂ. ವೆಚ್ಚದ ಕಾಮಗಾರಿಗೆ ಈಗಾಗಲೇ ಅನುಮೋದನೆ ದೊರೆತಿದ್ದು, ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ. ಮಳೆ ಕಡಿಮೆಯಾಗುತ್ತಿದ್ದಂತೆ ಕಾಮಗಾರಿ ಪ್ರಾರಂಭಗೊಳ್ಳಲಿದೆ,” ಎಂದು ತಿಳಿಸಿದರು.

ರಿಪ್ಪನ್‌ಪೇಟೆ ವಿನಾಯಕ ವೃತ್ತದ ನೀಲನಕ್ಷೆ

ಮಳೆಯಿಂದ ಹದಗೆಟ್ಟಿರುವ ಸೂಡೂರು – ರಿಪ್ಪನ್‌ಪೇಟೆ ರಸ್ತೆಯನ್ನು ಮರು ಡಾಂಬರೀಕರಣ ಮಾಡಲು ಈಗಾಗಲೇ ಹಣ ಬಿಡುಗಡೆ ಮಾಡಿದ್ದು ಟೆಂಡರ್ ಪ್ರಕ್ರಿಯೆ ಮುಗಿದಿದೆ ಮಳೆ ಕಡಿಮೆಯಾಗುತಿದ್ದಂತೆ ಕಾಮಗಾರಿ ಪ್ರಾರಂಭಿಸುತ್ತೇವೆ ಎಂದರು.

ಮುಂದಿನ ಶೈಕ್ಷಣಿಕ ವರ್ಷದಲ್ಲಿ ಕೆ.ಪಿ.ಎಸ್. ಶಾಲೆ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ರಸ್ತೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಜಾಗದಲ್ಲಿ ಸುಸಜ್ಜಿತ ಬಸ್ ನಿಲ್ದಾಣ ನಿರ್ಮಿಸುವ ಉದ್ದೇಶವಿದೆ ಎಂದರು.ವಿನಾಯಕ ಸ್ವಾಮಿ ದೇವಸ್ಥಾನದ ಹಿಂಭಾಗದಲ್ಲಿರುವ ಶಿಥಿಲಗೊಂಡ ಸಭಾಭವನ ಕೆಡವಿ, ಹೊಸ ಸಭಾಭವನ ನಿರ್ಮಾಣಕ್ಕೆ ₹25 ಲಕ್ಷ ರೂ. ಅನುದಾನ ,ದೇವಸ್ಥಾನ ಅಭಿವೃದ್ಧಿಗೂ ಶೀಘ್ರದಲ್ಲೇ ಹೆಚ್ಚಿನ ಅನುದಾನ ಬಿಡುಗಡೆ ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಹೊಸನಗರ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಮೌಳಿ, ಉಪಾಧ್ಯಕ್ಷ ಉಬೇದುಲ್ಲಾ ಷರೀಫ್, ಹೋಬಳಿ ಘಟಕದ ಅಧ್ಯಕ್ಷ ಗಣಪತಿ ಗವಟೂರು, ಎ.ಪಿ.ಎಂ.ಸಿ. ಅಧ್ಯಕ್ಷ ಈಶ್ವರಪ್ಪಗೌಡ ಹಾರೋಹಿತ್ತಲು, ಡಿ.ಈ. ಮಧುಸೂಧನ್, ಆಶೀಫ್‌ಭಾಷಾ, ನಿರೂಪ್ ಕುಮಾರ್, ರವೀಂದ್ರ ಕೆರೆಹಳ್ಳಿ, ಪ್ರಕಾಶ್ ಪಾಲೇಕರ್, ಧನಲಕ್ಷ್ಮಿ, ವಿನೋಧ, ಅನುಪಮ ಹಾಗೂ ಸಂಬಂಧಿತ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

38 minutes ago

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

18 hours ago

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…

18 hours ago

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…

20 hours ago

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

2 days ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

2 days ago