w
Headlines
Home » ಹೆಂಡತಿಗೆ ಜೀವ ಬೆದರಿಕೆ ಹಾಕಿದ್ದ ಪತಿಗೆ 1 ವರ್ಷ ಕಾರಾಗೃಹ ಶಿಕ್ಷೆ ವಿಧಿಸಿದ ಕೋರ್ಟ್

ಹೆಂಡತಿಗೆ ಜೀವ ಬೆದರಿಕೆ ಹಾಕಿದ್ದ ಪತಿಗೆ 1 ವರ್ಷ ಕಾರಾಗೃಹ ಶಿಕ್ಷೆ ವಿಧಿಸಿದ ಕೋರ್ಟ್

Images (1) (11)

ಹೆಂಡತಿಗೆ ಜೀವ ಬೆದರಿಕೆ ಹಾಕಿದ್ದ ಪತಿಗೆ 1 ವರ್ಷ ಕಾರಾಗೃಹ ಶಿಕ್ಷೆ ವಿಧಿಸಿದ ಕೋರ್ಟ್

ಶಿವಮೊಗ್ಗ : ತನ್ನ ಹೆಂಡತಿಗೆ ಜೀವ ಬೆದರಿಕೆ ಹಾಕಿ ಮನೆಯಿಂದ ಹೊರಹಾಕಿದ್ದ ಪತಿ ಗೆ ಒಂದು ವರ್ಷ ಕಾರಾಗೃಹ ಶಿಕ್ಷೆ ವಿಧಿಸಿ ಶಿವಮೊಗ್ಗ ಕೋರ್ಟ್ ತೀರ್ಪು ನೀಡಿದೆ.

ಭದ್ರಾವತಿ ತಾಲೂಕಿನ ಗುಂಡೇರಿ ಕ್ಯಾಂಪ್ ನಿವಾಸಿ ಹರೀಶ್ ಎಂಬಾತ 2018 ರಲ್ಲಿ ಮದುವೆಯಾಗಿದ್ದ ಹೆಂಡತಿಗೆ ಕಿರುಕುಳ ನೀಡಿ ಮನೆಯಿಂದ ಹೊರಹಾಕಿದ್ದ. ನಂತರ ಮತ್ತೆ ಮನೆಗೆ ಬಂದಾಗ ಆಕೆಗೆ ಜೀವ ಬೆದರಿಕೆ ಹಾಕಿ ಮನೆಯಿಂದ ಹೊರಹಾಕಿದ್ದ.

ಈ ಸಂಬಂಧ ಶಿವಮೊಗ್ಗ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಆರೋಪ ಸಾಬೀತಾದ ಹಿನ್ನೆಲೆ ಶಿವಮೊಗ್ಗ 2 ನೇ ಜೆಎಂಎಫ್ ಸಿ ನ್ಯಾಯಾಲಯ ಆರೋಪಿ ಹರೀಶನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 1 ಸಾವಿರ ದಂಡ ವಿಧಿಸಿ ನ್ಯಾಯಾಧೀಶರಾದ ಸಿದ್ದರಾಜು ಎನ್.ಕೆ. ರವರು ತೀರ್ಪು ನೀಡಿದ್ದಾರೆ.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.