ಮಗಳನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದು, ಆಕೆಯ ಮೃತದೇಹದ ಮೇಲೆ ನಿಂತು ನೇಣಿಗೆ ಶರಣಾದ ತಾಯಿ
ಶಿವಮೊಗ್ಗ: ನಗರದ ಮೆಗ್ಗಾನ್ ಆಸ್ಪತ್ರೆಯ ನರ್ಸಿಂಗ್ ಕ್ವಾಟ್ರಸ್ನಲ್ಲಿ ನಡೆದ ದಾರುಣ ಘಟನೆ ಮಲೆನಾಡನ್ನು ಬೆಚ್ಚಿಬೀಳಿಸುವಂತಿದೆ.ಹೌದು ಸ್ವಂತ ತಾಯಿಯೇ ತನ್ನ ಮಗಳನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದು ನಂತರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಆರನೇ ತರಗತಿಯಲ್ಲಿ ಓದುತ್ತಿದ್ದ ಪುತ್ರಿ ಪೂರ್ವಿಕಾಳ(12) ತಲೆಗೆ ತಾಯಿ ಶೃತಿ (38) ಮಚ್ಚಿನಿಂದ ಹೊಡೆದು ಕೊಲೆಮಾಡಿದ್ದಾರೆ. ಬಳಿಕ ಮಗಳ ಶವವನ್ನು ಪ್ಯಾನ್ ಕೆಳಗೆ ಎಳೆದು ತಂದು ಅದೇ ಶವದ ಮೇಲೆ ನಿಂತು ಪ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಶೃತಿ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದರು ಎಂಬುದು ಕುಟುಂಬ ಮೂಲಗಳಿಂದ ತಿಳಿದುಬಂದಿದೆ. ಘಟನೆಯ ಸಮಯದಲ್ಲಿ ಗಂಡ ಆಸ್ಪತ್ರೆಯಲ್ಲಿ ನೈಟ್ ಶಿಫ್ಟ್ ಕರ್ತವ್ಯದಲ್ಲಿದ್ದು, ಬೆಳಿಗ್ಗೆ ಮನೆಗೆ ಬಂದು ನೀಡಿದಾಗ ವಿಷಯ ತಿಳಿದುಬಂದಿದೆ.
ತಾಯಿ-ಮಗಳ ಮೃತದೇಹವನ್ನು ಒಂದೇ ಮನೆಯಲ್ಲಿ ಪಕ್ಕಪಕ್ಕದಲ್ಲಿ ಕಂಡ ನೆರೆಹೊರೆಯವರ ಕುಟುಂಬಸ್ಥರ ನೋವು ಹೇಳಲು ಶಬ್ದಗಳೇ ಸಾಲದಂತಿದೆ..
ಈ ಘಟನೆ ಮೆಗ್ಗಾನ್ ಕ್ವಾಟ್ರಸ್ ಮಾತ್ರವಲ್ಲ, ಸಂಪೂರ್ಣ ಶಿವಮೊಗ್ಗದ ಹೃದಯವನ್ನು ನಡುಗಿಸಿದೆ. ಬದುಕಿನ ಒತ್ತಡ, ಮಾನಸಿಕ ನೋವು ಹೇಗೆ ಜೀವಗಳನ್ನು ಕಸಿದುಕೊಳ್ಳುತ್ತದೆ ಎಂಬುದಕ್ಕೆ ಇದು ಕರುಣಾಜನಕ ಸಾಕ್ಷಿಯಾಗಿದೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್