Headlines

ಕಾರು ತೆಗೆಯುವಂತೆ ಹಾರನ್ ಮಾಡಿದ್ದಕ್ಕೆ ಖಾಸಗಿ ಬಸ್ ಚಾಲಕನ ಮೇಲೆ ಹಲ್ಲೆ

ಕಾರು ತೆಗೆಯುವಂತೆ ಹಾರನ್ ಮಾಡಿದ್ದಕ್ಕೆ ಖಾಸಗಿ ಬಸ್ ಚಾಲಕನ ಮೇಲೆ ಹಲ್ಲೆ ಶಿವಮೊಗ್ಗ : ಅಡ್ಡ ನಿಲ್ಲಿಸಿದ್ದ ಕಾರು ತೆಗೆಯುವಂತೆ ಹಾರನ್ಮಾಡಿದ್ದಕ್ಕೆ ನವದುರ್ಗ ಬಸ್ ಚಾಲಕನ ಮೇಲೆ ಹಲ್ಲೆ ನಡೆಸಲಾಗಿದೆ. ಶಿವಮೊಗ್ಗದ ಬಸ್‌ ನಿಲ್ದಾಣದ ಸಮೀಪ ಬ್ರೆಟ್ ಹೊಟೇಲ್ ಎದುರು ಘಟನೆ ನಡೆದಿದೆ. ನವದುರ್ಗ ಬಸ್‌ ಚಾಲಕ ಬಿ.ಎಸ್.ರವಿ ಮೇಲೆ ಹಲ್ಲೆ ನಡೆಸಲಾಗಿದೆ. ಬಸ್ಸು ರಾತ್ರಿ ಶಿವಮೊಗ್ಗದಿಂದ ಮಂಗಳೂರಿಗೆ ತೆರಳುತ್ತಿತ್ತು. ನಿಲ್ದಾಣದಿಂದ ಹೊರ ಬಂದು ಬೈಟ್ ಹೊಟೇಲ್ ಮುಂಭಾಗ ಪ್ರಯಾಣಿಕರನ್ನು ಹತ್ತಿಸಿಕೊಳ್ಳಲು ಚಾಲಕ ರವಿ ಬಸ್ ನಿಲ್ಲಿಸಿದ್ದರು….

Read More

RIPPONPETE | ತಳಲೆಯಲ್ಲಿ ನಾಳೆ ಟ್ರಾಕ್ಟರ್ ಮತ್ತು ಟ್ರೈಲರ್ ರಿವರ್ಸ್ ಸ್ಪರ್ಧೆ – ಕನ್ನಡ ರಾಜ್ಯೋತ್ಸವದ ಸಂಭ್ರಮದಲ್ಲಿ ವಿಭಿನ್ನ ಕಾರ್ಯಕ್ರಮ

RIPPONPETE | ತಳಲೆಯಲ್ಲಿ ನಾಳೆ ಟ್ರಾಕ್ಟರ್ ಮತ್ತು ಟ್ರೈಲರ್ ರಿವರ್ಸ್ ಸ್ಪರ್ಧೆ – ಕನ್ನಡ ರಾಜ್ಯೋತ್ಸವದ ಸಂಭ್ರಮದಲ್ಲಿ ವಿಭಿನ್ನ ಕಾರ್ಯಕ್ರಮ ರಿಪ್ಪನ್ ಪೇಟೆ : ಕುಮದ್ವತಿ ಟ್ರಾಕ್ಟರ್ ಮಾಲೀಕರು, ಚಾಲಕರು ಹಾಗೂ ಗೆಳೆಯರ ಬಳಗ ಮೂಗೂಡ್ತಿ-ತಳಲೆ ಇವರ ವತಿಯಿಂದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಪ್ರಥಮ ವರ್ಷದ ಟ್ರಾಕ್ಟರ್ ಮತ್ತು ಟ್ರೈಲರ್ ರಿವರ್ಸ್ ಸ್ಪರ್ಧೆ ಆಯೋಜಿಸಲಾಗಿದೆ. ಈ ಸ್ಪರ್ಧೆ ನವೆಂಬರ್ 9, 2025, ಭಾನುವಾರ ಬೆಳಗ್ಗೆ 9 ಗಂಟೆಗೆ ನಡೆಯಲಿದ್ದು, ಶಿವಮೊಗ್ಗ ಜಿಲ್ಲೆಯೊಳಗಿನ ಸ್ಪರ್ಧಿಗಳಿಗೆ ಮಾತ್ರ ಭಾಗವಹಿಸಲು ಅವಕಾಶ…

Read More

SHIVAMOGGA | ‘ಅಕ್ಕ ಪಡೆ’ ತಂಡ‌‌ ರಚನೆಗೆ ಮಹಿಳೆಯರಿಂದ ಅರ್ಜಿ‌ಆಹ್ವಾನ

SHIVAMOGGA | ಅಕ್ಕ ಪಡೆ ತಂಡ‌‌ ರಚನೆಗೆ ಮಹಿಳೆಯರಿಂದ ಅರ್ಜಿ‌ಆಹ್ವಾನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಸಂಕಷ್ಟದಲ್ಲಿರುವ ದುರ್ಬಲ ಮಹಿಳೆಯರು ಮತ್ತು ಮಕ್ಕಳಿಗೆ ತಕ್ಷಣದ ರಕ್ಷಣೆ ನೀಡುವ ಉದ್ದೇಶದಿಂದ ಜಿಲ್ಲೆಯಲ್ಲಿ ಅಕ್ಕ ಪಡೆ ತಂಡ ರಚನೆ ಮಾಡಲು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ತಂಡಕ್ಕೆ ಎನ್ ಸಿ ಸಿ ‘ಸಿ’ ಪ್ರಮಾಣ ಪತ್ರ ಹೊಂದಿರುವ 5 ಮಹಿಳಾ ಅಭ್ಯರ್ಥಿಗಳನ್ನು ಸೇವಾ ಗುತ್ತಿಗೆ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಅಭ್ಯರ್ಥಿಗಳು 35 ರಿಂದ 45 ವರ್ಷದೊಳಗಿನವರಾಗಿದ್ದು,…

Read More

ಧರ್ಮಸ್ಥಳ ಸಂಘಕ್ಕೆ ಹಣ ಕಟ್ಟಲು ತೆರಳುತ್ತಿದ್ದ ಯುವತಿಯ ಸರ ಅಪಹರಣ

ಧರ್ಮಸ್ಥಳ ಸಂಘಕ್ಕೆ ಹಣ ಕಟ್ಟಲು ತೆರಳುತ್ತಿದ್ದ ಯುವತಿಯ ಸರ ಅಪಹರಣ ಶಿವಮೊಗ್ಗ : ಧರ್ಮಸ್ಥಳ ಸಂಘಕ್ಕೆ ಹಣ ಕಟ್ಟಲು ಸ್ಕೂಟಿಯಲ್ಲಿ ತೆರಳುತ್ತಿದ್ದ ಯುವತಿಯೊಬ್ಬರ ಸರವನ್ನು ಕಳ್ಳನೊಬ್ಬ ಎಳೆದು ಕದ್ದೊಯ್ದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಮಾಹಿತಿಯ ಪ್ರಕಾರ, ಪೇಪರ್ ಫ್ಯಾಕ್ಟರಿಯ ಶಾರದ ನಗರ ನಿವಾಸಿಯಾದ ಯುವತಿ ಸ್ಕೂಟಿಯಲ್ಲಿ ತೆರಳುತ್ತಿದ್ದ ವೇಳೆ ಹಿಂದಿನಿಂದ ಬಂದ ಬೈಕ್ ಸವಾರ ಕಳ್ಳನೊಬ್ಬ ಆಕೆಯ ಕೊರಳಲ್ಲಿದ್ದ 9 ಗ್ರಾಂ ತೂಕದ ಚಿನ್ನದ ಸರವನ್ನು ಎಳೆದು ಕದ್ದೊಯ್ದಿದ್ದಾನೆ. ಅಕಸ್ಮಿಕ ಎಳೆಯಾಟದಿಂದ ಯುವತಿ ಬೈಕ್‌ನಿಂದ ಕೆಳಗೆ ಬಿದ್ದು…

Read More

ಸ್ವೀಟ್‌ ಬಾಕ್ಸ್‌ನಲ್ಲಿ ಗಾಂಜಾ ಅಡಗಿಸಿ ಜೈಲಿಗೆ ತರುವ ಯತ್ನ – ಯುವಕನ ಬಂಧನ

ಸ್ವೀಟ್‌ ಬಾಕ್ಸ್‌ನಲ್ಲಿ ಗಾಂಜಾ ಅಡಗಿಸಿ ಜೈಲಿಗೆ ತರುವ ಯತ್ನ – ಯುವಕನ ಬಂಧನ ಶಿವಮೊಗ್ಗ: ಖೈದಿಯೊಬ್ಬನಿಗೆ ಸಿಹಿ ನೀಡುವ ನೆಪದಲ್ಲಿ ಗಾಂಜಾ ತರುವ ಯತ್ನ ಮಾಡಿದ ಯುವಕನ ಕೃತ್ಯ ಬಹಿರಂಗಗೊಂಡಿದೆ. ಶಿವಮೊಗ್ಗದ ಕೇಂದ್ರ ಕಾರಾಗೃಹದ ತಪಾಸಣೆ ವೇಳೆ ಈ ಘಟನೆ ಬೆಳಕಿಗೆ ಬಂದಿದೆ. ಸೋಮಿನಕೊಪ್ಪದ ನಿವಾಸಿ ಸೈಯದ್ ವಾಸೀಂ (25) ಬಂಧಿತನಾಗಿದ್ದಾನೆ. ಆತ ಸ್ಥಳೀಯ ಬೇಕರಿಯಿಂದ ತಂದಿದ್ದ ಸ್ವೀಟ್‌ ಬಾಕ್ಸ್‌ನಲ್ಲಿ ಗಾಂಜಾ ಅಡಗಿಸಿಕೊಂಡು ಖೈದಿ ಮೆಹಬೂಬ್ ಖಾನ್‌ಗೆ ತಲುಪಿಸಲು ಬಂದಿದ್ದ ಎಂದು ತಿಳಿದುಬಂದಿದೆ. ಜೈಲು ಪ್ರವೇಶದ್ವಾರದಲ್ಲಿ ನಿಯೋಜಿತರಾಗಿದ್ದ…

Read More

ಹೊಸನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ. ಚಂದ್ರಮೌಳಿಗೆ ಮಾತೃವಿಯೋಗ

ಹೊಸನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ. ಚಂದ್ರಮೌಳಿಗೆ ಮಾತೃವಿಯೋಗ ಹೊಸನಗರ: ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ. ಚಂದ್ರಮೌಳಿ ಅವರ ತಾಯಿ ಗಿರಿಜಮ್ಮ (90) ಅಲ್ಪಕಾಲದ ಅನಾರೋಗ್ಯದಿಂದ ಗುರುವಾರ ಮಧ್ಯಾಹ್ನ 12 ಗಂಟೆಗೆ ತಮ್ಮ ಸ್ವಗೃಹ ಗೌಡಕೊಪ್ಪದಲ್ಲಿ ನಿಧನರಾದರು. ಮೃತರು ನಾಲ್ವರು ಪುತ್ರರು, ಇಬ್ಬರು ಪುತ್ರಿಯರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ಕೋಡೂರಿನ ಗೌಡಕೊಪ್ಪದಲ್ಲಿರುವ ಅವರ ಜಮೀನಿನಲ್ಲಿ ವೀರಶೈವ ಲಿಂಗಾಯತ ಸಂಪ್ರದಾಯದಂತೆ ನೆರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ….

Read More

SSLC, ದ್ವಿತೀಯ ಪಿಯುಸಿ ಪರೀಕ್ಷೆ : 1 ಮತ್ತು 2 ಅಂತಿಮ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

SSLC, ದ್ವಿತೀಯ ಪಿಯುಸಿ ಪರೀಕ್ಷೆ : 1 ಮತ್ತು 2 ಅಂತಿಮ ಪರೀಕ್ಷೆಯ ವೇಳಾಪಟ್ಟಿ ಪ್ರಕಟ ಬೆಂಗಳೂರು: 2025-26ನೇ ಸಾಲಿನ SSLC ಮತ್ತು ದ್ವೀತಿಯ ಪಿಯುಸಿ ಪರೀಕ್ಷೆ 1 ಮತ್ತು 2 ಅಂತಿಮ ವೇಳಾಪಟ್ಟಿಯನ್ನ ಶಿಕ್ಷಣ ‌ಇಲಾಖೆ ಪ್ರಕಟ ಮಾಡಿದೆ. ಫೆಬ್ರವರಿಯಿಂದಲೇ ಈ ವರ್ಷದ ಪರೀಕ್ಷೆಗಳು ಪ್ರಾರಂಭವಾಗಲಿದ್ದು, ಮೇ ಗೆ ಎರಡು ಪರೀಕ್ಷೆಗಳು ಮುಗಿಯಲಿವೆ. SSLC ಪರೀಕ್ಷೆ 1 ಮಾರ್ಚ್ 18 ರಿಂದ ಏಪ್ರಿಲ್ 2 ವರೆಗೆ ನಡೆದರೆ, SSLC ಪರೀಕ್ಷೆ 2 ಮೇ 18 ರಿಂದ…

Read More

ಅಂಗನವಾಡಿಗೆ ನುಗ್ಗಿ ಎಣ್ಣೆ ಪಾರ್ಟಿ ಮಾಡಿ ಮೊಟ್ಟೆ ತಿಂದು , ಧಾನ್ಯಗಳನ್ನು ಹಾಳುಗೆಡವಿದ ದುಷ್ಕರ್ಮಿಗಳು

ಅಂಗನವಾಡಿಗೆ ನುಗ್ಗಿ ಎಣ್ಣೆ ಪಾರ್ಟಿ ಮಾಡಿ ಮೊಟ್ಟೆ , ಧಾನ್ಯ ಹಾಳುಗೆಡವಿದ ದುಷ್ಕರ್ಮಿಗಳು ಶಿವಮೊಗ್ಗ: ತಾಲೂಕಿನ ಕುಂಸಿ ಗ್ರಾಮದ ಅಂಗನವಾಡಿ ಕೇಂದ್ರ ಮತ್ತು ಮಹಿಳಾ ಒಕ್ಕೂಟದ ಕೊಠಡಿಗೆ ನುಗ್ಗಿದ ದುಷ್ಕರ್ಮಿಗಳ ಕೃತ್ಯ ಸ್ಥಳೀಯರನ್ನು ಬೆಚ್ಚಿಬೀಳಿಸಿದೆ. ಮದ್ಯಪಾನದಲ್ಲೇ ತೇಲಿದ ದುಷ್ಕರ್ಮಿಗಳು ಮೊದಲು ಕೊಠಡಿಗಳ ಬೀಗಗಳನ್ನು ಮುರಿದು ಒಳನುಗ್ಗಿದ್ದಾರೆ. ನಂತರ ಟೇಬಲ್ ಸುತ್ತಲು ಕುರ್ಚಿಗಳನ್ನು ಅಣಿಗೊಳಿಸಿ ಕುಳಿತು ಮದ್ಯ ಸೇವಿಸಿದ್ದು, ಸ್ಥಳದಲ್ಲಿ ಮದ್ಯದ ಬಾಟಲಿಗಳ ಕವರ್‌ಗಳು ಹಾಗೂ ಟವೆಲ್‌ಗಳು ಚೆಲ್ಲಾಪಿಲ್ಲಿಯಾಗಿರುವುದು ಪತ್ತೆಯಾಗಿದೆ. ಅಲ್ಲದೆ, ಸರ್ಕಾರದಿಂದ ಅಂಗನವಾಡಿಗೆ ನೀಡಲಾಗಿದ್ದ ಆಹಾರ ಧಾನ್ಯಗಳನ್ನು…

Read More

ಮಹಿಳೆಯ ಖಾಸಗಿ ಫೊಟೊ ಕಳುಹಿಸಿ 10 ಲಕ್ಷ ರೂ. ಗೆ ಬೇಡಿಕೆ ಇಟ್ಟ ಭೂಪ – ಪ್ರಕರಣ ದಾಖಲು

ಮಹಿಳೆಯ ಖಾಸಗಿ ಫೊಟೊ ಕಳುಹಿಸಿ 10 ಲಕ್ಷ ರೂ. ಗೆ ಬೇಡಿಕೆ ಇಟ್ಟ ಭೂಪ – ಪ್ರಕರಣ ದಾಖಲು ಶಿವಮೊಗ್ಗ: ಮಹಿಳೆಯೊಬ್ಬರ ಖಾಸಗಿ ಫೋಟೋ ಹಾಗೂ ವಿಡಿಯೋಗಳನ್ನು ದುರುಪಯೋಗಪಡಿಸಿಕೊಂಡು, ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುವುದಾಗಿ ಬೆದರಿಸಿ, ಬರೋಬ್ಬರಿ ₹10 ಲಕ್ಷ ಹಣವನ್ನು ಬೇಡಿಕೊಂಡ ಘಟನೆ ಶಿವಮೊಗ್ಗದಲ್ಲಿ ಬೆಳಕಿಗೆ ಬಂದಿದೆ. ಈ ಕುರಿತು ಸಂತ್ರಸ್ತ ಮಹಿಳೆ ಶಿವಮೊಗ್ಗದ ಸಿಇಎನ್ (CEN) ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮಾಹಿತಿಯ ಪ್ರಕಾರ, ಅಕ್ಟೋಬರ್ 31ರಂದು ಅಪರಿಚಿತ ವ್ಯಕ್ತಿಯೊಬ್ಬ ಮಹಿಳೆಯ…

Read More

ಹಾಸ್ಟೆಲ್‌ ಟೆರೇಸ್‌ ಮೇಲೆ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಮೃತದೇಹ ಪತ್ತೆ

ಹಾಸ್ಟೆಲ್‌ ಟೆರೇಸ್‌ ಮೇಲೆ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಮೃತದೇಹ ಪತ್ತೆ ಶಿವಮೊಗ್ಗ: ಹಾಸ್ಟೆಲ್‌ನ ಟೆರೇಸ್‌ ಮೇಲೆ ವಿದ್ಯಾರ್ಥಿನಿಯೊಬ್ಬರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಶಿವಮೊಗ್ಗದ ಕೋಟೆ ರಸ್ತೆಯ ಸರ್ಕಾರಿ ಬಾಲಕಿಯರ ವಸತಿ ನಿಲಯದಲ್ಲಿ ನಡೆದಿದೆ. ಭದ್ರಾವತಿ ತಾಲೂಕು ಗಂಗೂರಿನ ವನಿಷಾ (21) ಮೃತ ದುರ್ಧೈವಿಯಾಗಿದ್ದಾರೆ. ಹಾಸ್ಟೆಲ್‌ನ ಟೆರೇಸ್‌ನಲ್ಲಿರುವ ನೀರಿನ ಟ್ಯಾಂಕ್‌ ಪಕ್ಕದಲ್ಲಿ ವನಿಷಾ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಟೆರೇಸ್‌ ಮೇಲೆ ಹೋದ ವಿದ್ಯಾರ್ಥಿನಿಯರು ಇದನ್ನು ಗಮನಿಸಿ ಕೂಡಲೆ ವಾರ್ಡನ್‌ಗೆ ಮಾಹಿತಿ ನೀಡಿದ್ದಾರೆ.ಘಟನೆಗೆ ನಿಖರವಾದ ಕಾರಣ…

Read More