ಮಣಿಪಾಲ ಆರೋಗ್ಯ ಕಾರ್ಡ್ 2025 ರ ನೋಂದಣಿ ಪ್ರಾರಂಭ

ಮಣಿಪಾಲ ಆರೋಗ್ಯ ಕಾರ್ಡ್ 2025 ರ ನೋಂದಣಿ ಪ್ರಾರಂಭ

ರಿಪ್ಪನಪೇಟೆ, 9 ಅಕ್ಟೋಬರ್  2025: ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ ) ಮಣಿಪಾಲವು ಕರ್ನಾಟಕ ಮತ್ತು ನೆರೆಯ ರಾಜ್ಯಗಳಾದ್ಯಂತ ಲಕ್ಷಾಂತರ ಕುಟುಂಬಗಳಿಗೆ ಕೈಗೆಟುಕುವ ದರದಲ್ಲಿ ಆರೋಗ್ಯ ಸೇವೆಯನ್ನು ಒದಗಿಸುತ್ತಿರುವ ಮಣಿಪಾಲ ಆರೋಗ್ಯ ಕಾರ್ಡ್ 2025 ರ ನೋಂದಣಿ ಪ್ರಾರಂಭಿಸಿರುವುದಾಗಿ, ಮಾಹೆ ಮಣಿಪಾಲದ ಸಹ ಕುಲಾಧಿಪತಿ ಡಾ. ಎಚ್.ಎಸ್. ಬಲ್ಲಾಳರು ಘೋಷಿಸಿದ್ದಾರೆ.   ಈ ಮೂಲಕ  ಗ್ರಾಮೀಣ ಭಾರತಕ್ಕೆ ಆರೋಗ್ಯ ಸೇವೆ  ಲಭ್ಯವಾಗುವಂತೆ ಮಾಡುವ ಧ್ಯೇಯವನ್ನು ಹೊಂದಿದ್ದ ಮಣಿಪಾಲ್ ಸಂಸ್ಥೆಯ ಸಂಸ್ಥಾಪಕ ಡಾ. ಟಿ.ಎಂ.ಎ. ಪೈ ಅವರ ದೂರದೃಷ್ಟಿಯ ನಾಯಕತ್ವವನ್ನು  ನೆನಪಿಸಿದರು .”ಮಾಹೆ ಕುಲಾಧಿಪತಿ ಡಾ. ರಾಮದಾಸ್ ಎಂ. ಪೈ ಅವರ ಮಾರ್ಗದರ್ಶನದಲ್ಲಿ 2000 ರಲ್ಲಿ ಪ್ರಾರಂಭಿಸಲಾದ ಮಣಿಪಾಲ ಆರೋಗ್ಯ ಕಾರ್ಡ್ ಯೋಜನೆಯು ಈಗ ರಜತ  ಮಹೋತ್ಸವದ ಮೈಲಿಗಲ್ಲನ್ನು ತಲುಪಿದೆ. 25 ವರ್ಷಗಳಲ್ಲಿ, ಇದು ಕೋಟ್ಯಂತರ ಫಲಾನುಭವಿಗಳ ಜೀವನವನ್ನು ಮುಟ್ಟಿದೆ ಎಂದಿದ್ದಾರೆ .

2000 ನೇ ಇಸವಿಯಲ್ಲಿ, 3,200 ಕುಟುಂಬಗಳು  ಮಣಿಪಾಲ ಆರೋಗ್ಯಕಾರ್ಡ್ ಯೋಜನೆಯಡಿ  ನೋಂದಣಿ ಮಾಡಿದ್ದರು. ಕಳೆದ ಹಣಕಾಸು ವರ್ಷದಲ್ಲಿ ನಾವು 1.25 ಲಕ್ಷ ಕುಟುಂಬಗಳು  ಈ ಯೋಜನೆಗಳ ಅಡಿಯಲ್ಲಿನೋಂದಣಿ ಮಾಡಿಕೊಂಡಿದ್ದಾರೆ  ಮತ್ತು ನಾವು ಈ ಯೋಜನೆಯಡಿಯಲ್ಲಿ 6.72 ಲಕ್ಷ ಸದಸ್ಯರನ್ನು ಹೊಂದಿದ್ದೇವೆ. ಕರ್ನಾಟಕ ಮತ್ತು ನೆರೆಯ ರಾಜ್ಯಗಳಾದ್ಯಂತ ಲಕ್ಷಾಂತರ ಕುಟುಂಬಗಳಿಗೆ ಪ್ರಯೋಜನವನ್ನು ನೀಡುತ್ತಿದೆ.

ವೈದ್ಯಕೀಯ ಅಧೀಕ್ಷಕ , ಡಾ ಅವಿನಾಶ್ ಶೆಟ್ಟಿ ಅವರು, ಒಂದು ವರ್ಷ ಮತ್ತು ಎರಡು ವರ್ಷಗಳ ಸದಸ್ಯತ್ವ ಆಯ್ಕೆಗಳನ್ನು ನೀಡುತ್ತಿದ್ದೇವೆ. ಬೆಲೆಯು ಸಮಾಜದ ಎಲ್ಲಾ ವರ್ಗಗಳಿಗೆ ಕೈಗೆಟುಕುವಿಕೆಯನ್ನು ಖಚಿತಪಡಿಸುತ್ತದೆ. ಸಣ್ಣ ಮೊತ್ತವನ್ನು ಪಾವತಿಸುವ ಮೂಲಕ, ಯಾರಾದರೂ ಸದಸ್ಯರಾಗಬಹುದು ಮತ್ತು ಪ್ರಯೋಜನಗಳನ್ನು ಪಡೆಯಬಹುದು. “ಸಂಪೂರ್ಣ ಕುಟುಂಬಕ್ಕಾಗಿ ಶ್ರೇಷ್ಠ ಮೌಲ್ಯ ಮತ್ತು ವಿಶ್ವಾಸಾರ್ಹ ಸೇವೆ” ಎಂಬುದು ಮಣಿಪಾಲ್ ಆರೋಗ್ಯಕಾರ್ಡ್ ನ ದ್ಯೇಯ ವಾಕ್ಯ.

ಸದಸ್ಯತ್ವ ವಿವರಗಳು:

ಮಣಿಪಾಲ್ ಆರೋಗ್ಯ ಕಾರ್ಡ್ 2025ರ  ಯೋಜನೆಯು “ಒಂದು  ವರ್ಷದ ಯೋಜನೆಯಲ್ಲಿ ಕಾರ್ಡಿನ ಸದಸ್ಯತ್ವವು ಒಬ್ಬರಿಗೆ ₹ 350 / -, ಕೌಟಂಬಿಕ ಕಾರ್ಡ್ ಅಂದರೆ ಕಾರ್ಡುದಾರ, ಅವರ ಸಂಗಾತಿ, 25 ವರ್ಷದ ಒಳಗಿನ ಮಕ್ಕಳಿಗೆ     ₹ 700/- ಮತ್ತು ಕುಟುಂಬ ಪ್ಲಸ್ ಯೋಜನೆಗೆ ಅಂದರೆ ಕಾರ್ಡುದಾರ, ಅವರ ಸಂಗಾತಿ, 25 ವರ್ಷದ ಒಳಗಿನ ಮಕ್ಕಳು ಮತ್ತು      4 ಪೋಷಕರು (ತಂದೆ, ತಾಯಿ, ಅತ್ತೆ ಮತ್ತು ಮಾವ) ₹ 900/-. ಇದೊಂದು ಹೆಚ್ಚುವರಿ ಲಾಭವಾಗಿದೆ. 2 ವರ್ಷದ ಯೋಜನೆಯಲ್ಲಿ ಒಬ್ಬರಿಗೆ ₹ 600/-, ಕುಟುಂಬಕ್ಕೆ ₹ 950/- ಮತ್ತು ಕೌಟಂಬಿಕ ಪ್ಲಸ್ ಯೋಜನೆಗೆ ₹ 1100/- ಆಗಿರುತ್ತದೆ.

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಕಾರ್ಡ್‌ದಾರರಿಗೆ ರಿಯಾಯಿತಿ  ಪ್ರಯೋಜನಗಳು:

• ತಜ್ಞ ಮತ್ತು ಸೂಪರ್-ಸ್ಪೆಷಲಿಸ್ಟ್ ಸಮಾಲೋಚನೆ ಶುಲ್ಕಗಳಲ್ಲಿ 50% ರಿಯಾಯಿತಿ (ಓ ಪಿ ಡಿ ದಿನಗಳು)

• ರೋಗನಿರ್ಣಯ ಮತ್ತು ಪ್ರಯೋಗಾಲಯ ಪರೀಕ್ಷೆಗಳ ಮೇಲೆ 25% ರಿಯಾಯಿತಿ

• ರೇಡಿಯಾಲಜಿ, ಓ ಪಿ ಡಿ ಕಾರ್ಯವಿಧಾನಗಳು ಮತ್ತು ಮಧುಮೇಹ ಪಾದದ ಆರೈಕೆಯ ಮೇಲೆ 20% ರಿಯಾಯಿತಿ

• ಡಯಾಲಿಸಿಸ್‌ನಲ್ಲಿ ₹100 ರಿಯಾಯಿತಿ

• ಆಸ್ಪತ್ರೆ  ಔಷಧಿಗಳ ಮೇಲೆ 10% ವರೆಗೆ ರಿಯಾಯಿತಿ

• ಸಾಮಾನ್ಯ ವಾರ್ಡ್ ಒಳರೋಗಿಗಳ ಬಿಲ್‌ಗಳಲ್ಲಿ 25% ರಿಯಾಯಿತಿ (ಉಪಭೋಗ್ಯ ವಸ್ತುಗಳು ಮತ್ತು ಪ್ಯಾಕೇಜ್‌ಗಳನ್ನು ಹೊರತುಪಡಿಸಿ) ನೀಡಲಾಗುತ್ತದೆ ಎಂದಿದ್ದಾರೆ.

ಕಾರ್ಡ್‌ದಾರರು ಕಸ್ತೂರ್ಬಾ  ಆಸ್ಪತ್ರೆ-ಮಣಿಪಾಲ, ಡಾ.ಟಿಎಂಎ ಪೈ ಆಸ್ಪತ್ರೆ-ಉಡುಪಿ, ಡಾ.ಟಿಎಂಎ ಪೈ ರೋಟರಿ ಆಸ್ಪತ್ರೆ-ಕಾರ್ಕಳ, ಕೆಎಂಸಿ ಆಸ್ಪತ್ರೆ-ಮಂಗಳೂರು ಮತ್ತು ಅತ್ತಾವರ, ದುರ್ಗಾ ಸಂಜೀವನಿ ಮಣಿಪಾಲ ಆಸ್ಪತ್ರೆ-ಕಟೀಲು, ಮಣಿಪಾಲ ಆಸ್ಪತ್ರೆ-ಗೋವಾ ಮತ್ತು ಮಣಿಪಾಲ ಹಾಗೂ ಮಂಗಳೂರಿನಲ್ಲಿನ  ದಂತ ಕಾಲೇಜುಗಳಲ್ಲಿ ಪ್ರಯೋಜನಗಳನ್ನು ಪಡೆಯಬಹುದು. ಮಣಿಪಾಲ ಮತ್ತು ಮಂಗಳೂರಿನಲ್ಲಿ ಇತರ ಆಸ್ಪತ್ರೆಗಳಲ್ಲಿನ ರಿಯಾಯಿತಿಗಳು ಮತ್ತು ಹೆಚ್ಚಿನ ಮಾಹಿತಿಗಾಗಿ, www.manipalhealthcard.com ಗೆ ಭೇಟಿ ನೀಡಿ ಅಥವಾ 9980854700 / 08202923748 ಅನ್ನು ಸಂಪರ್ಕಿಸಿ. ಎಲ್ಲಾ ನಮ್ಮ ಅಧಿಕೃತ ಪ್ರತಿನಿಧಿಗಳ ಮೂಲಕ ನೋಂದಣಿ ಮಾಡಬಹುದು.

ಪತ್ರಿಕಾಗೋಷ್ಟಿಯಲ್ಲಿ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಮಾರುಕಟ್ಟೆ ವಿಭಾಗದ ವ್ಯವಸ್ಥಾಪಕರಾದ ಶ್ರೀ ಮೋಹನ್ ಶೆಟ್ಟಿ ಹಾಗೂ ಪ್ರತಿನಿಧಿಯಾದ ಶ್ರೀ ಅನಿಲ್ ಇವರೆಲ್ಲರೂ ಉಪಸ್ಥಿತರಿದ್ದರು.

2025ರ ನೋಂದಾವಣಿಗಾಗಿ ಅರ್ಜಿಗಳು ಕೆಳಕಂಡ ಅಧಿಕೃತ ಪ್ರತಿನಿಧಿಗಳ ಬಳಿ ಲಭ್ಯವಿದೆ:

ಶ್ರೀಕಂಠ – 9483016851, ಶಾಂತಮೂರ್ತಿ – 9448787820, ಷಣ್ಮುಖಪ್ಪ – 9591866656, ಕೃಷ್ಣಮೂರ್ತಿ – 8762148359, ಶಾರದ ವಿವಿಧೋದ್ದೇಶ ಸಹಕಾರಿ ನಿಯಮಿತ – 9480285636, ಪಿಯೂಸ್ ರೊಡ್ರಿಗಸ್ – 9448914656, ಬಾಲಕೃಷ್ಣ ಬಿ ಕೆ – 9448914636, ಸುಕೇಶ್ ಕುಮಾರ್ – 9481308538, ತಸ್ವೀರ್ ಅಹಮದ್ – 8277789762

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಡವೆ ಬೇಟೆ ಮಾಡಿ ಮಾಂಸ ಕತ್ತರಿಸುತ್ತಿದ್ದಾಗಲೇ ದಾಳಿ! ಮೂವರ ಬಂಧನ | 70 ಕೆ.ಜಿ. ಮಾಂಸ , ಬಂದೂಕು ಜಪ್ತಿ

ಕಡವೆ ಬೇಟೆ ಮಾಡಿ ಮಾಂಸ ಕತ್ತರಿಸುತ್ತಿದ್ದಾಗಲೇ ದಾಳಿ! ಮೂವರ ಬಂಧನ | 70 ಕೆ.ಜಿ. ಮಾಂಸ , ಬಂದೂಕು ಜಪ್ತಿ…

6 hours ago

ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ

ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ One-month skill development training on bakery product preparation…

23 hours ago

ತೀರ್ಥಹಳ್ಳಿ ಪೊಲೀಸ್ ಠಾಣೆಯ ಗಣಪತಿ ವಿಸರ್ಜನೆ ; ಚಂಡೆ ಸದ್ದಿಗೆ ಡಿವೈಎಸ್‌ಪಿ ಭಾನುಪ್ರಕಾಶ್, ಸಿಪಿಐ ಇಮ್ರಾನ್ ಹೆಜ್ಜೆ

ತೀರ್ಥಹಳ್ಳಿ ಪೊಲೀಸ್ ಠಾಣೆಯ ಗಣಪತಿ ವಿಸರ್ಜನೆ ; ಚಂಡೆ ಸದ್ದಿಗೆ ಡಿವೈಎಸ್‌ಪಿ ಭಾನುಪ್ರಕಾಶ್, ಸಿಪಿಐ ಇಮ್ರಾನ್ ಹೆಜ್ಜೆ Thirthahalli police…

1 day ago

ಕೋಡೂರು ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ : ಲಕ್ಷಾಂತರ ರೂ. ನಷ್ಟ

ಕೋಡೂರು ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ : ಲಕ್ಷಾಂತರ ರೂ. ನಷ್ಟ House fire reported at Keelambi…

1 day ago

ಶಾಸಕರ ಜೊತೆ ಟ್ರಾಫಿಕ್ ಪೊಲೀಸರ ಡ್ಯಾನ್ಸ್; ವಿಡಿಯೋ ವೈರಲ್, ಇಬ್ಬರ ವರ್ಗಾವಣೆ

ಶಾಸಕರ ಜೊತೆ ಟ್ರಾಫಿಕ್ ಪೊಲೀಸರ ಡ್ಯಾನ್ಸ್; ವಿಡಿಯೋ ವೈರಲ್, ಇಬ್ಬರ ವರ್ಗಾವಣೆ Two traffic police personnel in Shivamogga…

1 day ago

ಬಾವಿಗೆ ಬಿದ್ದು ನಿವೃತ್ತ ಕುಲಪತಿ ಪ್ರೊ. ಎಂ.ಕೆ. ನಾಯ್ಕ್ ಸಾವು

ಬಾವಿಗೆ ಬಿದ್ದು ನಿವೃತ್ತ ಕುಲಪತಿ ಪ್ರೊ. ಎಂ.ಕೆ. ನಾಯ್ಕ್ ಸಾವು Retired Vice Chancellor Prof. M.K. Naik, 63,…

1 day ago