ಗವಿಸಿದ್ಧೇಶ್ವರ ಕೃಪೆಗಾಗಿ ಹಿಂದೂ-ಮುಸ್ಲಿಂ ಸಮಾನ ಉಪವಾಸ ವ್ರತಾಚರಣೆ | ತಾಂಬಾದಲ್ಲಿ ಜಾತ್ರೆಯ ಸೌಹಾರ್ದ ಸ್ಪಂದನ

ತಾಂಬಾ ಗ್ರಾಮದ ಗವಿಸಿದ್ಧೇಶ್ವರ ದೇವರ ಕೃಪೆಗೆ ಪಾತ್ರರಾಗಲು ಹಿಂದೂ ಮತ್ತು ಮುಸ್ಲಿಂ ಸಮುದಾಯದ ಭಕ್ತರು ಜಾತಿ-ಧರ್ಮ ಬದಿಗೊತ್ತಿ ಒಂದು ತಿಂಗಳು ಉಪವಾಸ ವ್ರತಾಚರಣೆಯನ್ನು ಮುಕ್ತಾಯಗೊಳಿಸಿದರು.

ವಿಜಯಪುರ ಜಿಲ್ಲೆಯ ತಾಂಬಾ ಗ್ರಾಮದಲ್ಲಿ ಪ್ರತಿ ವರ್ಷ ದೀಪಾವಳಿ ಅಮಾವಾಸ್ಯೆಯಂದು ತಾಂಬಾ ಗ್ರಾಮದ ಗವಿಸಿದ್ಧೇಶ್ವರ ದೇವರ ಮತ್ತು ಮಹಾಲಕ್ಷ್ಮೀಯ ಜಾತ್ರಾ ಮಹೋತ್ಸವವೂ ನಡೆಯಲಿದ್ದು, ಎರಡೂ ದೇವರ ಜಾತ್ರೆ ಒಟ್ಟಿಗೆ ನಡೆಯುವುದು ವಿಶೇಷ.

ಗವಿಸಿದ್ಧೇಶ್ವರ ಮತ್ತು ಮಹಾಲಕ್ಷ್ಮೀಯ ಮೇಲೆ ಹಿಂದೂ ಮತ್ತು ಮುಸ್ಲಿಂ ಸಮುದಾಯದ ಭಕ್ತರ ಅಪಾರ ನಂಬಿಕೆ, ಸುತ್ತಮುತ್ತಲಿನ ಗ್ರಾಮಗಳ ಜನರು ಸಹ ದೇವರಿಗೆ ತಮ್ಮ ಇಷ್ಟಾರ್ಥ ನೆರವೇರಿಕೆಗಾಗಿ ಹರಕೆ ಹೊತ್ತುಕೊಳ್ಳುವುದು ಇಲ್ಲಿ ಸಹಜ. ಇದಕ್ಕೆ ಜಾತಿ ಮತ್ತು ಧರ್ಮದ ಹಂಗಿಲ್ಲ. ಬಯಕೆ ಈಡೇರಿಕೆಗಾಗಿ ಮಹಾನವಮಿ ಅಮಾವಾಸ್ಯೆಯಿಂದ ದೀಪಾವಳಿ ಅಮಾವಾಸ್ಯೆಯವರೆಗೂ ಹಿಂದೂ ಮತ್ತು ಮುಸ್ಲಿಂ ಸಮುದಾಯದ ಭಕ್ತರು ಉಪವಾಸ ವ್ರತಾಚರಣೆ ನಡೆಸುತ್ತಾರೆ.

ಗ್ರಾಮದ ಪ್ರತಿ ಮನೆಯಲ್ಲಿ ಒಬ್ಬರಾದರೂ ಉಪವಾಸ ವ್ರತ ಆಚರಿಸುತ್ತಾರೆ. ಮುಸ್ಲಿಂ ಧರ್ಮದವರು ಸಹ ತಮ್ಮ ಇಷ್ಟಾರ್ಥ ಈಡೇರಿಕೆಗಾಗಿ ಗವಿಸಿದ್ಧೇಶ್ವರ ದೇವರ ಜಾತ್ರಾ ಸಮಯದಲ್ಲಿ ಉಪವಾಸ ವ್ರತ ಕೈಗೊಳ್ಳುತ್ತಾರೆ. ಉಪವಾಸ ವ್ರತಾಚರಣೆಯನ್ನು ಭಕ್ತರು ಕಟ್ಟುನಿಟ್ಟಿನಿಂದ ಆಚರಿಸುತ್ತಾರೆ. ನಸುಕಿನಲೇ ಚಹಾ ಕುಡಿದರೆ, ಮತ್ತೆ ಏನನ್ನೂ ತಿನ್ನುವುದಿಲ್ಲ. ತುಂಬಾ ದಾಹವಾದರೆ ನೀರನ್ನಷ್ಟೇ ಕುಡಿಯುತ್ತಾರೆ. ರಾತ್ರಿ ಯಷ್ಟೇ ಒಂದು ಹೊತ್ತು ಊಟ ಅಥವಾ ಫಲಾಹಾರ ಸೇವಿಸುತ್ತಾರೆ ಎಂದು ಗ್ರಾಮದ ಗವಿಸಿದ್ಧೇಶ್ವರ ದೇವರ ಆರಾಧಕ ಜೆ.ಆರ್.ಪೂಜಾರಿ ತಿಳಿಸಿದರು.

ಮಹಾಲಕ್ಷ್ಮೀ ಮತ್ತು ಗವಿಸಿದ್ಧೇಶ್ವರ ದೇವರ ಮುಕ್ತಿ ಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಒಂದು ತಿಂಗಳ ಉಪವಾಸ ವ್ರತ ಕೈಬಿಟ್ಟರು. ಮುಕ್ತಿ ಮಂದಿರದಲ್ಲಿ ಪ್ರಸಾದ ಸ್ವೀಕರಿಸಿದ ಭಕ್ತರು ಸಂತೃಪ್ತಿ ವ್ಯಕ್ತಪಡಿಸಿದರು. ಮುಕ್ತಿ ಮಂದಿರದಲ್ಲಿ ವಿಶಿಷ್ಟ ಪೂಜೆ ನಡೆದವು. ದೇವರ ನಾಮಸ್ಮರಣೆ, ಡೊಳ್ಳು ಕುಣಿತ, ಭಜನೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಈ ಕಾರ್ಯಕ್ರಮದ ಅಂಗವಾಗಿ ಸಜ್ಜೆಗಡುಬು, ಬಾಳೆಹಣ್ಣು, ಅಂಬಲಿ ಸಜ್ಜಕವನ್ನು ಸವಿದರು.

ದಸರಾ-ದೀಪಾವಳಿ ನಡುವೆ ವ್ರತಾಚರಣೆ

ವ್ರತಾಚರಣೆಯಲ್ಲಿ ತೊಡಗಿದವರು ಕಾಲಿಗೆ ಪಾದರಕ್ಷೆ ತೊಡಲ್ಲ. ಪಾದರಕ್ಷೆ ಹಾಕಿಕೊಂಡವರು ಅಪ್ಪ ತಪ್ಪಿ ಮುಟ್ಟಿದರೆ ಅಂದು ನೀರನ್ನು ಕುಡಿಯಲ್ಲ. ಮತ್ತೊಮ್ಮೆ ಝಳಕ ಮಾಡಿದ ಬಳಿಕ ದೇವರಿಗೆ ಪೂಜೆ ಸಲ್ಲಿಸಿಯೋ ಮುಂದುವರೆಯಲಿದ್ದಾರೆ ಎಂದು ಹೇಳಿದರು. ಗವಿಸಿದ್ಧೇಶ್ವರನ ಸಂಪ್ರೀತಿಗಾಗಿ ಮಹಾನವಮಿ ಅಮಾವಾಸ್ಯೆಯಿಂದ ದೀಪಾವಳಿ ಅಮಾವಾಸ್ಯೆಯವರೆಗೂ ಕಟ್ಟು ನಿಟ್ಟಿನಿಂದ ವ್ರತಾಚರಣೆ ನಡೆಸಿದ ಭಕ್ತ ಸಮೂಹ ದೀಪಾವಳಿ ಅಮಾವಾಸ್ಯೆಯಂದು ಮುಕ್ತಿ ಮಂದಿರದಲ್ಲಿ ದೇವರ ದರ್ಶನ ಪಡೆದು ಜಾತ್ರಾ ಮಹೋತ್ಸವದಲ್ಲಿ ಭಾಗಿಯಾಗಿ ದೇವರಿಗೆ ನಮಿಸಿದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ A man identified…

1 day ago

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು SSLC student Krishna drowned while swimming in Tunga Channel…

1 day ago

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ Shivamogga witnessed a grand and peaceful Eid Milad procession…

1 day ago

ಹುಂಚ ಆಸ್ಪತ್ರೆಯ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ

ಹುಂಚ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ Postman News report brings action on…

1 day ago

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ Two accused persons were…

1 day ago

ಬೀದಿ ನಾಯಿಗಳ ದಾಳಿಗೆ ಆರು ಕುರಿ ಮರಿಗಳು ಸಾವು

ಬೀದಿ ನಾಯಿಗಳ ದಾಳಿ: ಆರು ಕುರಿಗಳು ಸಾವು Six sheep belonging to a resident of Sagar were…

1 day ago