January 11, 2026

ಹಾಸ್ಟೆಲ್‌ ಟೆರೇಸ್‌ ಮೇಲೆ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಮೃತದೇಹ ಪತ್ತೆ

ಹಾಸ್ಟೆಲ್‌ ಟೆರೇಸ್‌ ಮೇಲೆ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಮೃತದೇಹ ಪತ್ತೆ

ಶಿವಮೊಗ್ಗ: ಹಾಸ್ಟೆಲ್‌ನ ಟೆರೇಸ್‌ ಮೇಲೆ ವಿದ್ಯಾರ್ಥಿನಿಯೊಬ್ಬರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಶಿವಮೊಗ್ಗದ ಕೋಟೆ ರಸ್ತೆಯ ಸರ್ಕಾರಿ ಬಾಲಕಿಯರ ವಸತಿ ನಿಲಯದಲ್ಲಿ ನಡೆದಿದೆ.

ಭದ್ರಾವತಿ ತಾಲೂಕು ಗಂಗೂರಿನ ವನಿಷಾ (21) ಮೃತ ದುರ್ಧೈವಿಯಾಗಿದ್ದಾರೆ.

ಹಾಸ್ಟೆಲ್‌ನ ಟೆರೇಸ್‌ನಲ್ಲಿರುವ ನೀರಿನ ಟ್ಯಾಂಕ್‌ ಪಕ್ಕದಲ್ಲಿ ವನಿಷಾ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಟೆರೇಸ್‌ ಮೇಲೆ ಹೋದ ವಿದ್ಯಾರ್ಥಿನಿಯರು ಇದನ್ನು ಗಮನಿಸಿ ಕೂಡಲೆ ವಾರ್ಡನ್‌ಗೆ ಮಾಹಿತಿ ನೀಡಿದ್ದಾರೆ.ಘಟನೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.

ವನಿಷಾ, ಡಿವಿಎಸ್‌ ಕಾಲೇಜಿನಲ್ಲಿ ಅಂತಿಮ ವರ್ಷದ ಬಿಎಸ್ಸಿ ಪದವಿ ಓದುತ್ತಿದ್ದರು.

ಕೋಟೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ತನಿಖೆ ನಡೆಸುತ್ತಿದ್ದಾರೆ.

About The Author

Exit mobile version