‘ವರ್ಕ್ ಫ್ರಂ ಹೋಮ್’ ಆಫರ್ ನಂಬಿ ಮೋಸ ಹೋದ ಇಂಜಿನಿಯರ್ — ಒಂಬತ್ತು ದಿನಗಳಲ್ಲಿ 11 ಲಕ್ಷ ವಂಚನೆ!
ಶಿವಮೊಗ್ಗ: ನಗರದ ಕುವೆಂಪು ನಗರದಲ್ಲಿ ವಾಸಿಸುವ ಮಹಿಳಾ ಎಂಜಿನಿಯರ್‌ರೊಬ್ಬರಿಗೆ ಸೈಬರ್ ವಂಚಕರು ಒಂಬತ್ತು ದಿನದಲ್ಲ್ಲಿ ೧೧ ಲಕ್ಷಕ್ಕೂ ಅಧಿಕ ಹಣವನ್ನು ವರ್ಗಾಯಿಸಿಕೊಂಡು ವಂಚಿಸಿದ್ದಾರೆ. ಈ ಹಿನ್ನೆಲೆ ಮಹಿಳೆ ಶಿವಮೊಗ್ಗದ ಸಿಇಎನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ದೂರಿನ ಪ್ರಕಾರ, ನವೆಂಬರ್ ೨, ೨೦೨೫ ರಂದು ಮಹಿಳೆ ಮೊಬೈಲ್ ನೋಡುತ್ತಿದ್ದಾಗ, ವಂಚಕರು ಇನ್‌ಸ್ಟಾಗ್ರಾಮ್ ಅಪ್ಲಿಕೇಶನ್ ಮೂಲಕ ಅವರನ್ನು ಸಂಪರ್ಕಿಸಿದ್ದಾರೆ. ವಂಚಕರು ತಮ್ಮನ್ನು ‘ನ್ಯಾಷನಲ್ ಸ್ಟಾಕ್ ಎಕ್ಸ್ಚೇಂಜ್ ಆಫ್ ಇಂಡಿಯಾ ಕಂಪನಿಯ ಪ್ರತಿನಿಧಿಗಳೆಂದು ಪರಿಚಯಿಸಿಕೊಂಡು, ‘ವರ್ಕ್ ಫ್ರಂ ಹೋಮ್’ ಉದ್ಯೋಗದ ಆಫರ್ ನೀಡಿದ್ದರು.
ತಾವು ನೀಡುವ ವಿವಿಧ ಆನ್‌ಲೈನ್ ಟಾಸ್ಕ್‌ಗಳನ್ನು ಪೂರ್ಣಗೊಳಿಸಿದರೆ ಹೆಚ್ಚಿನ ಲಾಭಾಂಶ ನೀಡುವುದಾಗಿ ಮಹಿಳೆಯನ್ನು ನಂಬಿಸಿದ್ದರು. ಇದನ್ನು ನಂಬಿದ ಮಹಿಳೆ ೦೨-೧೧-೨೦೨೫ ರಿಂದ ೧೧-೧೧-೨೦೨೫ ರ ನಡುವಿನ ಕೇವಲ ಒಂಬತ್ತು ದಿನಗಳ ಅವಧಿಯಲ್ಲಿ ಹಂತ ಹಂತವಾಗಿ ಒಟ್ಟು ೧೧,೪೬,೨೭೩ ಮೊತ್ತದ ಹಣವನ್ನು ವಂಚಕರು ಹೇಳಿದ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿದ್ದರು.
ನಿಗದಿತ ಹಣ ವರ್ಗಾವಣೆ ಮಾಡಿದ ನಂತರ, ಮಹಿಳೆ ಲಾಭಾಂಶ ಮತ್ತು ತಮ್ಮ ಹಣವನ್ನು ವಾಪಸ್ ಕೇಳಿದಾಗ, ವಂಚಕರು ಮತ್ತೆ ಬೇರೆ ಬ್ಯಾಂಕ್ ಖಾತೆಗೆ ಹೆಚ್ಚಿನ ಹಣವನ್ನು ವರ್ಗಾವಣೆ ಮಾಡುವಂತೆ ಕೇಳಿದ್ದರು. ಇದರಿಂದ ಸಂತ್ರಸ್ತರಿಗೆ ಅನುಮಾನ ಬಂದಿದ್ದು, ಸ್ನೇಹಿತರ ಬಳಿ ವಿಚಾರಿಸಿದಾಗ ತಾವು ಸೈಬರ್ ವಂಚನೆಗೆ ಬಲಿಯಾಗಿರುವುದು ತಿಳಿದುಬಂದಿದೆ.
ಅತಿ ವೇಗದ ಬೈಕ್ ಚಾಲನೆಯಿಂದ ಪಾದಚಾರಿ ಸಾವು : ಬೈಕ್ ಸವಾರನಿಗೆ 1 ವರ್ಷಕ್ಕೂ ಹೆಚ್ಚು ಜೈಲು ಶಿಕ್ಷೆ Bhadravati…
ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆಗೆ ಸಾವಿರಾರು ಅಭ್ಯರ್ಥಿಗಳು – ವಸತಿ ಕೊರತೆಯಿಂದ ಬಸ್ ನಿಲ್ದಾಣದಲ್ಲೇ ವಿಶ್ರಾಂತಿ KSRP Police Constable written…
ಜಿಂಕೆ ಮಾಂಸ ದಾಸ್ತಾನು ಆರೋಪ: ಇಬ್ಬರ ಬಂಧನ Forest officials in Shivamogga taluk arrested two persons for…
ಮಲೆನಾಡಿನ ರೈತರ ಜಮೀನಿಗೆ ಕೈಹಾಕಬೇಡಿ: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ ಕಸ್ತೂರಿರಂಗನ್ ವರದಿ ಸಂವಾದ: ಮಲೆನಾಡಿನ ರೈತರಿಗೆ ಸಿಎಂ ಡಿ.ಕೆ.…
ವಿಶ್ವಕರ್ಮ ಜಯಂತಿ ಕೌಶಲ, ಶ್ರಮ ಹಾಗೂ ಸೃಜನಶೀಲತೆಯ ಪ್ರತೀಕ: ಗಣೇಶ್ ಆಚಾರ್ಯ Vishwakarma Jayanti was celebrated by the…
ಕೋಡೂರಿನಲ್ಲಿ ಅಗ್ನಿ ಅವಘಡ: ಸರ್ವಸ್ವ ಕಳೆದುಕೊಂಡ ಕಾರ್ಮಿಕನಿಗೆ ಕಟ್ಟಡ ಕಾರ್ಮಿಕರ ಸಂಘದ ಆಸರೆ A fire caused by a…