January 11, 2026

ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ – ಇಬ್ಬರು ಯುವಕರ ದುರ್ಮರಣ

ತೀರ್ಥಹಳ್ಳಿ: ಪಟ್ಟಣದ ಬಾಳೆಬೈಲು ಆರ್‌ಎಂಸಿ ಯಾರ್ಡ್ ಸಮೀಪ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ದಾರುಣ ಅಂತ್ಯ ಕಂಡಿರುವ ಘಟನೆ ನಡೆದಿದೆ.

ಶನಿವಾರ ಮಧ್ಯರಾತ್ರಿ 1:30ರ ಸುಮಾರಿಗೆ ಗ್ಯಾಸ್ ಲಾರಿ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರರಾದ ಸುದೀಪ್ (25) ಮತ್ತು ಸುಧೀಶ್ (30) ಎಂಬ ಯುವಕರು ಪ್ರಾಣ ಕಳೆದುಕೊಂಡಿದ್ದಾರೆ.

ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಇಬ್ಬರೂ ಹೆಲ್ಮೆಟ್ ಧರಿಸದೇ ಬೈಕ್ ಪ್ರಯಾಣಿಸುತ್ತಿದ್ದರೆಂದು ತಿಳಿದುಬಂದಿದ್ದು, ಇದು ಸಾವಿಗೆ ಪ್ರಮುಖ ಕಾರಣವಾಗಿರಬಹುದೆಂದು ಪೊಲೀಸರು ಹೇಳಿದ್ದಾರೆ.

ಮೃತರಾದ ಯುವಕರು ತೀರ್ಥಹಳ್ಳಿಯ ಇಂದಿರಾನಗರ ಮತ್ತು ಯಡೆಹಳ್ಳಿಕೆರೆಯ ನಿವಾಸಿಗಳಾಗಿದ್ದಾರೆ. ರಾತ್ರಿ ಸಮಯದಲ್ಲಿ ವಾಹನ ಸಂಚಲನ ಕಡಿಮೆ ಇರುವುದರಿಂದ ಸಾಮಾನ್ಯವಾಗಿ ರಸ್ತೆ ಅಪಘಾತಗಳ ಸಂಭವ ಕಡಿಮೆ ಇರುತ್ತದೆ. ಆದರೆ ಈ ಘಟನೆ ರಸ್ತೆ ಸುರಕ್ಷತಾ ನಿಯಮಗಳ ಪಾಲನೆಯ ಅಗತ್ಯತೆಯನ್ನು ಮತ್ತೊಮ್ಮೆ ನೆನಪಿಸುವಂತಾಗಿದೆ.

ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About The Author

Exit mobile version