Headlines

ಮಕ್ಕಳ ಪ್ರತಿಭೆ ಹೊರಹಾಕಲು ಪ್ರತಿಭಾ ಕಾರಂಜಿ ಸೂಕ್ತ ವೇದಿಕೆ – ಕ್ಷೇತ್ರ ಶಿಕ್ಷಣಾಧಿಕಾರಿ ಗಣೇಶ್ ವೈ

ಮಕ್ಕಳ ಪ್ರತಿಭೆ ಹೊರಹಾಕಲು ಪ್ರತಿಭಾ ಕಾರಂಜಿ ಸೂಕ್ತ ವೇದಿಕೆ – ಕ್ಷೇತ್ರ ಶಿಕ್ಷಣಾಧಿಕಾರಿ ಗಣೇಶ್ ವೈ

ರಿಪ್ಪನ್ ಪೇಟೆ : ಮಕ್ಕಳಲ್ಲಿ ಹುದುಗಿರುವ ಪ್ರತಿಭೆ ಅರಳಲು ಪ್ರತಿಭಾ ಕಾರಂಜಿ ಸೂಕ್ತ ವೇದಿಕೆಯಾಗಿದ್ದು, ಮಕ್ಕಳು ಕೂಡ ಉತ್ಸಾಹದಿಂದ ಪಾಲ್ಗೊಳ್ಳಬೇಕು ಎಂದು ಹೊಸನಗರ ಕ್ಷೇತ್ರ ಶಿಕ್ಷಣಾಧಿಕಾರಿ ಗಣೇಶ್ ವೈ ಹೇಳಿದರು.

ಸಾರ್ವಜನಿಕ ಶಿಕ್ಷ ಣ ಇಲಾಖೆಯಿಂದ ಸೋಮವಾರ ಏರ್ಪಡಿಸಿದ್ದ ಮೂಗೂಡ್ತಿ ಕ್ಲಸ್ಟರ್ ಮಟ್ಟದ ಶಾಲೆಗಳ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿ ಸರಕಾರ ಶಾಲಾ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಪ್ರತಿಭಾ ಕಾರಂಜಿ, ಮಕ್ಕಳ ಮೇಳ, ಕ್ರಿಡಾ ಕಾರ್ಯಕ್ರಮಗಳನ್ನು ಆಯೋಜಿಸಿದೆ. ಇಲ್ಲಿ ಮಕ್ಕಳು ತಮ್ಮಲ್ಲಿರುವ ಕಲೆ, ಸಾಹಿತ್ಯ, ಜಾನಪದ ಪ್ರಾಕಾರದ ಪ್ರತಿಭೆಯನ್ನು ತೋರಿ ಸಾಂಸ್ಕೃತಿಕವಾಗಿ ಮುಂದೆ ಬರಬೇಕು ಎಂದರು.

ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಹೊಸನಗರ ತಾಲೂಕಿನ ವಿದ್ಯಾರ್ಥಿಗಳು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಜಿಲ್ಲೆಯಲ್ಲಿಯೇ ಅತ್ಯುತ್ತಮ ಸ್ಥಾನ ಪಡೆಯಬೇಕು ಆ ನಿಟ್ಟಿನಲ್ಲಿ ನಾನು ಯೋಜನೆಯನ್ನು ರೂಪಿಸಿದ್ದು ಶಿಕ್ಷಕರ ಸಹಕಾರದಿಂದ ಕಾರ್ಯರೂಪಕ್ಕೆ ಬರುವ ವಿಶ್ವಾಸವಿದೆ ಎಂದರು.

ಗ್ರಾಪಂ ಸದಸ್ಯ ವೈ ಟಿ ಷಣ್ಮುಖ ಮಾತನಾಡಿ ಖಾಸಗಿ ಶಾಲೆಗಳ ಅಬ್ಬರದಲ್ಲಿ ಹಲವು ಸರ್ಕಾರಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು ಈ ಬಗ್ಗೆ ಸಂಬಂಧಪಟ್ಟವರು ಕ್ರಮ ಕೈಗೊಳ್ಳುವ ಮೂಲಕ ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸಬೇಕಿದೆ ಎಂದರು.

ಎಸ್ ಡಿ ಎಂ ಸಿ ಅಧ್ಯಕ್ಷ ರಾಘವೇಂದ್ರ ಕೊಳವಳ್ಳಿ ಅಧ್ಯಕ್ಷತೆ ವಹಿಸಿದ್ದರು.

ಈ ಸಂಧರ್ಭದಲ್ಲಿ ಗ್ರಾಪ ಅಧ್ಯಕ್ಷೆ ನಾಗರತ್ನ,  ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷ ಜಗದೀಶ್ ಕಾಗಿನೆಲೆ ,SDMAC ಉಪಾಧ್ಯಕ್ಷೆ   ಸಂಗೀತಾ , ಪ್ರಾಥಮಿಕ ಶಾಲಾ ಸಂಘದ ಅಧ್ಯಕ್ಷ ಸುರೇಶ್ ಹೆಚ್ ಆರ್ , ಪುಟ್ಟಸ್ವಾಮಿ , ನಾಗರಾಜಪ್ಪ ,ಗ್ರಾಪಂ ಸದಸ್ಯರಾದ ಸದಸ್ಯರು ವಿನಂತಿ ರಾಘವೇಂದ್ರ, ವಿಶುಕುಮಾರ್, ಶೇಕ್ರಪ್ಪ, ನಸೀಮಾ, ಸುಮಿತ್ರಮ್ಮಾ, ನಾಗರತ್ನ, ಶಿಕ್ಷಕ ಉಮೇಶ್  ಹಾಗೂ ಇನ್ನಿತರರು ಇದ್ದರು.