ಕ್ರಿಪ್ಟೋ ಟ್ರೇಡಿಂಗ್ ನೆಪದಲ್ಲಿ ಶಿವಮೊಗ್ಗ ಯುವಕನಿಗೆ ₹2.66 ಲಕ್ಷ ವಂಚನೆ
ಶಿವಮೊಗ್ಗ: ಕ್ರಿಪ್ಟೋ ಕರೆನ್ಸಿ ಹೂಡಿಕೆಯಲ್ಲಿ ಹೆಚ್ಚಿನ ಲಾಭಾಂಶದ ಆಮಿಷವೊಡ್ಡಿ, ಶಿವಮೊಗ್ಗದ ಯುವಕನೊಬ್ಬನಿಂದ ₹2,66,069 ಹಣ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಯುವಕ ಶಿವಮೊಗ್ಗದ ಸಿಇಎನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಮಾಹಿತಿಯ ಪ್ರಕಾರ, ಅಕ್ಟೋಬರ್ 2ರಂದು ದೂರುದಾರರ ಮೊಬೈಲ್‌ಗೆ ಅಪರಿಚಿತ ಸಂಖ್ಯೆಯಿಂದ ಸಂದೇಶವೊಂದು ಬಂದಿದೆ. ತಮ್ಮನ್ನು “Live Trading” ಕಂಪನಿಯ ಪ್ರತಿನಿಧಿಗಳೆಂದು ಪರಿಚಯಿಸಿಕೊಂಡ ವಂಚಕರು, ಕ್ರಿಪ್ಟೋ ಕರೆನ್ಸಿಯಲ್ಲಿ ಹೂಡಿಕೆ ಮಾಡಿದರೆ ಹೆಚ್ಚು ಲಾಭ ನೀಡುವುದಾಗಿ ಭರವಸೆ ನೀಡಿದ್ದಾರೆ.
ಲಾಭಾಂಶದ ಆಮಿಷಕ್ಕೆ ಒಳಗಾದ ದೂರುದಾರರು ಹಂತ ಹಂತವಾಗಿ ಒಟ್ಟು ₹2,66,069 ಹಣವನ್ನು ವಂಚಕರ ಖಾತೆಗೆ ವರ್ಗಾಯಿಸಿದ್ದಾರೆ. ಆದರೆ ಬಳಿಕ ವಂಚಕರು ಯಾವುದೇ ಲಾಭ ನೀಡದೆ, ಸಂಪರ್ಕವನ್ನೇ ಕಳೆದುಕೊಂಡಿದ್ದಾರೆ.
ಈ ಘಟನೆ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಸೈಬರ್ ಅಪರಾಧಗಳ ಬಗ್ಗೆ ಜನರು ಎಚ್ಚರಿಕೆಯಿಂದ ಇರಬೇಕೆಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್‌ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…