ಶಿವಮೊಗ್ಗ: ಸ್ವಾಮಿ ವಿವೇಕಾನಂದ ಬಡವಾಣೆಯ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜು ಎದುರು ಮಹಿಳೆಯೊಬ್ಬರು ಸ್ಕೂಟಿಯಲ್ಲಿ ತೆರಳುತ್ತಿದ್ದಾಗ ಕಳ್ಳರು ಮಹಿಳೆಯ ಸರವನ್ನು ಕದ್ದು ಪರಾರಿಯಾಗಿದ್ದಾರೆ. ಈ ಹಿನ್ನೆಲೆ ತುಂಗಾನಗರಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿವೇಕಾನಂದ ಬಡಾವಣೆಯ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜ್ ಎದುರು ರಸ್ತೆಯಲ್ಲಿ ಮಹಿಳೆ ಶಾಪಿಂಗ್ ಮುಗಿಸಿ ಸ್ಕೂಟಿಯಲ್ಲಿ ಮನೆಗೆ ವಾಪಸ್ ಬರುತ್ತಿದ್ದರು. ಈ ವೇಳೆ, ಹಿಂಬದಿಯಿಂದ ಬೈಕ್ನಲ್ಲಿ ಬಂದ ಅಪರಿಚಿತ ವ್ಯಕ್ತಿಯೊಬ್ಬರು ಏಕಾಏಕಿ ಮಹಿಳೆಯ ಕುತ್ತಿಗೆಗೆ ಕೈ ಹಾಕಿ ಮಾಂಗಲ್ಯ ಸರವನ್ನು ಕೀಳಲು ಪ್ರಯತ್ನಿಸಿದ್ದಾನೆ. ಎಚ್ಚೆತ್ತ ಮಹಿಳೆ ತಕ್ಷಣ ಕೈಯಲ್ಲಿ ಸರವನ್ನು ಗಟ್ಟಿಯಾಗಿ ಹಿಡಿದುಕೊಂಡಿದ್ದಾರೆ. ಮಹಿಳೆ ಸರ ಹಿಡಿದಿದ್ದ ಕಾರಣಕ್ಕೆ ಸರವು ಅರ್ಧಕ್ಕೆ ತುಂಡಾಗಿದೆ. ಸುಮಾರು 6 ಗ್ರಾಂ ತೂಕದ ಸರ ಮಹಿಳೆಯ ಕೈಯಲ್ಲಿ ಉಳಿದಿದ್ದರೆ, ಉಳಿದ ಅಂದಾಜು 4 ಗ್ರಾಂ ತೂಕದ ಚಿನ್ನದ ಸರವನ್ನು ಕಳ್ಳ ಕಿತ್ತುಕೊಂಡು ಪರಾರಿಯಾಗಿದ್ದಾನೆ ಎಂದು ಆರೋಪಿಸಲಾಗಿದೆ .
ಕಳುವಾದ ಸರದ ಮೌಲ್ಯ ಸುಮಾರು 25,000 ರೂ. ಎಂದು ಅಂದಾಜಿಸಲಾಗಿದೆ. ಈ ಸಂದರ್ಭದಲ್ಲಿ ಮಹಿಳೆ ಸ್ಕೂಟಿ ಸಮೇತ ರಸ್ತೆಗೆ ಬಿದ್ದಿದ್ದಾರೆ. ಪರಿಣಾಮವಾಗಿ, ಅವರ ಬಲಗಾಲು ಮತ್ತು ಕುತ್ತಿಗೆಯ ಬಳಿ ಗಾಯವಾಗಿದೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್