ಯುರೋಪಿನಲ್ಲಿ ” ಶ್ರೀಗಂಧ ರತ್ನ” ಪ್ರಶಸ್ತಿಗೆ ಭಾಜನರಾದ ಮಾಸ್ತಿಕಟ್ಟೆಯ ಅಜೀತ್ ಪ್ರಭು
ಹೊಸನಗರ ತಾಲೂಕಿನ ಮಾಸ್ತಿಕಟ್ಟೆ ಗ್ರಾಮದ ಅಜೀತ್ ಪ್ರಭು ಅವರಿಗೆ ಯುರೋಪಿನ ನೆದರ್ಲಾಂಡ್ಸ್ ದೇಶದ ಐಂದೊವನ್ ನಗರದ ಶ್ರೀಗಂಧ ಹಾಲ್ಯಾಂಡ್ ಕನ್ನಡ ಬಳಗವು ಪ್ರತಿ ವರ್ಷ ಕನ್ನಡ ರಾಜ್ಯೋತ್ಸವ ಆಚರಿಸುವ ಸಂದರ್ಭದಲ್ಲಿ ಯುರೋಪಿನಾದ್ಯಂತ ಕನ್ನಡ ಕಲೆ ಮತ್ತು ಸಂಸ್ಕೃತಿಗೆ ಮಹತ್ವದ ಕೊಡುಗೆ ನೀಡುತ್ತಿರುವ ಕನ್ನಡಿಗರನ್ನು ಗುರುತಿಸಿ ಶ್ರೀಗಂಧ ರತ್ನ ಎಂಬ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.
2025 ರಲ್ಲಿ ಈ ಗೌರವವನ್ನು ಯಕ್ಷಗಾನ ಕ್ಷೇತ್ರದಲ್ಲಿ ನಿಸ್ವಾರ್ಥ ಸೇವೆಯನ್ನ ಸಲ್ಲಿಸುತ್ತಿರುವ ಶ್ರೀ ಅಜೀತ್ ಪ್ರಭು ತಲ್ಲೂರು ಅವರನ್ನ ಗುರುತಿಸಿ ನೀಡಲಾಗಿದೆ.
ಅಜೀತ್ ಪ್ರಭು ಮಾಸ್ತಿಕಟ್ಟೆ ಅವರು 2017 ರಿಂದ ಜರ್ಮನಿಯ ಫ್ರ್ಯಾಂಕ್ಫರ್ಟ್ ನಗರದಲ್ಲಿ ನೆಲೆಯಾಗಿದ್ದು. ವೃತ್ತಿಯಲ್ಲಿ ಜರ್ಮನಿಯ ಪ್ರತಿಷ್ಟಿತ ಬ್ಯಾಂಕ್ ಒಂದರಲ್ಲಿ ಸೀನಿಯರ್ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಹಾಗೆ ವೃತ್ತಿ ಜೀವನದ ಬಿಡುವಿನ ಸಮಯದಲ್ಲಿ ಹವ್ಯಾಸಿ ಯಕ್ಷಗಾನ ಕಲಾವಿದರಾಗಿ ಯುರೋಪಿನ ವಿವಿಧ ದೇಶಗಳಲ್ಲಿ ಯಕ್ಷಗಾನ ಪ್ರದರ್ಶನ ಮತ್ತು ಕಲೆಯ ಪ್ರಚಾರ–ಪ್ರಸಾರದಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದಾರೆ. ತಮ್ಮ ಬಿಡುವಿನ ಸಮಯದಲ್ಲಿ 20 ಕ್ಕೂ ಹೆಚ್ಚು ಯಕ್ಷಗಾನ ಆಸಕ್ತರಿಗೆ ಶಾಸ್ತ್ರೀಯವಾಗಿ ಯಕ್ಷಗಾನವನ್ನು ಕಲಿಸಿ ವಿದೇಶದಲ್ಲೂ ಭಾರತೀಯ ಸಾಂಸ್ಕೃತಿಕ ಪರಂಪರೆಯನ್ನು ಪರಿಚಯಿಸುವ ಕಾರ್ಯವನ್ನು ಮಾಡುತ್ತಿದ್ದಾರೆ. ಅವರ ಈ ಕಾರ್ಯಕ್ಕೆ ಹೊಸನಗರ ತಾಲೂಕಿನ ಯಕ್ಷಗಾನ ಕಲಾ ಪ್ರಿಯರು ಅಭಿನಂದಿಸಿದ್ದಾರೆ.
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್‌ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…