ಶಿವಮೊಗ್ಗದಲ್ಲಿ ಪತಿಯ ಕಿರುಕುಳಕ್ಕೆ ಬೇಸತ್ತು ಮದುವೆ ಆದ 6 ತಿಂಗಳಿಗೆ ನವವಿವಾಹಿತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯಭದ್ರಾವತಿ ತಾಲೂಕಿನ ಹಂಚಿನ ಸಿದ್ದಾಪುರ ಗ್ರಾಮದ ಬಳಿ ಈ ಒಂದು ಘಟನೆ ನಡೆದಿದೆ. ಪತಿ ಹಾಗೂ ಪತಿಯ ಮನೆಯವರ ವಿರುದ್ಧ ಕಿರುಕುಳ ಆರೋಪ ಕೇಳಿ ಬಂದಿದೆ.
ಆತ್ಮಹತ್ಯೆಗೆ ಶರಣಾದ ನವವಿವಾಹಿತೆಯನ್ನು ಲತಾ (25) ಎಂದು ತಿಳಿದುಬಂದಿದೆ. ಭದ್ರಾವತಿಯ ಹಂಚಿನ ಸಿದ್ದಾಪುರದ ನಿವಾಸಿಯಾಗಿರುವ ಲತಾ ಬಿ ಎಸ್ ಸಿ ಮತ್ತು ಬಿಎಡ್ ಪದವೀಧರೆ ಆಗಿದ್ದರು ಎಂದು ತಿಳಿದು ಬಂದಿದೆ. 2025 ಏಪ್ರಿಲ್ 14 ರಂದು ಶಿಕಾರಿಪುರದ ಗುರುರಾಜ್ ಜೊತೆಗೆ ಲತಾ ವಿವಾಹವಾಗಿತ್ತು. ಆರು ತಿಂಗಳ ಹಿಂದೆ ಅಷ್ಟೇ ಲತಾ ಗುರುರಾಜ್ ನನ್ನು ಮದುವೆಯಾಗಿದ್ದರು ಬಿ ಆರ್ ಪಿ ಯ ಕೆಪಿಸಿಎಲ್ ನಲ್ಲಿ ಲತಾಪತಿ ಗುರುರಾಜ್ ಎಇಇ ಆಗಿದ್ದಾರೆ. ಡೆತ್ ನೋಟ್ ಬರೆದಿಟ್ಟು ನಾಲೆಗೆ ಹಾರಿ ನವ ವಿವಾಹಿತ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಅಲ್ಲದೆ ವಾಟ್ಸಪ್ ನಲ್ಲಿ ಡೆತ್ ನೋಟ್ ಬರೆದಿದ್ದು ಪತಿ ಹಾಗೂ ಮನೆಯವರ ಕಿರುಕುಳದ ಬಗ್ಗೆ ದೂರು ನೀಡಿದ್ದಾರೆ. ನವೆಂಬರ್ 23ರಂದು ಪಿ ಲತಾ ನಾಲೆಗೆ ಹಾರಿದ್ದಾರೆ. ಸದ್ಯ ಲತಾ ಶವಕ್ಕಾಗಿ ಇದೀಗ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿಗಳು ಶೋಧ ಕಾರ್ಯ ನಡೆಸುತ್ತಿದ್ದಾರೆ. ಘಟನೆ ಕುರಿತಂತೆ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯ ಬಳಿಕ ಲತಾ ಪತಿ ಹಾಗೂ ಆತನ ಕುಟುಂಬಸ್ಥರು ನಾಪತ್ತೆಯಾಗಿದ್ದಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್