Headlines

ಶಿವಮೊಗ್ಗದಲ್ಲಿ ಲೋಕಾಯುಕ್ತ ದಾಳಿ – ಸಿಮ್ಸ್‌ ಡೀನ್‌ ಆಪ್ತ ಸಹಾಯಕನ ಮನೆ ಮೇಲೆ ರೇಡ್

ಶಿವಮೊಗ್ಗದಲ್ಲಿ ಲೋಕಾಯುಕ್ತ ದಾಳಿ – ಸಿಮ್ಸ್‌ ಡೀನ್‌ ಆಪ್ತನ ಮನೆಗೆ ರೇಡ್

ಶಿವಮೊಗ್ಗ: ನಗರದ ವಿವಿಧ ಭಾಗಗಳಲ್ಲಿ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಭಾರೀ ದಾಳಿ ನಡೆಸಿದ್ದು, ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಸಿಮ್ಸ್) ಡೀನ್‌ ಡಾ. ವಿರುಪಾಕ್ಷಪ್ಪ ಅವರ ಆಪ್ತ ಸಹಾಯಕ ಲಕ್ಷ್ಮೀಪತಿ ಅವರ ಮನೆ ಮೇಲೆ ರೇಡ್‌ ನಡೆದಿದೆ.

ಲಕ್ಷ್ಮೀಪತಿ ಅವರ ಶಿವಮೊಗ್ಗದ ಜೆ.ಹೆಚ್. ಪಟೇಲ್ ಬಡಾವಣೆ ಹಾಗೂ ಜಗಳೂರಿನ ಮನೆಯಲ್ಲಿ ಒಂದೇ ಸಮಯದಲ್ಲಿ ದಾಳಿ ನಡೆಸಲಾಗಿದೆ. ಇದಲ್ಲದೆ, ಸಿಮ್ಸ್‌ ಕಚೇರಿಯ ಮೇಲೂ ಏಕಕಾಲದಲ್ಲಿ ಶೋಧ ಕಾರ್ಯಾಚರಣೆ ನಡೆದಿದೆ.

ಅನಧಿಕೃತ ಸಂಪಾದನೆ ಹಾಗೂ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಶಂಕೆಯ ಹಿನ್ನೆಲೆಯಲ್ಲಿ ಲೋಕಾಯುಕ್ತ ತಂಡ ದಾಳಿ ನಡೆಸಿರುವುದು ತಿಳಿದುಬಂದಿದೆ.

ಲೋಕಾಯುಕ್ತ ಎಸ್ಪಿ ಮಂಜುನಾಥ್ ಚೌದರಿ ಅವರ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಯುತ್ತಿದ್ದು, ದಾಳಿಯ ಸಮಯದಲ್ಲಿ ಹಲವು ಪ್ರಮುಖ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ಶೋಧದ ನಂತರ ಹೆಚ್ಚಿನ ವಿವರಗಳು ಬೆಳಕಿಗೆ ಬರಲಿವೆ.