Headlines

ಆನೆ ದಾಳಿಯಿಂದ ಹಾನಿಗೊಳಗಾದ ರೈತರಿಗೆ ಸಾಂತ್ವಾನ ಹೇಳಿದ ವೀರೇಶ್ ಆಲವಳ್ಳಿ – ಶಾಶ್ವತ ಪರಿಹಾರಕ್ಕೆ ಆಗ್ರಹಿಸಿ ಅರಣ್ಯ ಕಚೇರಿ ಮುಂಭಾಗ ಧರಣಿ ಎಚ್ಚರಿಕೆ

ಆನೆ ದಾಳಿಯಿಂದ ಹಾನಿಗೊಳಗಾದ ರೈತರಿಗೆ ಸಾಂತ್ವಾನ ಹೇಳಿದ ವೀರೇಶ್ ಆಲವಳ್ಳಿ – ಶಾಶ್ವತ ಪರಿಹಾರಕ್ಕೆ ಆಗ್ರಹಿಸಿ ಅರಣ್ಯ ಕಚೇರಿ ಮುಂಭಾಗ ಧರಣಿ ಎಚ್ಚರಿಕೆ

ಹೊಸನಗರ ತಾಲ್ಲೂಕಿನ ಕೆರೆಹಳ್ಳಿ ಹೋಬಳಿಯ ಬಸವಾಪುರ ಸೇರಿದಂತೆ ಹಲವಾರು ಗ್ರಾಮಗಳಲ್ಲಿ ಆನೆ ದಾಳಿಯಿಂದ ರೈತರ ಬೆಳೆಗಳು ನಾಶವಾಗಿರುವ ಹಿನ್ನೆಲೆಯಲ್ಲಿ, ಹೊಸನಗರ ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ವೀರೇಶ್ ಆಲವಳ್ಳಿ ಅವರು ಸ್ಥಳಕ್ಕೆ ಭೇಟಿ ನೀಡಿ ಹಾನಿಗೊಳಗಾದ ರೈತರನ್ನು ಭೇಟಿಯಾಗಿ ಸಾಂತ್ವಾನ ಹೇಳಿದರು.

ಈ ಸಂದರ್ಭದಲ್ಲಿ ಅವರು ಮಾತನಾಡಿ, “ಅರಣ್ಯ ಇಲಾಖೆ ತಕ್ಷಣ ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡಬೇಕು. ಆನೆಗಳ ಅಟ್ಟಹಾಸದಿಂದ ಜನಜೀವನ ಅಸ್ತವ್ಯಸ್ತವಾಗಿದ್ದು, ಅವುಗಳನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸುವ ಶಾಶ್ವತ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

ಆನೆ ಹಾವಳಿಯಿಂದ ತತ್ತರಿಸಿರುವ ಹೊಸನಗರ ತಾಲ್ಲೂಕಿನ ಗ್ರಾಮಗಳಿಗೆ ಶಾಶ್ವತ ಪರಿಹಾರ ಒದಗಿಸುವಂತೆ ಆಗ್ರಹಿಸಿ, ಸಂಸದ ಬಿ.ವೈ. ರಾಘವೇಂದ್ರ, ಮಾಜಿ ಸಚಿವರು ಹರತಾಳು ಹಾಲಪ್ಪ, ಶಾಸಕ ಆರಗ ಜ್ಞಾನೇಂದ್ರ, ಮಾಜಿ ಸಚಿವರು ಬಿ.ಸ್ವಾಮಿರಾವ್, ಟಿ.ಡಿ. ಮೇಘರಾಜ್, ಹಾಗೂ ಹೊನಗೋಡು ರತ್ನಾಕರ್ ಅವರ ನೇತೃತ್ವದಲ್ಲಿ ಶೀಘ್ರದಲ್ಲೇ ಅರಸಾಳು ವಲಯ ಅರಣ್ಯಾಧಿಕಾರಿ ಕಚೇರಿ ಮುಂಭಾಗದಲ್ಲಿ ರೈತರೊಂದಿಗೆ ಧರಣಿ ಹಮ್ಮಿಕೊಳ್ಳುವ ಯೋಜನೆ ಇದೆ ಎಂದು ವೀರೇಶ್ ಆಲವಳ್ಳಿ ತಿಳಿಸಿದ್ದಾರೆ.