ಕಲಗೋಡು ರತ್ನಾಕರ್‌ಗೆ ನಿಗಮ ಮಂಡಳಿ ಸ್ಥಾನಕ್ಕೆ ಬೇಡಿಕೆ – ಹೊಸನಗರ ಕಾಂಗ್ರೆಸ್ ನಿಯೋಗದಿಂದ ಶಾಸಕರ ಬಳಿ ಹಕ್ಕೊತ್ತಾಯ
ಶಿವಮೊಗ್ಗ ಜಿಪಂ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಕಲಗೋಡು ರತ್ನಾಕರ್ ರವರಿಗೆ ನಿಗಮ ಮಂಡಳಿಯಲ್ಲಿ ಸೂಕ್ತ ಸ್ಥಾನಮಾನ ನೀಡುವಂತೆ ಒತ್ತಾಯಿಸಿ ಹೊಸನಗರ ತಾಲೂಕು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ರವರಿಗೆ ನಿಯೋಗದ ಮೂಲಕ ಮನವಿ ಸಲ್ಲಿಸಿದ್ದಾರೆ.
ನಿಯೋಗದ ಪರವಾಗಿ ಮಾತನಾಡಿದ ಹೊಸನಗರ ತಾಲೂಕ್ ಗ್ಯಾರಂಟಿ ಸಮಿತಿ ಅಧ್ಯಕ್ಷ ಚಿದಂಬರಂ ಕಲಗೋಡು ರತ್ನಾಕರ್ ಕಾಂಗ್ರೆಸ್ ಪಕ್ಷದ ಚಿಹ್ನೆಯಲ್ಲಿ ಗ್ರಾಪಂ ಸದಸ್ಯನಿಂದ ನಿಂದ ಜಿಪಂ ಅಧ್ಯಕ್ಷ ಗಾದಿಗೆ ಏರುವ ಮೂಲಕ ಹೊಸನಗರ ತಾಲೂಕಿನಲ್ಲಿ ಪಕ್ಷವನ್ನು ಸಂಘಟಿಸಿದ್ದಾರೆ.ಅವರ ಪಕ್ಷ ನಿಷ್ಠೆ ಹಾಗೂ ಕ್ರೀಯಾಶೀಲತೆಯನ್ನು ಪಕ್ಷದ ಹೈಕಮಾಂಡ್ ಗುರುತಿಸಿ ಅವರಿಗೆ ಸೂಕ್ತ ಸ್ಥಾನಮಾನ ನೀಡಬೇಕೆಂದು ನಮ್ಮೆಲ್ಲರ ಹೆಬ್ಬಯಕೆಯಾಗಿದೆ ಈ ನಿಟ್ಟಿನಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ಹಾಗೂ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ರವರು ಮುಖ್ಯಮಂತ್ರಿಗಳ ಬಳಿ ಚರ್ಚಿಸಿ ನಿಗಮ ಮಂಡಳಿ ಅಧ್ಯಕ್ಷ ಹುದ್ದೆ ನೀಡಲಿ ಎಂದು ಒತ್ತಾಯಿಸಿದರು.
ನಂತರ ನಿಯೋಗವನ್ನುದ್ದೇಶಿಸಿ ಮಾತನಾಡಿದ ಶಾಸಕ ಬೇಳೂರು ಗೋಪಾಲಕೃಷ್ಣ, “ನಾವು ಕಲಗೋಡು ರತ್ನಾಕರ್ ಸಹೋದರರಂತೆ ಇದ್ದೇವೆ. ರತ್ನಾಕರ್ ಅವರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಈ ಹಿಂದೆಯೇ ನಾನು ಹಾಗೂ ಜಿಲ್ಲಾ ಮಂತ್ರಿಗಳಾದ ಮಧು ಬಂಗಾರಪ್ಪ ಅವರು ಸೇರಿ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಮೌಖಿಕವಾಗಿ ಹಾಗೂ ಪತ್ರದ ಮೂಲಕ ಮನವಿ ಸಲ್ಲಿಸಿದ್ದೇವು ಆದರೆ ಕೆಲವು ಕಾರಣಗಳಿಂದಾಗಿ ಇದು ಈವರೆಗೆ ಸಾಧ್ಯವಾಗಿಲ್ಲ. ಮುಂದಿನ ದಿನಗಳಲ್ಲಿ ಶಾಸಕನಾಗಿ ಹಾಗೂ ಕ್ಷೇತ್ರದ ಕಾಂಗ್ರೆಸ್ ಅಕ್ಷದ್ ಕಾರ್ಯಕರ್ತನಾಗಿ ಕಲಗೋಡು ರತ್ನಾಕರ್ ಅವರಿಗೆ ಸೂಕ್ತ ಸ್ಥಾನ ದೊರಕಿಸಿ ಕೊಡಲು ಸಂಪೂರ್ಣ ಪ್ರಯತ್ನ ಮಾಡುತ್ತೇನೆ,” ಎಂದು ಭರವಸೆ ನೀಡಿದರು.
ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ ಜಿ ಚಂದ್ರಮೌಳಿ, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಉಬೇದುಲ್ಲಾ ಶರೀಫ್, ಬೆಳ್ಳೂರು ಯೋಗೇಶ್, , ಗ್ಯಾರಂಟಿ ಸಮಿತಿ ಅಧ್ಯಕ್ಷ ಚಿದಂಬರ , ಕೆಡಿಪಿ ಸದಸ್ಯ ಆಸೀಫ಼್ ಭಾಷಾ , ಜೇನಿ ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಜು, ರಿಪ್ಪನ್‌ಪೇಟೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಧನಲಕ್ಷ್ಮಿ , ಸದಸ್ಯ ನಿರೂಪ್ ಕುಮಾರ್ ,ಶಾಸಕರ ಆಪ್ತ ಸಹಾಯಕ ಸಣ್ಣಕ್ಕಿ ಮಂಜು, ಚಿಕ್ಕಜೀನಿ ವೆಂಕಟಚಲ, ಜೇನಿ ಗ್ರಾಮ ಪಂಚಾಯಿತಿ ಸದಸ್ಯ ಟೀಕಪ್ಪ, ಲಕ್ಷ್ಮಣ ಹಾರೋಹಿತ್ತಲು, ಈಶ್ವರಪ್ಪ ಗೌಡ್ರು, ಹೆಬ್ಬಯ್ಲು ನಾಗರಾಜ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

- ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್