ಶಿವಮೊಗ್ಗದಲ್ಲಿ ಲೋಕಾಯುಕ್ತ ದಾಳಿ – ಸಿಮ್ಸ್ ಡೀನ್ ಆಪ್ತನ ಮನೆಗೆ ರೇಡ್
ಶಿವಮೊಗ್ಗ: ನಗರದ ವಿವಿಧ ಭಾಗಗಳಲ್ಲಿ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಭಾರೀ ದಾಳಿ ನಡೆಸಿದ್ದು, ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಸಿಮ್ಸ್) ಡೀನ್ ಡಾ. ವಿರುಪಾಕ್ಷಪ್ಪ ಅವರ ಆಪ್ತ ಸಹಾಯಕ ಲಕ್ಷ್ಮೀಪತಿ ಅವರ ಮನೆ ಮೇಲೆ ರೇಡ್ ನಡೆದಿದೆ.
ಲಕ್ಷ್ಮೀಪತಿ ಅವರ ಶಿವಮೊಗ್ಗದ ಜೆ.ಹೆಚ್. ಪಟೇಲ್ ಬಡಾವಣೆ ಹಾಗೂ ಜಗಳೂರಿನ ಮನೆಯಲ್ಲಿ ಒಂದೇ ಸಮಯದಲ್ಲಿ ದಾಳಿ ನಡೆಸಲಾಗಿದೆ. ಇದಲ್ಲದೆ, ಸಿಮ್ಸ್ ಕಚೇರಿಯ ಮೇಲೂ ಏಕಕಾಲದಲ್ಲಿ ಶೋಧ ಕಾರ್ಯಾಚರಣೆ ನಡೆದಿದೆ.
ಅನಧಿಕೃತ ಸಂಪಾದನೆ ಹಾಗೂ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಶಂಕೆಯ ಹಿನ್ನೆಲೆಯಲ್ಲಿ ಲೋಕಾಯುಕ್ತ ತಂಡ ದಾಳಿ ನಡೆಸಿರುವುದು ತಿಳಿದುಬಂದಿದೆ.
ಲೋಕಾಯುಕ್ತ ಎಸ್ಪಿ ಮಂಜುನಾಥ್ ಚೌದರಿ ಅವರ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಯುತ್ತಿದ್ದು, ದಾಳಿಯ ಸಮಯದಲ್ಲಿ ಹಲವು ಪ್ರಮುಖ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.
ಶೋಧದ ನಂತರ ಹೆಚ್ಚಿನ ವಿವರಗಳು ಬೆಳಕಿಗೆ ಬರಲಿವೆ.
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್‌ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…