ರಿಪ್ಪನ್ ಪೇಟೆ : 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರೋಪ ಸಮಾರಂಭ

ರಿಪ್ಪನ್ ಪೇಟೆ : 72ನೇ ಅಖಿಲ ಭಾರತ ಸಹಕಾರ ಸಪ್ತಾಹ – ಸಮಾರೋಪ ಸಮಾರಂಭ

ಸಹಕಾರ ಸಂಘಗಳು ಗ್ರಾಮೀಣ ಜನರಿಗೆ ಉಪಯುಕ್ತವಾಗಿದೆ: ಆರ್. ಎಂ. ಮಂಜುನಾಥ್ ಗೌಡ

ರಿಪ್ಪನ್ ಪೇಟೆ : ಪಟ್ಟಣದ ವಿಶ್ವಮಾನವ ಒಕ್ಕಲಿಗರ ಸಭಾಭವನದಲ್ಲಿ ನವೆಂಬರ್  20ರಂದು 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭವನ್ನು ವಿಜೃಂಭಣೆಯಿಂದ  ಆಚರಿಸಲಾಯಿತು.

ಪಟ್ಟಣದ ಕೃಷಿ ಪತ್ತಿನ ಸಹಕಾರ ಸಂಘ ಸಭಾಭವನದಲ್ಲಿ  ಗುರುವಾರ ನಡೆದ  ಕಾರ್ಯಕ್ರಮವನ್ನು  ಮಲೆನಾಡು ಅಭಿವೃದ್ಧಿ ಮಂಡಳಿ ಅಧ್ಯಕ್ಷ  ಡಾ. ಆರ್. ಎಂ. ಮಂಜುನಾಥ್ ಗೌಡ   ಉದ್ಘಾಟಿಸಿ ಮಾತನಾಡಿ ಗ್ರಾಮೀಣ ಮಟ್ಟದಿಂದ ರಾಷ್ಟ್ರ ಮಟ್ಟದ ವರೆಗೂ ಸಹಕಾರ ಕ್ಷೇತ್ರದ ಕೊಡುಗೆ ಅಪಾರವಾಗಿದೆ. ಸಹಕಾರ ವ್ಯವಸ್ಥೆ  ಬಹುಮುಖ ವಲಯವಾಗಿದ್ದು. ಜನ ಸಾಮಾನ್ಯ ರು  ಈ ವಲಯದ ಮೇಲೆ ಅವಲಂಬಿತ ರಾಗಿದ್ದಾರೆ, ಸಹಕಾರ ಸಂಘಗಳಲ್ಲಿ ಗ್ರಾಮೀಣ ಭಾಗದ ಜನರಿಗೆ ಉಪಯುಕ್ತ ಸೇವೆಯನ್ನು    ನೀಡುವ ಮೂಲಕ ಜನರ ಸೇವೆಯಲ್ಲಿ ನಿರತವಾಗಿದೆ.  ಸದಸ್ಯರ ಮತ್ತು ರೈತರ ಆರ್ಥಿಕ ವ್ಯವಸ್ಥೆ ಜೀವನಾಡಿಯಾಗಿ ಕೆಲಸ ನಿರ್ವಹಿಸುವ ಮುಖಾಂತರ ರೈತರ ಕಾಮಧೇನು ಕಲ್ಪವೃಕ್ಷವಾಗಿದೆ ಎಂದರು.

ಶಿಮೂಲ್ ಅಧ್ಯಕ್ಷ ಹೆಚ್. ಎನ್. ವಿದ್ಯಾಧರ ‘ಸಹಕಾರ ಸಪ್ತಾಹ’ದ  ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು.

ಕೆಐಸಿಎಮ್ ಪ್ರಭಾರ ಉಪನ್ಯಾಸಕಿ ಟಿ. ಸರಸ್ವತಿ ವಿಶೇಷ ಉಪನ್ಯಾಸ ನೀಡಿದರು.

ಈ ಸಂದರ್ಭದಲ್ಲಿ ರಾಜ್ಯ ಹಾಲು ಒಕ್ಕೂಟದ ನಿರ್ದೇಶಕರಾಗಿ ಆಯ್ಕೆಯಾದ ಡಾ. ಆರ್.ಎಂ. ಮಂಜುನಾಥ್ ಗೌಡ, ಹಾಗೂ ಸಹಕಾರ ರತ್ನ ಪ್ರಶಸ್ತಿಗೆ ಭಾಜನರಾದ ಎಂ.ಎಂ. ಪರಮೇಶ್, ಎಸ್.ಕೆ. ಮರಿಯಪ್ಪ ಮತ್ತು ಕೆ.ಎನ್. ರಾಮಕೃಷ್ಣರ ಸನ್ಮಾನ ಕಾರ್ಯಕ್ರಮ ಜರಗಿತು.

ಶಿವಮೊಗ್ಗ ಸಹಕಾರ ಹಾಲು ಒಕ್ಕೂಟ (ಶಿಮೂಲ್), ಸಹಕಾರ ಇಲಾಖೆ ಹಾಗೂ ಹೊಸನಗರ ತಾಲೂಕಿನ ಎಲ್ಲಾ ಸಹಕಾರ ಸಂಘ-ಬ್ಯಾಂಕುಗಳ ಸಂಯುಕ್ತ ಆಶ್ರಯದಲ್ಲಿ ಸಮಾರೋಪ  ಸಮಾರಂಭ ಅದ್ದೂರಿಯಾಗಿ ನೆರವೇರಿತು

ಜಿಲ್ಲಾ ಕೇಂದ್ರ ಬ್ಯಾಂಕಿನ ನಿರ್ದೇಶಕರುಗಳಾದ — ಎಸ್.ಕೆ. ಮರಿಯಪ್ಪ,  ಎಂ.ಎಂ. ಪರಮೇಶ್, ಕೆ.ಎನ್. ರಾಮಕೃಷ್ಣ, ಜಿ.ಎನ್. ಸುಧೀರ್, ಕೃಷ್ಣಮೂರ್ತಿ, ಕೆ.ವಿ. ಧರ್ಮೇಂದ್ರ, ಎಚ್. ಮಧುಸೂದನ್, ಎಸ್. ನಾವುಡ, ಹೆಚ್.ಬಿ. ಕಲ್ಯಾಣಪ್ಪ ಗೌಡ, ಎಂ.ವಿ. ಜಯರಾಮ್, ದಿನೇಶ್ ಬರದವಳ್ಳಿ, ಶ್ವೇತಾ ಬಂಡಿ, ನರಸಿಂಹ ಗೌಡ, ಪ್ರಮೀಳಾ ಲಕ್ಷ್ಮಣ ಗೌಡ, ಸುಮಾ ಸುಬ್ರಮಣ್ಯ, ಹೆಚ್. ನಾಗರಾಜ್, ಎಚ್.ಪಿ. ನಂಜುಂಡಪ್ಪ, ಜಯಶೀಲಪ್ಪ ಗೌಡ,  ಕೆ. ವಿ. ಕೃಷ್ಣಮೂರ್ತಿ ಸೇರಿದಂತೆ ಅನೇಕ ಸಹಕಾರ ಸಂಘಗಳ ಅಧ್ಯಕ್ಷರು-ನಿರ್ದೇಶಕರು-ಸದಸ್ಯರು  ಕಾರ್ಯಕ್ರಮ ದಲ್ಲಿ ಹಾಜರಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ವಾಟಗೋಡು ಸುರೇಶ್ ವಹಿಸಿದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ A man identified…

1 day ago

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು SSLC student Krishna drowned while swimming in Tunga Channel…

1 day ago

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ Shivamogga witnessed a grand and peaceful Eid Milad procession…

1 day ago

ಹುಂಚ ಆಸ್ಪತ್ರೆಯ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ

ಹುಂಚ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ Postman News report brings action on…

1 day ago

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ Two accused persons were…

1 day ago

ಬೀದಿ ನಾಯಿಗಳ ದಾಳಿಗೆ ಆರು ಕುರಿ ಮರಿಗಳು ಸಾವು

ಬೀದಿ ನಾಯಿಗಳ ದಾಳಿ: ಆರು ಕುರಿಗಳು ಸಾವು Six sheep belonging to a resident of Sagar were…

1 day ago