ಲಯನ್ ಸಫಾರಿ ಬಳಿ ಪಿಕಪ್ ವಾಹನ ಅಪಘಾತ – ಓರ್ವ ಸಾವು , ಮೂವರು ಗಂಭೀರ !!ಜ಼್
ಚಾಲಕನ ನಿಯಂತ್ರಣ ತಪ್ಪಿದ ಕಾರು ಡಿವೈಡರ್ ಗೆ ಡಿಕ್ಕಿಯಾದ ಪರಿಣಾಮ ಓರ್ವ ವ್ಯಕ್ತಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಸಮೀಪದ ಲಯನ್ ಸಫಾರಿ ಬಳಿ ನಡೆದಿರುವ ಬಗ್ಗೆ ವರದಿಯಾಗಿದೆ.
ಆಯನೂರು ಕಡೆಯಿಂದ ಶಿವಮೊಗ್ಗಕ್ಕೆ ತೆರಳುತಿದ್ದ ಪಿಕಪ್ ವಾಹನ ಲಯನ್ ಸಫಾರಿ ಸಮೀಪದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿಯಾಗಿ ಪಲ್ಟಿಯಾದ ಪರಿಣಾಮ ಓರ್ವ ಸ್ಥಳದಲ್ಲಿಯೇ ಸಾವನ್ನಪಿದ್ದು , ವಾಹನದಲ್ಲಿದ್ದ ಮೂವರಿಗೆ ಗಂಭೀರ ಗಾಯಗಳಾಗಿದ್ದು ಸ್ಥಳೀಯರು ಮೆಗ್ಗಾನ್ ಗೆ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.
ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ.
