ಆನೆ ದಾಳಿಯಿಂದ ಹಾನಿಗೊಳಗಾದ ರೈತರಿಗೆ ಸಾಂತ್ವಾನ ಹೇಳಿದ ವೀರೇಶ್ ಆಲವಳ್ಳಿ – ಶಾಶ್ವತ ಪರಿಹಾರಕ್ಕೆ ಆಗ್ರಹಿಸಿ ಅರಣ್ಯ ಕಚೇರಿ ಮುಂಭಾಗ ಧರಣಿ ಎಚ್ಚರಿಕೆ
ಹೊಸನಗರ ತಾಲ್ಲೂಕಿನ ಕೆರೆಹಳ್ಳಿ ಹೋಬಳಿಯ ಬಸವಾಪುರ ಸೇರಿದಂತೆ ಹಲವಾರು ಗ್ರಾಮಗಳಲ್ಲಿ ಆನೆ ದಾಳಿಯಿಂದ ರೈತರ ಬೆಳೆಗಳು ನಾಶವಾಗಿರುವ ಹಿನ್ನೆಲೆಯಲ್ಲಿ, ಹೊಸನಗರ ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ವೀರೇಶ್ ಆಲವಳ್ಳಿ ಅವರು ಸ್ಥಳಕ್ಕೆ ಭೇಟಿ ನೀಡಿ ಹಾನಿಗೊಳಗಾದ ರೈತರನ್ನು ಭೇಟಿಯಾಗಿ ಸಾಂತ್ವಾನ ಹೇಳಿದರು.
ಈ ಸಂದರ್ಭದಲ್ಲಿ ಅವರು ಮಾತನಾಡಿ, “ಅರಣ್ಯ ಇಲಾಖೆ ತಕ್ಷಣ ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡಬೇಕು. ಆನೆಗಳ ಅಟ್ಟಹಾಸದಿಂದ ಜನಜೀವನ ಅಸ್ತವ್ಯಸ್ತವಾಗಿದ್ದು, ಅವುಗಳನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸುವ ಶಾಶ್ವತ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.
ಆನೆ ಹಾವಳಿಯಿಂದ ತತ್ತರಿಸಿರುವ ಹೊಸನಗರ ತಾಲ್ಲೂಕಿನ ಗ್ರಾಮಗಳಿಗೆ ಶಾಶ್ವತ ಪರಿಹಾರ ಒದಗಿಸುವಂತೆ ಆಗ್ರಹಿಸಿ, ಸಂಸದ ಬಿ.ವೈ. ರಾಘವೇಂದ್ರ, ಮಾಜಿ ಸಚಿವರು ಹರತಾಳು ಹಾಲಪ್ಪ, ಶಾಸಕ ಆರಗ ಜ್ಞಾನೇಂದ್ರ, ಮಾಜಿ ಸಚಿವರು ಬಿ.ಸ್ವಾಮಿರಾವ್, ಟಿ.ಡಿ. ಮೇಘರಾಜ್, ಹಾಗೂ ಹೊನಗೋಡು ರತ್ನಾಕರ್ ಅವರ ನೇತೃತ್ವದಲ್ಲಿ ಶೀಘ್ರದಲ್ಲೇ ಅರಸಾಳು ವಲಯ ಅರಣ್ಯಾಧಿಕಾರಿ ಕಚೇರಿ ಮುಂಭಾಗದಲ್ಲಿ ರೈತರೊಂದಿಗೆ ಧರಣಿ ಹಮ್ಮಿಕೊಳ್ಳುವ ಯೋಜನೆ ಇದೆ ಎಂದು ವೀರೇಶ್ ಆಲವಳ್ಳಿ ತಿಳಿಸಿದ್ದಾರೆ.
ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ A man identified…
ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು SSLC student Krishna drowned while swimming in Tunga Channel…
ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ Shivamogga witnessed a grand and peaceful Eid Milad procession…
ಹುಂಚ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ Postman News report brings action on…
ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ Two accused persons were…
ಬೀದಿ ನಾಯಿಗಳ ದಾಳಿ: ಆರು ಕುರಿಗಳು ಸಾವು Six sheep belonging to a resident of Sagar were…