ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ – ಇಬ್ಬರು ಯುವಕರ ದುರ್ಮರಣ
ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ – ಇಬ್ಬರು ಯುವಕರ ದುರ್ಮರಣ
ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ – ಇಬ್ಬರು ಯುವಕರ ದುರ್ಮರಣ
ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ – ಇಬ್ಬರು ಯುವಕರ ದುರ್ಮರಣ
ತೀರ್ಥಹಳ್ಳಿ: ಪಟ್ಟಣದ ಬಾಳೆಬೈಲು ಆರ್‌ಎಂಸಿ ಯಾರ್ಡ್ ಸಮೀಪ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ದಾರುಣ ಅಂತ್ಯ ಕಂಡಿರುವ ಘಟನೆ ನಡೆದಿದೆ.
ಶನಿವಾರ ಮಧ್ಯರಾತ್ರಿ 1:30ರ ಸುಮಾರಿಗೆ ಗ್ಯಾಸ್ ಲಾರಿ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರರಾದ ಸುದೀಪ್ (25) ಮತ್ತು ಸುಧೀಶ್ (30) ಎಂಬ ಯುವಕರು ಪ್ರಾಣ ಕಳೆದುಕೊಂಡಿದ್ದಾರೆ.
ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಇಬ್ಬರೂ ಹೆಲ್ಮೆಟ್ ಧರಿಸದೇ ಬೈಕ್ ಪ್ರಯಾಣಿಸುತ್ತಿದ್ದರೆಂದು ತಿಳಿದುಬಂದಿದ್ದು, ಇದು ಸಾವಿಗೆ ಪ್ರಮುಖ ಕಾರಣವಾಗಿರಬಹುದೆಂದು ಪೊಲೀಸರು ಹೇಳಿದ್ದಾರೆ.
ಮೃತರಾದ ಯುವಕರು ತೀರ್ಥಹಳ್ಳಿಯ ಇಂದಿರಾನಗರ ಮತ್ತು ಯಡೆಹಳ್ಳಿಕೆರೆಯ ನಿವಾಸಿಗಳಾಗಿದ್ದಾರೆ. ರಾತ್ರಿ ಸಮಯದಲ್ಲಿ ವಾಹನ ಸಂಚಲನ ಕಡಿಮೆ ಇರುವುದರಿಂದ ಸಾಮಾನ್ಯವಾಗಿ ರಸ್ತೆ ಅಪಘಾತಗಳ ಸಂಭವ ಕಡಿಮೆ ಇರುತ್ತದೆ. ಆದರೆ ಈ ಘಟನೆ ರಸ್ತೆ ಸುರಕ್ಷತಾ ನಿಯಮಗಳ ಪಾಲನೆಯ ಅಗತ್ಯತೆಯನ್ನು ಮತ್ತೊಮ್ಮೆ ನೆನಪಿಸುವಂತಾಗಿದೆ.
ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…
ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…
ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…
ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…
ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ Shivamogga rural police arrested two…
ರಿಪ್ಪನ್‌ಪೇಟೆ ಕೆಪಿಎಸ್‌ನಲ್ಲಿ ಉದ್ಯೋಗಾವಕಾಶ: 2 ಹುದ್ದೆಗಳಿಗೆ ಅರ್ಜಿ ಆಹ್ವಾನ | ಆ.22 ಅರ್ಜಿ ಸಲ್ಲಿಕೆಗೆ ಕೊನೆ ದಿನ Karnataka Public…