Headlines

ರೌಡಿಸಂ ಚಟುವಟಿಕೆ  ನಿಗ್ರಹಕ್ಕೆ  ಪೊಲೀಸ್ ಅಧಿಕಾರಿಗಳಿಗೆ ಎಸ್ಪಿ  ಸೂಚನೆ

ರೌಡಿಸಂ ಚಟುವಟಿಕೆ  ನಿಗ್ರಹಕ್ಕೆ  ಪೊಲೀಸ್ ಅಧಿಕಾರಿಗಳಿಗೆ ಎಸ್ಪಿ  ಸೂಚನೆ

ಶಿವಮೊಗ್ಗ : , ಅಕ್ಟೋಬರ್ 10: ‘ರೌಡಿಸಂ ಚಟುವಟಿಕೆ ಮಟ್ಟ ಹಾಕಬೇಕು. ಕಾನೂನುಬಾಹಿರ ಕೃತ್ಯಗಳಲ್ಲಿ ಭಾಗಿಯಾಗುವ ರೌಡಿ ಆಸಾಮಿಗಳ ವಿರುದ್ದ ಕ್ರಮಕೈಗೊಳ್ಳಬೇಕು’ ಎಂದು ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಜಿ ಕೆ ಮಿಥುನ್ ಕುಮಾರ್ ಅವರು ಪೊಲೀಸ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.

ನಗರದ ಡಿಎಆರ್ ಸಭಾಂಗಣದಲ್ಲಿ ಜಿಲ್ಲೆಯ ಎಲ್ಲ ಪೊಲೀಸ್ ಉಪ ವಿಭಾಗಗಳ ಡಿವೈಎಸ್ಪಿ, ಇನ್ಸ್’ಪೆಕ್ಟರ್, ಸಬ್ ಇನ್ಸ್’ಪೆಕ್ಟರ್ ಗಳೊಂದಿಗೆ ನಡೆಸಿದ ಅಪರಾಧ ವಿಮರ್ಶನಾ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.

ಕಾನೂನು – ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ, ಅಪರಾಧ ಚಟುವಟಿಕೆ ಘಟಿಸುವುದಕ್ಕೂ ಮುನ್ನವೇ ಮಾಹಿತಿ ಸಂಗ್ರಹಿಸಲು ಅಗತ್ಯ ಕ್ರಮಕೈಗೊಳ್ಳಬೇಕು. ಸಂಘಟಿತ ಅಪರಾಧಗಳ ನಿಯಂತ್ರಣಕ್ಕೆ ನಿಯಮಿತವಾಗಿ ದಾಳಿ ನಡೆಸಿ, ಪ್ರಕರಣಗಳನ್ನು ದಾಖಲಿಸಬೇಕು ಎಂದು ತಿಳಿಸಿದ್ದಾರೆ.

ವಿಳಂಬಕ್ಕೆ ಆಸ್ಪದವಾಗದಂತೆ, ಕಾಲಮಿತಿಯೊಳಗೆ ಅಪರಾಧ ಪ್ರಕರಣಗಳ ತನಿಖೆ ಪೂರ್ಣಗೊಳಿಸಬೇಕು. ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸುವ ಕಾರ್ಯ ನಡೆಸಬೇಕು ಎಂದು ಇದೇ ವೇಳೆ ಪೊಲೀಸ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಎ ಜಿ ಕಾರ್ಯಪ್ಪ, ರಮೇಶ್ ಕುಮಾರ್, ಸಾಗರ ಉಪ ವಿಭಾಗದ ಎಎಸ್ಪಿ ಬೆನಕ ಪ್ರಸಾದ್, ಡಿಎಆರ್ ಡಿವೈಎಸ್ಪಿ ದಿಲೀಪ್, ಶಿವಮೊಗ್ಗ ಎ ಉಪ ವಿಭಾಗದ ಡಿವೈಎಸ್ಪಿ ಬಾಬು ಆಂಜನಪ್ಪ,ಶಿವಮೊಗ್ಗ ಬಿ ಉಪ ವಿಭಾಗದ ಡಿವೈಎಸ್ಪಿ ಸಂಜೀವ್ ಕುಮಾರ್, ಭದ್ರಾವತಿ ಉಪ ವಿಭಾಗದ ಡಿವೈಎಸ್ಪಿ ನಾಗರಾಜ್, ತೀರ್ಥಹಳ್ಳಿ ಉಪ ವಿಭಾಗದ ಡಿವೈಎಸ್ಪಿ ಅರವಿಂದ್ ಕಲಗುಜ್ಜಿ, ಸಿಇಎನ್ ಠಾಣೆ ಡಿವೈಎಸ್ಪಿ ಕೃಷ್ಣಮೂರ್ತಿ ಸೇರಿದಂತೆ ಮೊದಲಾದವರಿದ್ದರು.

Exit mobile version