ಡಿ ಕೆ ಶಿವಕುಮಾರ್‌ಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕು : ಹೊಸನಗರ ಒಕ್ಕಲಿಗರ ಸಂಘ ಆಗ್ರಹ
ರಿಪ್ಪನ್ ಪೇಟೆ : ಹೊಸನಗರ ತಾಲ್ಲೂಕು ಒಕ್ಕಲಿಗರ ಸಂಘವು ಡಿ.ಕೆ. ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡುವಂತೆ ಕಾಂಗ್ರೆಸ್ ವರಿಷ್ಠರಿಗೆ ಆಗ್ರಹಿಸಿದೆ.
ಪತ್ರಿಕಾ ಪ್ರಕಟಣೆ ಹೊರಡಿಸಿರುವ ಹೊಸನಗರ ತಾಲೂಕ್ ಒಕ್ಕಲಿಗ ಸಂಘದ ನಾಯಕರು, ಸುಮಾರು 40 ವರ್ಷಗಳಿಂದ ಕಾಂಗ್ರೆಸ್ ಪಕ್ಷಕ್ಕಾಗಿ ಶ್ರಮಿಸಿ, ಸಂಘಟನೆ ಬಲಪಡಿಸಿ 136 ಸ್ಥಾನಗಳನ್ನು ಗೆಲ್ಲುವ ಮೂಲಕ ಪಕ್ಷವನ್ನು ಅಧಿಕಾರಕ್ಕೆ ತಂದ ಡಿ ಕೆ ಶಿವಕುಮಾರ್ ಮುಖ್ಯಮಂತ್ರಿ ಹುದ್ದೆ ನೀಡದೇ ಕಡೆಗಣಿಸಬಾರದೆಂದು ಹೇಳಿದರು.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಒಕ್ಕಲಿಗ ಸಮುದಾಯ ಕಾಂಗ್ರೆಸ್‌ಗೆ ದೊಡ್ಡ ಮಟ್ಟದಲ್ಲಿ ಬೆಂಬಲ ನೀಡಿದ್ದು, ಪಕ್ಷ ಅಧಿಕಾರಕ್ಕೆ ಬರಲು ಸಹಕಾರಿಯಾಗಿದ್ದರೆಂದು ಸಂಘ ತಿಳಿಸಿದೆ. ಅಹಮದ್ ಪಟೇಲ್ ರಾಜ್ಯಸಭೆಗೆ ಆಯ್ಕೆಯಾಗಲು ಡಿ.ಕೆ. ಶಿವಕುಮಾರ್ ಮಹತ್ವದ ಪಾತ್ರ ವಹಿಸಿ, ಅದಕ್ಕಾಗಿ ಜೈಲು ವಾಸವನ್ನೂ ಅನುಭವಿಸಿದ್ದನ್ನು ಅವರು ನೆನಪಿಸಿದರು.
ಪಕ್ಷಕ್ಕೆ ನಿಷ್ಠೆಯಿಂದ ಸೇವೆ ಸಲ್ಲಿಸಿದ ಶಿವಕುಮಾರ್ ಅವರಿಗೆ ನೀಡಿದ್ದ ಮಾತಿನಂತೆ ಮುಖ್ಯಮಂತ್ರಿ ಸ್ಥಾನ ನೀಡಿ ಗೌರವಿಸಬೇಕೆಂದು ಒಕ್ಕಲಿಗರ ಸಂಘ ಒತ್ತಾಯ ಮಾಡಿದೆ.
ಸಂಘದ ಅಧ್ಯಕ್ಷ ಎಂ.ಬಿ. ಲಕ್ಷ್ಮಣಗೌಡ, ಗೌರವಾಧ್ಯಕ್ಷ ಹರೀಶ್ ಹೆಚ್.ವಿ., ಉಪಾಧ್ಯಕ್ಷರು ಎಂ.ಎಂ. ಪರಮೇಶ್, ವಜ್ರಾಕ್ಷಮ್ಮ, ಕಾರ್ಯದರ್ಶಿ ಇ.ಡಿ. ಮಂಜುನಾಥ ಕಲ್ಲೂರು, ಸಹಕಾರ್ಯದರ್ಶಿ ಬಿ.ಎಚ್. ಷಣ್ಮುಖಪ್ಪಗೌಡ, ಹೆಚ್.ವೈ. ಸಂತೋಷಕುಮಾರ್, ಖಜಾಂಚಿ ಟಿ.ಎಂ. ಕೃಷ್ಣಮೂರ್ತಿ ಸೇರಿದಂತೆ ಹಲವರು ಪತ್ರಿಕಾ ಪ್ರಕಟಣೆ ಮೂಲಕ ಒತ್ತಾಯಿಸಿದ್ದಾರೆ
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

- ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್