Headlines

ಸಾಗರದಲ್ಲಿ ಗೋ ಕಳ್ಳರ ಅಟ್ಟಹಾಸ : ಐಷಾರಾಮಿ ಕಾರಿನಲ್ಲಿ ಹಸುವಿನ ಕಳವು!

ಸಾಗರದಲ್ಲಿ ಗೋ ಕಳ್ಳರ ಅಟ್ಟಹಾಸ : ಐಷಾರಾಮಿ ಕಾರಿನಲ್ಲಿ ಹಸುವಿನ ಕಳವು! ಸಾಗರ: ಸಾಗರ ನಗರದಲ್ಲಿ ಗೋ ಕಳ್ಳರ ಹಾವಳಿ ಮತ್ತೆ ಶುರುವಾಗಿದ್ದು, ನವೆಂಬರ್ 7ರ ಮಧ್ಯರಾತ್ರಿ ಐಷಾರಾಮಿ ಕಾರಿನಲ್ಲಿ ಹಸುವನ್ನು ಕಳವು ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಮಧ್ಯರಾತ್ರಿ 2:30ರ ಸುಮಾರಿಗೆ ಸಾಗರದ ಅಣಲೆಕೊಪ್ಪ ಟ್ಯಾಕ್ಸ್ ಆಫೀಸ್ ರಸ್ತೆಯ ಪಾರ್ಕ್‌ ಮುಂಭಾಗದಲ್ಲಿ ಮಲಗಿದ್ದ ಹಸುವನ್ನು ಕಳ್ಳರು ಕಳವು ಮಾಡಿದ್ದಾರೆ. ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ ಹಾಗೂ ದೂರು ನಂಬ‌ರ್ ಪ್ಲೇಟ್ ಇಲ್ಲದ ಬಿಳಿ ಬಣ್ಣದ ಫಾರ್ಚುನ‌ರ್ ಕಾರಿನಲ್ಲಿ…

Read More

ರಸ್ತೆಯಲ್ಲಿ ಒಂಟಿ ಸಲಗ ಪ್ರತ್ಯಕ್ಷ : ಹೆದ್ದಾರಿಯಲ್ಲಿ ಆತಂಕ!

ರಸ್ತೆಯಲ್ಲಿ ಒಂಟಿ ಸಲಗ ಪ್ರತ್ಯಕ್ಷ : ಹೆದ್ದಾರಿಯಲ್ಲಿ ಆತಂಕ! ಶಿವಮೊಗ್ಗ: ತೀರ್ಥಹಳ್ಳಿ ರಾಷ್ಟ್ರೀಯ ಹೆದ್ದಾರಿಯ ಮಂಡಗದ್ದೆ ಸಮೀಪ ರಸ್ತೆಯಲ್ಲೇ ಒಂಟಿ ಸಲಗವೊಂದು ಪ್ರತ್ಯಕ್ಷವಾಗಿ ಪ್ರಯಾಣಿಕರಲ್ಲಿ ಆತಂಕ ಸೃಷ್ಟಿಸಿದೆ. ಮಂಡಗದ್ದೆ ಬಳಿ ವೇಗವಾಗಿ ಬರುತ್ತಿದ್ದ ಬಸ್‌ಗೆ ಕಾಡಾನೆ ದಿಢೀ‌ರ್ ಎದುರಾಗಿದೆ. ಅನಿರೀಕ್ಷಿತವಾಗಿ ಆನೆಯನ್ನು ನೋಡಿದ ಬಸ್ ಚಾಲಕ ತಕ್ಷಣವೇ ಬಸ್ ಅನ್ನು ನಿಲ್ಲಿಸಿ ಅಪಾಯವನ್ನು ತಪ್ಪಿಸಿದ್ದಾರೆ. ಈ ಘಟನೆಯಿಂದಾಗಿ ಬಸ್‌ನಲ್ಲಿದ್ದ ಪ್ರಯಾಣಿಕರು ಒಮ್ಮೆಲೆ ಆತಂಕಕ್ಕೊಳಗಾದರು. ಹಲವರು ತಮ್ಮ ಮೊಬೈಲ್‌ ಕ್ಯಾಮರಾಗಳಲ್ಲಿ ಆನೆಯ ಚಿತ್ರಗಳನ್ನು ಸೆರೆಹಿಡಿದರೆ, ಇನ್ನು ಕೆಲವರು ಗಾಬರಿಯಾಗಿದ್ದರು….

Read More

ಹಳೆಯ ದ್ವೇಷ : ಮಾರಾಕಾಸ್ತ್ರದಿಂದ ಕೊಚ್ಚಿ ಮಹಿಳೆಯ ಭೀಕರ ಕೊಲೆ

ಹಳೆಯ ದ್ವೇಷ : ಮಾರಾಕಾಸ್ತ್ರದಿಂದ ಕೊಚ್ಚಿ ಮಹಿಳೆಯ ಭೀಕರ ಕೊಲೆ ಶಿವಮೊಗ್ಗ ತಾಲೂಕಿನ ದುಮ್ಮಳ್ಳಿಯ ಸಿದ್ದೇಶ್ವರ ನಗರದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ 45 ವರ್ಷದ ಮಹಿಳೆಯೊಬ್ಬರನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿದೆ ಎಂದು ಶಂಕಿಸಲಾಗಿದೆ. ಮೃತ ದುರ್ದೈವಿಯನ್ನು ಗಂಗಮ್ಮ ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ತುಂಗಾನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮೆಗ್ಗಾನ್ ಶವಾಗಾರಕ್ಕೆ ರವಾನಿಸಲಾಗಿದೆ. ಈ ಸಂಬಂಧ ನಾಗೇಶ್ ನಾಯ್ಕ ಮತ್ತು ಹರೀಶ್ ನಾಯ್ಕ ಎಂಬುವರನ್ನು ಪೊಲೀಸರು…

Read More

ಮಹಿಳಾ ಸಹೋದ್ಯೋಗಿನಿ ಮೇಲೆ ಬ್ಯಾಂಕ್ ಅಧಿಕಾರಿಯ ಅಸಭ್ಯ ವರ್ತನೆ – ಪ್ರಕರಣ ದಾಖಲು

ಮಹಿಳಾ ಸಹೋದ್ಯೋಗಿನಿ ಮೇಲೆ ಬ್ಯಾಂಕ್ ಅಧಿಕಾರಿಯ ಅಸಭ್ಯ ವರ್ತನೆ – ಪ್ರಕರಣ ದಾಖಲು ಶಿವಮೊಗ್ಗ : ಬ್ಯಾಂಕಿನ ಮಹಿಳಾ ಸಿಬ್ಬಂದಿಯೊಬ್ಬರು ಅದೇ ಬ್ಯಾಂಕಿನ ಹಿರಿಯ ಅಧಿಕಾರಿ ಮತ್ತು ಸಿಬ್ಬಂದಿ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ದಾಖಲಾದ ಪ್ರಕರಣವನ್ನು ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್‌ ಠಾಣೆ ವರ್ಗಾಯಿಸಲಾಗಿದೆ. ಬ್ಯಾಂಕ್‌ ಒಂದರ ಶಿವಮೊಗ್ಗ ಶಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಸಿಬ್ಬಂದಿಗೆ ಬ್ಯಾಂಕಿನ ಹಿರಿಯ ಅಧಿಕಾರಿಯೊಬ್ಬರು ಲೈಂಗಿಕ ದೌರ್ಜನ್ಯ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಕಚೇರಿ ಕೆಲಸಕ್ಕೆ ಒಬ್ಬರನ್ನೇ ಕರೆಯುವುದು,…

Read More

ಮೂರು ತಿಂಗಳ ಗರ್ಭಿಣಿ ಪತ್ನಿಯನ್ನು ಮನೆಯಿಂದ ಹೊರಹಾಕಿದ ಪತಿಗೆ ಒಂದು ವರ್ಷ ಜೈಲು ಶಿಕ್ಷೆ

ಮೂರು ತಿಂಗಳ ಗರ್ಭಿಣಿ ಪತ್ನಿಯನ್ನು ಮನೆಯಿಂದ ಹೊರಹಾಕಿದ ಪತಿಗೆ ಒಂದು ವರ್ಷ ಜೈಲು ಶಿಕ್ಷೆ ಶಿವಮೊಗ್ಗ: ಅಕ್ರಮ ಸಂಬಂಧ ಹೊಂದಿದ್ದಲ್ಲದೆ, ಗರ್ಭಿಣಿಯಾಗಿದ್ದ ತನ್ನ ಪತ್ನಿಯನ್ನು ಮನೆಯಿಂದ ಹೊರಹಾಕಿದ ಪತಿಗೆ ಶಿವಮೊಗ್ಗದ ನ್ಯಾಯಾಲಯವು ಒಂದು ವರ್ಷದ ಸಾದಾ ಕಾರಾಗೃಹ ಶಿಕ್ಷೆ ವಿಧಿಸಿದೆ. ಹರೀಶ್ ಎಂಬುವವರ ವಿರುದ್ಧ ಆತನ ಪತ್ನಿ ನೀಡಿದ ದೂರಿನ ವಿಚಾರಣೆ ಪೂರ್ಣಗೊಂಡ ಬಳಿಕ, 2ನೇ ಜೆ.ಎಂ.ಎಫ್.ಸಿ ನ್ಯಾಯಾಲಯವು ಅಕ್ಟೋಬರ್ 29, 2025ರಂದು ತೀರ್ಪು ನೀಡಿದೆ. ವಿವಾಹದ ಬಳಿಕ ಹರೀಶ್ ಮತ್ತೊಬ್ಬ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಬೆಳೆಸಿಕೊಂಡಿದ್ದ….

Read More

ರಿಪ್ಪನ್ ಪೇಟೆ |ಕೆಲಸಕ್ಕೆ ತೆರಳಿದ್ದ ಪೋಸ್ಟ್ ಮಾಸ್ಟರ್ ನಾಪತ್ತೆ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೋಟೆತಾರಿಗ ನಿವಾಸಿಯಾದ ಸಂತೋಷ್ ಕುಮಾರ್ ಬಿನ್ ಕೇಶವ (38) ಕಳೆದ ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದು ಇವರ ಪತ್ತೆಗೆ ಸಹಕರಿಸುವಂತೆ ಪೊಲೀಸರು ಮನವಿ ಸಲ್ಲಿಸಿದ್ದಾರೆ. ಸಂತೋಷ್ ಕೋಡೂರು ಪೋಸ್ಟ್ ಆಫೀಸ್ ನಲ್ಲಿ ಪೋಸ್ಟ್ ಮಾಸ್ಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದು ನ. 05 ರಂದು ಮನೆಯಿಂದ ತೆರಳಿದ್ದು ಈವರೆಗೂ ಹಿಂದಿರುಗಿರುವುದಿಲ್ಲ ಈ ಬಗ್ಗೆ ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇವರ ಕುರಿತು ಯಾವುದೇ ಸುಳಿವು ಇದ್ದಲ್ಲಿ ರಿಪ್ಪನ್‌ಪೇಟೆ ಪೊಲೀಸ್ ಠಾಣೆಗೆ (ಮೊ‌:…

Read More

ಆನಂದಪುರ | ಮನೆಗೆ ಆಕಸ್ಮಿಕ ಬೆಂಕಿ – ಅಪಾರ ನಷ್ಟ

ಆನಂದಪುರ | ಮನೆಗೆ ಆಕಸ್ಮಿಕ ಬೆಂಕಿ – ಅಪಾರ ನಷ್ಟ ಆನಂದಪುರ: ಇಲ್ಲಿಗೆ  ಸಮೀಪವಿರುವ ಮದ್ಲೆಸರ ನಾವಟಿ ಗ್ರಾಮದಲ್ಲಿ   ಆಕಸ್ಮಿಕವಾಗಿ ಮನೆಗೆ ಬೆಂಕಿ ತಗುಲಿ ಅಪಾರ ನಷ್ಟವಾಗಿದೆ. ಘಟನೆಯಲ್ಲಿ ಮನೆಯು ಸಂಪೂರ್ಣವಾಗಿ ಸುಟ್ಟು ಹೋಗಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಅಗ್ನಿಗೆ ಆಹುತಿಯಾಗಿವೆ. ಯಡೇಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮದ್ಲೆಸರ ನಾವಟಿ ಗ್ರಾಮದ ನಿವಾಸಿ ಜಯಮ್ಮ ಅವರ ಮನೆಯಲ್ಲಿ ಘಟನೆ ನಡೆದಿದೆ. ಮನೆಯ ಮೇಲ್ಚಾವಣಿ ಸೇರಿದಂತೆ ಒಳಗೆ ಇದ್ದ ಎಲ್ಲಾ ಗೃಹೋಪಯೋಗಿ ವಸ್ತುಗಳು ಭಸ್ಮವಾಗಿವೆ. ಸ್ಥಳೀಯ ಶಾಸಕರಾದ…

Read More

ಕಾಲೇಜು‌ ಮಕ್ಕಳಿದ್ದ ಪ್ರವಾಸಿ ಬಸ್ ಪಲ್ಟಿ – ಐವರಿಗೆ ಗಂಭೀರ ಗಾಯ

ಕಾಲೇಜು‌ ಮಕ್ಕಳಿದ್ದ ಪ್ರವಾಸಿ ಬಸ್ ಪಲ್ಟಿ – ಐವರಿಗೆ ಗಂಭೀರ ಗಾಯ ಪ್ರವಾಸಕ್ಕೆ ತೆರಳುತ್ತಿದ್ದ ಖಾಸಗಿ ಬಸ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಬಸ್‌ನಲ್ಲಿದ್ದ ಐವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದು, 11 ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ಶೃಂಗೇರಿ ತಾಲೂಕಿನ ಕಾವಡಿ ಕ್ರಷರ್ ಬಳಿ ನಡೆದಿದೆ. ಗಂಭೀರವಾಗಿ ಗಾಯಗೊಂಡ ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ರವಾನಿಸಲಾಗಿದೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯ ವಾಸವಿ ಕಾಲೇಜಿನ ವಿದ್ಯಾರ್ಥಿಗಳು ಪ್ರವಾಸಕ್ಕೆಂದು ಶೃಂಗೇರಿಗೆ ಆಗಮಿಸುತ್ತಿದ್ದರು. ಈ…

Read More

ಹೆಂಡತಿಗೆ ಜೀವ ಬೆದರಿಕೆ ಹಾಕಿದ್ದ ಪತಿಗೆ 1 ವರ್ಷ ಕಾರಾಗೃಹ ಶಿಕ್ಷೆ ವಿಧಿಸಿದ ಕೋರ್ಟ್

ಹೆಂಡತಿಗೆ ಜೀವ ಬೆದರಿಕೆ ಹಾಕಿದ್ದ ಪತಿಗೆ 1 ವರ್ಷ ಕಾರಾಗೃಹ ಶಿಕ್ಷೆ ವಿಧಿಸಿದ ಕೋರ್ಟ್ ಶಿವಮೊಗ್ಗ : ತನ್ನ ಹೆಂಡತಿಗೆ ಜೀವ ಬೆದರಿಕೆ ಹಾಕಿ ಮನೆಯಿಂದ ಹೊರಹಾಕಿದ್ದ ಪತಿ ಗೆ ಒಂದು ವರ್ಷ ಕಾರಾಗೃಹ ಶಿಕ್ಷೆ ವಿಧಿಸಿ ಶಿವಮೊಗ್ಗ ಕೋರ್ಟ್ ತೀರ್ಪು ನೀಡಿದೆ. ಭದ್ರಾವತಿ ತಾಲೂಕಿನ ಗುಂಡೇರಿ ಕ್ಯಾಂಪ್ ನಿವಾಸಿ ಹರೀಶ್ ಎಂಬಾತ 2018 ರಲ್ಲಿ ಮದುವೆಯಾಗಿದ್ದ ಹೆಂಡತಿಗೆ ಕಿರುಕುಳ ನೀಡಿ ಮನೆಯಿಂದ ಹೊರಹಾಕಿದ್ದ. ನಂತರ ಮತ್ತೆ ಮನೆಗೆ ಬಂದಾಗ ಆಕೆಗೆ ಜೀವ ಬೆದರಿಕೆ ಹಾಕಿ ಮನೆಯಿಂದ…

Read More

ಇಬ್ಬರು ಅಂತರ್ ರಾಜ್ಯ ಬೈಕ್ ಕಳ್ಳರ ಬಂಧನ – 14 ದ್ವಿಚಕ್ರ ವಾಹನಗಳು ವಶಕ್ಕೆ

ಇಬ್ಬರು ಅಂತರ್ ರಾಜ್ಯ ಬೈಕ್ ಕಳ್ಳರ ಬಂಧನ – 14 ದ್ವಿಚಕ್ರ ವಾಹನಗಳು ವಶಕ್ಕೆ ಶಿವಮೊಗ್ಗ : ಇಬ್ಬರು ದ್ವಿಚಕ್ರ ವಾಹನ ಕಳ್ಳರನ್ನು ಬಂಧಿಸಿ ವಿವಿಧ ಜಿಲ್ಲೆಗಳಲ್ಲಿ ಕಳ್ಳತನ ಮಾಡಲಾಗಿದ್ದ 14 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳುವಲ್ಲಿ ಭದ್ರಾವತಿ ಹಳೇನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಶಿವಮೊಗ್ಗ ಟಿಪ್ಪುನಗರದ ನಿವಾಸಿ ಶಾದಾಬ್ ಖಾನ್ (23) ಹಾಗೂ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕು, ನೆಲ್ಲೂರು ಗ್ರಾಮದ ನಿವಾಸಿ ಶಹಬಾಜ್ ಅಹ್ಮದ್(24) ಎಂಬ ಇಬ್ಬರು ಕಳ್ಳರನ್ನು ಬಂಧಿಸಿ 14 ದ್ವಿಚಕ್ರ ವಾಹನಗಳನ್ನು ಪೊಲೀಸರು…

Read More
Exit mobile version