Breaking
12 Jan 2026, Mon

ಉದ್ಯೋಗದಲ್ಲಿ ಕನ್ನಡಿಗರಿಗೆ ಶೇಕಡಾ ತೊಂಬತ್ತರಷ್ಟು ಮೀಸಲಾತಿ ನೀಡಲಿ – ಶಾಸಕ ಬೇಳೂರು ಗೋಪಾಲಕೃಷ್ಣ

ಉದ್ಯೋಗದಲ್ಲಿ ಕನ್ನಡಿಗರಿಗೆ ಶೇಕಡಾ ತೊಂಬತ್ತರಷ್ಟು ಮೀಸಲಾತಿ ನೀಡಲಿ – ಶಾಸಕ ಬೇಳೂರು ಗೋಪಾಲಕೃಷ್ಣ

ರಿಪ್ಪನ್‌ಪೇಟೆ : ಕರ್ನಾಟಕ ರಾಜ್ಯದಲ್ಲಿ ಹಲವು ಕ್ಷೇತ್ರಗಳಲ್ಲಿ ಕನ್ನಡಿಗರಿಗೆ ಅವಕಾಶಗಳು ಕಡಿಮೆಯಾಗುತ್ತಿವೆ. ಹೊರ ರಾಜ್ಯದವರು ಕೆಲಸ ಪಡೆಯುತ್ತಿರುವುದಕ್ಕೆ ಕಾರಣ ನಮ್ಮದೇ ನಿರ್ಲಕ್ಷ್ಯ. ಸರ್ಕಾರದ ನಿಯಮಗಳಲ್ಲಿ ಕನ್ನಡಕ್ಕೆ ಆದ್ಯತೆ ನೀಡುವ ಶಿಫಾರಸು ಈಗಾಗಲೇ ಮಾಡಲಾಗಿದೆ. ಕೈಗಾರಿಕೆ, ಬ್ಯಾಂಕ್, ಶಿಕ್ಷಣ, ಆರೋಗ್ಯ, ಮಾಹಿತಿ ತಂತ್ರಜ್ಞಾನ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲೂ ಸ್ಥಳೀಯ ಯುವಕರಿಗೆ ಶೇ. 90 ಉದ್ಯೋಗಾವಕಾಶ ಒದಗಿಸಿದರೆ ನಾಡು ನಿಜವಾದ ಅರ್ಥದಲ್ಲಿ ಅಭಿವೃದ್ಧಿಯಾಗುತ್ತದೆ,” ಎಂದು ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಅಭಿಪ್ರಾಯಪಟ್ಟರು‌.

ಪಟ್ಟಣದ ವಿನಾಯಕ ವೃತ್ತದಲ್ಲಿ ಕಸ್ತೂರಿ ಕನ್ನಡ ಸಂಘ ಹಾಗೂ ಪುನೀತ್ ರಾಜ್‌ಕುಮಾರ್ ಅಭಿಮಾನಿ ಸಂಘದ ಐದನೇ ವರ್ಷದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಅದ್ದೂರಿಯಾಗಿ ಉದ್ಘಾಟಿಸಿ ಮಾತನಾಡಿ, “ಕನ್ನಡ ರಾಜ್ಯೋತ್ಸವ ಕೇವಲ ಹಬ್ಬವಲ್ಲ, ಇದು ನಮ್ಮ ಅಸ್ತಿತ್ವದ ಉತ್ಸವ. ಕನ್ನಡದಲ್ಲಿ ವ್ಯವಹರಿಸುವುದು, ಆಡಳಿತ ನಡೆಸುವುದು ಮತ್ತು ಕನ್ನಡಿಗರ ಹಕ್ಕುಗಳಿಗೆ ಧ್ವನಿ ಎತ್ತುವುದು ಪ್ರತಿಯೊಬ್ಬರ ಧರ್ಮ,” ಎಂದು ಹೇಳಿದರು.

ಅವರು ಮುಂದುವರಿಸಿ, “ಹೊಸ ಪೀಳಿಗೆಯವರು ಕನ್ನಡವನ್ನು ಗೌರವದಿಂದ ಬಳಸಬೇಕು. ಮನೆಯಲ್ಲಿಯೂ, ಶಾಲೆಯಲ್ಲಿಯೂ ಕನ್ನಡ ಮಾತನಾಡುವುದನ್ನು ಪ್ರೋತ್ಸಾಹಿಸಬೇಕು. ಇಂದಿನ ದಿನಗಳಲ್ಲಿ ಹಲವು ಕ್ಷೇತ್ರಗಳಲ್ಲಿ ಕನ್ನಡಿಗರಿಗೆ ಅವಕಾಶಗಳು ಕಡಿಮೆಯಾಗುತ್ತಿರುವುದು ವಿಷಾದನೀಯ. ಹೊರ ರಾಜ್ಯದವರು ಕೆಲಸ ಪಡೆಯುತ್ತಿರುವುದಕ್ಕೆ ನಮ್ಮದೇ ನಿರ್ಲಕ್ಷ್ಯ ಕಾರಣ. ಸರ್ಕಾರದ ನಿಯಮಗಳಲ್ಲಿ ಕನ್ನಡಕ್ಕೆ ಆದ್ಯತೆ ನೀಡುವ ಶಿಫಾರಸು ಈಗಾಗಲೇ ಮಾಡಲಾಗಿದೆ. ಕೈಗಾರಿಕೆ, ಬ್ಯಾಂಕ್, ಶಿಕ್ಷಣ, ಆರೋಗ್ಯ ಮತ್ತು ಮಾಹಿತಿ ತಂತ್ರಜ್ಞಾನ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲೂ ಸ್ಥಳೀಯ ಯುವಕರಿಗೆ ಶೇ.90 ಉದ್ಯೋಗಾವಕಾಶ ನೀಡಿದರೆ ನಾಡು ನಿಜವಾದ ಅರ್ಥದಲ್ಲಿ ಅಭಿವೃದ್ಧಿಯಾಗುತ್ತದೆ,” ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಜಿ.ಆರ್. ಗೋಪಾಲಕೃಷ್ಣ, ಕಾರ್ಯದರ್ಶಿ  ಶ್ರೀಧರ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಕಲಗೋಡು ರತ್ನಾಕರ್, ಉದ್ಯಮಿ ಮಹೇಂದ್ರ, ಬಂಡಿ ರಾಮಚಂದ್ರ, ಶ್ವೇತಾ ಬಂಡಿ,ಕಸ್ತೂರಿ ಕನ್ನಡ ಸಂಘ ಹಾಗೂ ಕಲಾ ಕೌಸ್ತುಭ ಕನ್ನಡ ಸಂಘದ ಪದಾಧಿಕಾರಿಗಳು, ವಿವಿಧ ಪಕ್ಷಗಳ ನಾಯಕರು ಹಾಗೂ ಸಾಮಾಜಿಕ ಸಂಘಟನೆಗಳ ಮುಖಂಡರು, ಕನ್ನಡಾಭಿಮಾನಿಗಳು ಭಾಗವಹಿಸಿ ರಾಜ್ಯೋತ್ಸವದ ಹರ್ಷೋತ್ಸವವನ್ನು ಹಂಚಿಕೊಂಡರು.

About The Author

By ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Exit mobile version