POSTMAN NEWS

ನೈಜ ಸುದ್ದಿ ನೇರ ಬಿತ್ತರ..

ಡಿ ಕೆ ಶಿವಕುಮಾರ್‌ಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕು : ಹೊಸನಗರ ಒಕ್ಕಲಿಗರ ಸಂಘ ಆಗ್ರಹ

Dks (1)

ಡಿ ಕೆ ಶಿವಕುಮಾರ್‌ಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕು : ಹೊಸನಗರ ಒಕ್ಕಲಿಗರ ಸಂಘ ಆಗ್ರಹ

ರಿಪ್ಪನ್ ಪೇಟೆ : ಹೊಸನಗರ ತಾಲ್ಲೂಕು ಒಕ್ಕಲಿಗರ ಸಂಘವು ಡಿ.ಕೆ. ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡುವಂತೆ ಕಾಂಗ್ರೆಸ್ ವರಿಷ್ಠರಿಗೆ ಆಗ್ರಹಿಸಿದೆ.

ಪತ್ರಿಕಾ ಪ್ರಕಟಣೆ ಹೊರಡಿಸಿರುವ ಹೊಸನಗರ ತಾಲೂಕ್ ಒಕ್ಕಲಿಗ ಸಂಘದ ನಾಯಕರು, ಸುಮಾರು 40 ವರ್ಷಗಳಿಂದ ಕಾಂಗ್ರೆಸ್ ಪಕ್ಷಕ್ಕಾಗಿ ಶ್ರಮಿಸಿ, ಸಂಘಟನೆ ಬಲಪಡಿಸಿ 136 ಸ್ಥಾನಗಳನ್ನು ಗೆಲ್ಲುವ ಮೂಲಕ ಪಕ್ಷವನ್ನು ಅಧಿಕಾರಕ್ಕೆ ತಂದ ಡಿ ಕೆ ಶಿವಕುಮಾರ್ ಮುಖ್ಯಮಂತ್ರಿ ಹುದ್ದೆ ನೀಡದೇ ಕಡೆಗಣಿಸಬಾರದೆಂದು ಹೇಳಿದರು.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಒಕ್ಕಲಿಗ ಸಮುದಾಯ ಕಾಂಗ್ರೆಸ್‌ಗೆ ದೊಡ್ಡ ಮಟ್ಟದಲ್ಲಿ ಬೆಂಬಲ ನೀಡಿದ್ದು, ಪಕ್ಷ ಅಧಿಕಾರಕ್ಕೆ ಬರಲು ಸಹಕಾರಿಯಾಗಿದ್ದರೆಂದು ಸಂಘ ತಿಳಿಸಿದೆ. ಅಹಮದ್ ಪಟೇಲ್ ರಾಜ್ಯಸಭೆಗೆ ಆಯ್ಕೆಯಾಗಲು ಡಿ.ಕೆ. ಶಿವಕುಮಾರ್ ಮಹತ್ವದ ಪಾತ್ರ ವಹಿಸಿ, ಅದಕ್ಕಾಗಿ ಜೈಲು ವಾಸವನ್ನೂ ಅನುಭವಿಸಿದ್ದನ್ನು ಅವರು ನೆನಪಿಸಿದರು.

ಪಕ್ಷಕ್ಕೆ ನಿಷ್ಠೆಯಿಂದ ಸೇವೆ ಸಲ್ಲಿಸಿದ ಶಿವಕುಮಾರ್ ಅವರಿಗೆ ನೀಡಿದ್ದ ಮಾತಿನಂತೆ ಮುಖ್ಯಮಂತ್ರಿ ಸ್ಥಾನ ನೀಡಿ ಗೌರವಿಸಬೇಕೆಂದು ಒಕ್ಕಲಿಗರ ಸಂಘ ಒತ್ತಾಯ ಮಾಡಿದೆ.

ಸಂಘದ ಅಧ್ಯಕ್ಷ ಎಂ.ಬಿ. ಲಕ್ಷ್ಮಣಗೌಡ, ಗೌರವಾಧ್ಯಕ್ಷ ಹರೀಶ್ ಹೆಚ್.ವಿ., ಉಪಾಧ್ಯಕ್ಷರು ಎಂ.ಎಂ. ಪರಮೇಶ್, ವಜ್ರಾಕ್ಷಮ್ಮ, ಕಾರ್ಯದರ್ಶಿ ಇ.ಡಿ. ಮಂಜುನಾಥ ಕಲ್ಲೂರು, ಸಹಕಾರ್ಯದರ್ಶಿ ಬಿ.ಎಚ್. ಷಣ್ಮುಖಪ್ಪಗೌಡ, ಹೆಚ್.ವೈ. ಸಂತೋಷಕುಮಾರ್, ಖಜಾಂಚಿ ಟಿ.ಎಂ. ಕೃಷ್ಣಮೂರ್ತಿ ಸೇರಿದಂತೆ ಹಲವರು ಪತ್ರಿಕಾ ಪ್ರಕಟಣೆ ಮೂಲಕ ಒತ್ತಾಯಿಸಿದ್ದಾರೆ

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.