Headlines

ಹೊಸನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ. ಚಂದ್ರಮೌಳಿಗೆ ಮಾತೃವಿಯೋಗ

ಹೊಸನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ. ಚಂದ್ರಮೌಳಿಗೆ ಮಾತೃವಿಯೋಗ

ಹೊಸನಗರ: ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ. ಚಂದ್ರಮೌಳಿ ಅವರ ತಾಯಿ ಗಿರಿಜಮ್ಮ (90) ಅಲ್ಪಕಾಲದ ಅನಾರೋಗ್ಯದಿಂದ ಗುರುವಾರ ಮಧ್ಯಾಹ್ನ 12 ಗಂಟೆಗೆ ತಮ್ಮ ಸ್ವಗೃಹ ಗೌಡಕೊಪ್ಪದಲ್ಲಿ ನಿಧನರಾದರು.

ಮೃತರು ನಾಲ್ವರು ಪುತ್ರರು, ಇಬ್ಬರು ಪುತ್ರಿಯರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.

ಅಂತ್ಯಕ್ರಿಯೆ ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ಕೋಡೂರಿನ ಗೌಡಕೊಪ್ಪದಲ್ಲಿರುವ ಅವರ ಜಮೀನಿನಲ್ಲಿ ವೀರಶೈವ ಲಿಂಗಾಯತ ಸಂಪ್ರದಾಯದಂತೆ ನೆರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಸಂತಾಪ:
ಗಿರಿಜಮ್ಮರ ನಿಧನಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ, ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್, ಮೂಲೆಗದ್ದೆ ಮಠದ ಅಭಿನವ ಚನ್ನಬಸವ ಶ್ರೀಗಳು ಸೇರಿದಂತೆ ಅನೇಕ ಕಾಂಗ್ರೆಸ್ ನಾಯಕರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.