ಮಹಿಳಾ ಸಹೋದ್ಯೋಗಿನಿ ಮೇಲೆ ಬ್ಯಾಂಕ್ ಅಧಿಕಾರಿಯ ಅಸಭ್ಯ ವರ್ತನೆ – ಪ್ರಕರಣ ದಾಖಲು
ಶಿವಮೊಗ್ಗ : ಬ್ಯಾಂಕಿನ ಮಹಿಳಾ ಸಿಬ್ಬಂದಿಯೊಬ್ಬರು ಅದೇ ಬ್ಯಾಂಕಿನ ಹಿರಿಯ ಅಧಿಕಾರಿ ಮತ್ತು ಸಿಬ್ಬಂದಿ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ದಾಖಲಾದ ಪ್ರಕರಣವನ್ನು ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆ ವರ್ಗಾಯಿಸಲಾಗಿದೆ.
ಬ್ಯಾಂಕ್ ಒಂದರ ಶಿವಮೊಗ್ಗ ಶಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಸಿಬ್ಬಂದಿಗೆ ಬ್ಯಾಂಕಿನ ಹಿರಿಯ ಅಧಿಕಾರಿಯೊಬ್ಬರು ಲೈಂಗಿಕ ದೌರ್ಜನ್ಯ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಕಚೇರಿ ಕೆಲಸಕ್ಕೆ ಒಬ್ಬರನ್ನೇ ಕರೆಯುವುದು, ಮೈ ಸವರುವುದನ್ನು ಮಾಡಿದ್ದರು ಎಂದು ಆರೋಪಿಸಲಾಗಿದೆ.
ಬ್ಯಾಂಕಿನ ವ್ಯವಹಾರ ಸಂಬಂಧ ಮೀಟಿಂಗ್ ಎಂದು ಶಿವಮೊಗ್ಗದ ಹೊಟೇಲ್ ಒಂದಕ್ಕೆ ಕರೆಯಿಸಿಕೊಂಡು ದೇಹ ಸ್ಪರ್ಶಿಸಿ ಅಸಭ್ಯವಾಗಿ ವರ್ತಿಸಿದ್ದಾರೆ. ಇದೇ ರೀತಿ ಮೂರು ಬಾರಿ ಮಾಡಿದ್ದಾರೆ ಎಂದು ಮಹಿಳೆ ದೂರಿನಲ್ಲಿ ಆರೋಪಿಸಿದ್ದಾರೆ. ಇನ್ನು, ಮತ್ತೊಬ್ಬ ಸಿಬ್ಬಂದಿ ಜೊತೆಗೆ ಸಂಬಂಧ ಕಟ್ಟಿ ಬ್ಯಾಂಕಿನ ಉಳಿದ ಕೆಲವು ಸಿಬ್ಬಂದಿ ತನ್ನ ಮಾನಕ್ಕೆ ಕುಂದುಂಟು ಮಾಡಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ. ದೊಡ್ಡಪೇಟೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್