ರಿಪ್ಪನ್ ಪೇಟೆಯಲ್ಲಿ ತಂಬಾಕು ನಿಯಂತ್ರಣ ಕಾಯ್ದೆ ಜಾರಿಗೆ ವಿಶೇಷ ದಾಳಿ – 40 ಪ್ರಕರಣ ದಾಖಲು
ರಿಪ್ಪನ್‌ಪೇಟೆ : ಪಟ್ಟಣದಲ್ಲಿ ತಂಬಾಕು ನಿಯಂತ್ರಣ ಕಾಯ್ದೆ (COTPA) ಉಲ್ಲಂಘನೆ ವಿರುದ್ಧ ಆರೋಗ್ಯ ಇಲಾಖೆ ವತಿಯಿಂದ ವಿಶೇಷ ದಾಳಿ ನಡೆಯಿತು. ಈ ಸಂದರ್ಭದಲ್ಲಿ ಒಟ್ಟು 40 ಪ್ರಕರಣಗಳನ್ನು ದಾಖಲಿಸಿ, ₹5000 ದಂಡವನ್ನು ಸಂಗ್ರಹಿಸಲಾಯಿತು.
ಈ ದಾಳಿ ಕಾರ್ಯಾಚರಣೆಗೆ ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಸುರೇಶ್ ನೇತೃತ್ವ ವಹಿಸಿದ್ದರು. ಶಿವಮೊಗ್ಗ ಜಿಲ್ಲಾ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಜಿಲ್ಲಾ ಸಲಹೆಗಾರರಾದ ಹೇಮಂತ್ ರಾಜ್ ಅರಸ್ ಕೆ.ಎಂ , ಸಾಮಾಜಿಕ ಕಾರ್ಯಕರ್ತ ರವಿರಾಜ್, ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿಣಿ ಕರಿಬಸಮ್ಮ, ಹಿರಿಯ ಆರೋಗ್ಯ ನಿರೀಕ್ಷಕರಾದ ಮಧುಸೂದನ್ ಹಾಗೂ ಯಜುರ್ವೇದ, ಕಿರಿಯ ಆರೋಗ್ಯ ನಿರೀಕ್ಷಕರಾದ ಅಮೃತೇಶ್ ಮತ್ತು ರಾಘವೇಂದ್ರ ಹಾಗೂ ಉಪ ಪೊಲೀಸ್ ನಿರೀಕ್ಷಕ ವಿನೋದ್ ಕುಮಾರ್ ರವರು ಈ ತಂಡದಲ್ಲಿ ಭಾಗಿಯಾಗಿದ್ದರು.
ದಾಳಿಯ ಸಂದರ್ಭದಲ್ಲಿ ಸಾರ್ವಜನಿಕರಿಗೆ ತಂಬಾಕು ಸೇವನೆಯಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳು, ಅದರ ಸಾಮಾಜಿಕ ದುಷ್ಪರಿಣಾಮಗಳು ಹಾಗೂ COTPA ಕಾಯ್ದೆಯ ಕುರಿತು ಅರಿವು ಮೂಡಿಸಲಾಯಿತು.
ಆರೋಗ್ಯ ಇಲಾಖೆ ವತಿಯಿಂದ ಈ ರೀತಿಯ ಕಾನೂನು ಜಾಗೃತಿ ಮತ್ತು ದಾಳಿಗಳು ಮುಂದುವರೆಯಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್‌ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…