ಹಳೆಯ ದ್ವೇಷ : ಮಾರಾಕಾಸ್ತ್ರದಿಂದ ಕೊಚ್ಚಿ ಮಹಿಳೆಯ ಭೀಕರ ಕೊಲೆ
ಶಿವಮೊಗ್ಗ ತಾಲೂಕಿನ ದುಮ್ಮಳ್ಳಿಯ ಸಿದ್ದೇಶ್ವರ ನಗರದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ 45 ವರ್ಷದ ಮಹಿಳೆಯೊಬ್ಬರನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿದೆ ಎಂದು ಶಂಕಿಸಲಾಗಿದೆ.
ಮೃತ ದುರ್ದೈವಿಯನ್ನು ಗಂಗಮ್ಮ ಎಂದು ಗುರುತಿಸಲಾಗಿದೆ.
ಘಟನಾ ಸ್ಥಳಕ್ಕೆ ತುಂಗಾನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮೆಗ್ಗಾನ್ ಶವಾಗಾರಕ್ಕೆ ರವಾನಿಸಲಾಗಿದೆ.
ಈ ಸಂಬಂಧ ನಾಗೇಶ್ ನಾಯ್ಕ ಮತ್ತು ಹರೀಶ್ ನಾಯ್ಕ ಎಂಬುವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.



