w
Headlines
Home » ಕಾಲೇಜು‌ ಮಕ್ಕಳಿದ್ದ ಪ್ರವಾಸಿ ಬಸ್ ಪಲ್ಟಿ – ಐವರಿಗೆ ಗಂಭೀರ ಗಾಯ

ಕಾಲೇಜು‌ ಮಕ್ಕಳಿದ್ದ ಪ್ರವಾಸಿ ಬಸ್ ಪಲ್ಟಿ – ಐವರಿಗೆ ಗಂಭೀರ ಗಾಯ

IMG 20251109 WA0014

ಕಾಲೇಜು‌ ಮಕ್ಕಳಿದ್ದ ಪ್ರವಾಸಿ ಬಸ್ ಪಲ್ಟಿ – ಐವರಿಗೆ ಗಂಭೀರ ಗಾಯ

ಪ್ರವಾಸಕ್ಕೆ ತೆರಳುತ್ತಿದ್ದ ಖಾಸಗಿ ಬಸ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಬಸ್‌ನಲ್ಲಿದ್ದ ಐವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದು, 11 ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ಶೃಂಗೇರಿ ತಾಲೂಕಿನ ಕಾವಡಿ ಕ್ರಷರ್ ಬಳಿ ನಡೆದಿದೆ.

ಗಂಭೀರವಾಗಿ ಗಾಯಗೊಂಡ ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ರವಾನಿಸಲಾಗಿದೆ.

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯ ವಾಸವಿ ಕಾಲೇಜಿನ ವಿದ್ಯಾರ್ಥಿಗಳು ಪ್ರವಾಸಕ್ಕೆಂದು ಶೃಂಗೇರಿಗೆ ಆಗಮಿಸುತ್ತಿದ್ದರು. ಈ ವೇಳೆ ಶೃಂಗೇರಿಯ ಕಾವಡಿ ಕ್ರಷ‌ ಬಳಿ ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿ ಪಲ್ಟಿಯಾಗಿದೆ.

ಘಟನೆಯಲ್ಲಿ ಗಾಯಗೊಂಡ 11 ವಿದ್ಯಾರ್ಥಿಗಳಿಗೆ
ಶೃಂಗೇರಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆಐದು ವಿದ್ಯಾರ್ಥಿಗಳ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದ್ದರಿಂದ ತಕ್ಷಣ ಅವರನ್ನು ಮಣಿಪಾಲ್ ಆಸ್ಪತ್ರೆಗೆ ರವಾನಿಸಲಾಗಿದೆ.

ಘಟನೆಯ ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುವಲ್ಲಿ ನೆರವಾದರು.

ಈ ಘಟನೆಯ ಸಂಬಂಧ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.