ರಿಪ್ಪನ್‌ಪೇಟೆಯ ಎಂ.ಎಂ. ಪರಮೇಶ್ ಅವರಿಗೆ ರಾಜ್ಯ ಮಟ್ಟದ “ಸಹಕಾರಿ ರತ್ನ” ಪ್ರಶಸ್ತಿ ಗೌರವ

ರಿಪ್ಪನ್‌ಪೇಟೆಯ ಎಂ.ಎಂ. ಪರಮೇಶ್ ಅವರಿಗೆ ರಾಜ್ಯ ಮಟ್ಟದ “ಸಹಕಾರಿ ರತ್ನ” ಪ್ರಶಸ್ತಿ ಗೌರವ

ರಿಪ್ಪನ್‌ಪೇಟೆ : ರಾಜ್ಯ ಸರ್ಕಾರದಿಂದ ಪ್ರತಿ ವರ್ಷ ನೀಡಲಾಗುವ ರಾಜ್ಯ ಮಟ್ಟದ ‘ಸಹಕಾರಿ ರತ್ನ’ ಪ್ರಶಸ್ತಿಗೆ ಈ ಬಾರಿ ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಂ.ಎಂ. ಪರಮೇಶ್ ಆಯ್ಕೆಯಾಗಿದ್ದಾರೆ.

ನವೆಂಬರ್ 14 ರಂದು ಬೆಂಗಳೂರು ಪ್ಯಾಲೇಸ್ ಗ್ರೌಂಡ್‌ನ ಗಾಯತ್ರಿ ವಿಹಾರ್ನಲ್ಲಿ ನಡೆಯಲಿರುವ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಕಾರ್ಯಕ್ರಮದಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶಸ್ತಿಯನ್ನು ಪ್ರಧಾನ ಮಾಡಲಿದ್ದಾರೆ.

ಎಂ.ಎಂ. ಪರಮೇಶ್ ಅವರು ರಿಪ್ಪನ್‌ಪೇಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸತತ 9ನೇ ಬಾರಿಗೆ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದು, ನಾಲ್ಕು ಬಾರಿ ಶಿವಮೊಗ್ಗ ಜಿಲ್ಲಾ ಸಹಕಾರಿ (ಡಿಸಿಸಿ) ಬ್ಯಾಂಕ್‌ನ ನಿರ್ದೇಶಕರಾಗಿಯೂ ಕಾರ್ಯನಿರ್ವಹಿಸಿದ್ದಾರೆ.

ಸಹಕಾರಿ ಕ್ಷೇತ್ರದಲ್ಲಿ ದೀರ್ಘ ಮತ್ತು ಪ್ರಾಮಾಣಿಕ ಸೇವೆ

ಶಿವಮೊಗ್ಗ ಜಿಲ್ಲೆಯ ಸಹಕಾರ ಕ್ಷೇತ್ರದಲ್ಲಿ ಪಕ್ಷಾತೀತ ಹಾಗೂ ಧರ್ಮಾತೀತ ಸೇವೆಯ ಮಾದರಿಯಾಗಿ ಖ್ಯಾತಿ ಪಡೆದಿರುವ ಎಂ.ಎಂ. ಪರಮೇಶ್ ಅವರು 37 ವರ್ಷಗಳಿಗೂ ಹೆಚ್ಚು ಕಾಲದಿಂದ ಸಹಕಾರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ.ಸಮಾನತೆ, ಸಹಬಾಳ್ವೆ, ಸಹಕಾರ ಮತ್ತು ಸಮರಸತೆಯ ಮೌಲ್ಯಗಳನ್ನು ಜೀವನದ ಅಂಶವನ್ನಾಗಿಸಿಕೊಂಡು ಅವರು ಕಾರ್ಯನಿರ್ವಹಿಸುತ್ತಿದ್ದಾರೆ. ಅವರ ಸೇವೆ ಹೊಸನಗರ ತಾಲೂಕಿಗೆ ಮಾತ್ರ ಸೀಮಿತವಾಗದೇ, ಜಿಲ್ಲಾ ಮಟ್ಟದ ಸಹಕಾರ ಚಟುವಟಿಕೆಗಳಿಗೂ ವಿಸ್ತರಿಸಿದೆ.

ರಿಪ್ಪನ್‌ಪೇಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ 27 ವರ್ಷಗಳಿಂದ ಸತತವಾಗಿ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ಪರಮೇಶ್ ಅವರ ಆಡಳಿತ ಶೈಲಿ, ನಿಷ್ಠೆ ಮತ್ತು ದೃಷ್ಟಿಕೋನವು ಸಹಕಾರಿ ಚಳವಳಿಗೆ ಮಾದರಿಯಾಗಿದೆ.

ಅಭಿನಂದನೆಗಳು

ರಾಜ್ಯ ಮಟ್ಟದ ‘ಸಹಕಾರಿ ರತ್ನ’ ಪ್ರಶಸ್ತಿ ಪಡೆದ ಎಂ.ಎಂ. ಪರಮೇಶ್ ಅವರಿಗೆ ಸಾಗರ–ಹೊಸನಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥ್ ಗೌಡ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಬಿ.ಪಿ. ರಾಮಚಂದ್ರ, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಅಮೀರ್ ಹಂಜಾ,ವಾಟಗೋಡು ಸುರೇಶ್ ಹೊಸನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ. ಚಂದ್ರಮೌಳಿ, ಕೆಡಿಪಿ ಸದಸ್ಯ ಆಸೀಫ್ ಭಾಷಾ, ಗ್ರಾಮ ಪಂಚಾಯತ್ ಸದಸ್ಯ ನಿರೂಪ್ ಕುಮಾರ್ ಹಾಗೂ ಇನ್ನಿತರರು ಅಭಿನಂದನೆ ಸಲ್ಲಿಸಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

18 hours ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

18 hours ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

22 hours ago

ಈಸ್ಟ್‌ವೆಸ್ಟ್‌ ಬಸ್ ಸಂಸ್ಥೆ ಮಾಲೀಕ, ಮಾಜಿ ವಕ್ಫ್‌ ಬೋರ್ಡ್ ಅಧ್ಯಕ್ಷ ತಲ್ಕೀನ್ ಅಹ್ಮದ್ ನಿಧನ

ಈಸ್ಟ್‌ವೆಸ್ಟ್‌ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…

24 hours ago

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…

1 day ago

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…

1 day ago