ಕಾಲೇಜು ಮಕ್ಕಳಿದ್ದ ಪ್ರವಾಸಿ ಬಸ್ ಪಲ್ಟಿ – ಐವರಿಗೆ ಗಂಭೀರ ಗಾಯ
ಪ್ರವಾಸಕ್ಕೆ ತೆರಳುತ್ತಿದ್ದ ಖಾಸಗಿ ಬಸ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಬಸ್‌ನಲ್ಲಿದ್ದ ಐವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದು, 11 ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ಶೃಂಗೇರಿ ತಾಲೂಕಿನ ಕಾವಡಿ ಕ್ರಷರ್ ಬಳಿ ನಡೆದಿದೆ.
ಗಂಭೀರವಾಗಿ ಗಾಯಗೊಂಡ ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ರವಾನಿಸಲಾಗಿದೆ.
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯ ವಾಸವಿ ಕಾಲೇಜಿನ ವಿದ್ಯಾರ್ಥಿಗಳು ಪ್ರವಾಸಕ್ಕೆಂದು ಶೃಂಗೇರಿಗೆ ಆಗಮಿಸುತ್ತಿದ್ದರು. ಈ ವೇಳೆ ಶೃಂಗೇರಿಯ ಕಾವಡಿ ಕ್ರಷ ಬಳಿ ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿ ಪಲ್ಟಿಯಾಗಿದೆ.
ಘಟನೆಯಲ್ಲಿ ಗಾಯಗೊಂಡ 11 ವಿದ್ಯಾರ್ಥಿಗಳಿಗೆ
ಶೃಂಗೇರಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆಐದು ವಿದ್ಯಾರ್ಥಿಗಳ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದ್ದರಿಂದ ತಕ್ಷಣ ಅವರನ್ನು ಮಣಿಪಾಲ್ ಆಸ್ಪತ್ರೆಗೆ ರವಾನಿಸಲಾಗಿದೆ.
ಘಟನೆಯ ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುವಲ್ಲಿ ನೆರವಾದರು.
ಈ ಘಟನೆಯ ಸಂಬಂಧ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…
ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…