ಶಿವಮೊಗ್ಗ: ನಗರದ ಮಹಿಳೆಯೊಬ್ಬರು ಹೆಚ್ಚು ಹಣ ಗಳಿಸುವ ಉದ್ದೇಶದಿಂದ ಪಾರ್ಟ್ ಟೈಮ್ ಜಾಬ್ನ ಆಸೆಗೆ ಬಿದ್ದು ಸುಮಾರು 6,78,100 ರೂಪಾಯಿ ಹಣವನ್ನು ಕಳೆದುಕೊಂಡಿದ್ದಾರೆ.
ನಗರದ ಉದ್ಯಮಿ ಮಹಿಳೆಯೊಬ್ಬರು ಆನ್ಲೈನ್ನಲ್ಲಿ ಬಂದಿದ್ದ ಪಾರ್ಟ್ ಟೈಮ್ ಕೆಲಸದ ಆಮಿಷಕ್ಕೆ ಬಲಿಯಾಗಿ ಕೇವಲ 5 ದಿನಗಳ ಅಂತರದಲ್ಲಿ ಬರೋಬ್ಬರಿ ₹6,78,100 ರೂಪಾಯಿ ಹಣವನ್ನು ಕಳೆದುಕೊಂಡಿರುವ ಘಟನೆ ವರದಿಯಾಗಿದೆ. ದೂರಿನ ಪ್ರಕಾರ, ಅಪರಿಚಿತ ವಂಚಕರು ಎನ್ಎಸ್ಇ (NSE) ಕಂಪನಿಯ ಉದ್ಯೋಗಿಗಳಂತೆ ನಟಿಸಿದ್ದಾರೆ. ನಂತರ ಮಹಿಳೆಗೆ ಎನ್ಎಸ್ಇ ಕಂಪನಿಯಲ್ಲಿ ಪಾರ್ಟ್ ಟೈಮ್ ಉದ್ಯೋಗ ನೀಡುವುದಾಗಿ ಭರವಸೆ ನೀಡಿದ್ದು, ಅಷ್ಟೇ ಅಲ್ಲದೆ, ಎನ್ಎಸ್ಇ ಕಂಪನಿಯಿಂದ ನೀಡಲಾಗುವ ಕೆಲವು ಟಾಸ್ಕ್ಗಳನ್ನು ಪೂರ್ಣಗೊಳಿಸಿದರೆ ಭಾರೀ ಪ್ರಮಾಣದ ಲಾಭಾಂಶ ನೀಡುವುದಾಗಿ ನಂಬಿಸಿದ್ದಾರೆ.
ವಂಚಕರ ಮಾತನ್ನು ನಂಬಿದ ಮಹಿಳೆಯು ಸೆಪ್ಟೆಂಬರ್ 24, 2025 ರಿಂದ ಸೆಪ್ಟೆಂಬರ್ 29, 2025ರ ಅವಧಿಯೊಳಗೆ ಒಟ್ಟು 6,78,100 ಹಣವನ್ನು ವಂಚಕರ ಖಾತೆಗಳಿಗೆ ವರ್ಗಾಯಿಸಿದ್ದಾರೆ. ಹಣ ವರ್ಗಾಯಿಸಿದ ನಂತರ, ವಂಚಕರು ಅವರಿಗೆ ಯಾವುದೇ ಲಾಭಾಂಶವನ್ನು ಹಿಂತಿರುಗಿಸಿಲ್ಲ. ಅಲ್ಲದೆ, ಮೊತ್ತವನ್ನು ಸಹ ಮರಳಿ ನೀಡದೇ ಮೋಸ ಮಾಡಿದ್ದಾರೆ. ತಮಗೆ ವಂಚನೆಯಾಗಿರುವುದನ್ನು ಅರಿತ ಮಹಿಳೆಯು ಶಿವಮೊಗ್ಗ ಸಿಇಎನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿದ್ದಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್