ಸ್ಕೂಟಿಯಲ್ಲಿ ತೆರಳುತ್ತಿದ್ದ ಮಹಿಳೆಯ ಸರ ಅಪಹರಣ
ಶಿವಮೊಗ್ಗ: ಸ್ವಾಮಿ ವಿವೇಕಾನಂದ ಬಡವಾಣೆಯ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜು ಎದುರು ಮಹಿಳೆಯೊಬ್ಬರು ಸ್ಕೂಟಿಯಲ್ಲಿ ತೆರಳುತ್ತಿದ್ದಾಗ ಕಳ್ಳರು ಮಹಿಳೆಯ ಸರವನ್ನು ಕದ್ದು ಪರಾರಿಯಾಗಿದ್ದಾರೆ. ಈ ಹಿನ್ನೆಲೆ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿವೇಕಾನಂದ ಬಡಾವಣೆಯ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜ್ ಎದುರು ರಸ್ತೆಯಲ್ಲಿ ಮಹಿಳೆ ಶಾಪಿಂಗ್ ಮುಗಿಸಿ ಸ್ಕೂಟಿಯಲ್ಲಿ ಮನೆಗೆ ವಾಪಸ್ ಬರುತ್ತಿದ್ದರು. ಈ ವೇಳೆ, ಹಿಂಬದಿಯಿಂದ ಬೈಕ್‌ನಲ್ಲಿ ಬಂದ ಅಪರಿಚಿತ ವ್ಯಕ್ತಿಯೊಬ್ಬರು ಏಕಾಏಕಿ ಮಹಿಳೆಯ ಕುತ್ತಿಗೆಗೆ ಕೈ ಹಾಕಿ ಮಾಂಗಲ್ಯ ಸರವನ್ನು ಕೀಳಲು ಪ್ರಯತ್ನಿಸಿದ್ದಾನೆ. ಎಚ್ಚೆತ್ತ ಮಹಿಳೆ ತಕ್ಷಣ ಕೈಯಲ್ಲಿ ಸರವನ್ನು ಗಟ್ಟಿಯಾಗಿ ಹಿಡಿದುಕೊಂಡಿದ್ದಾರೆ. ಮಹಿಳೆ ಸರ ಹಿಡಿದಿದ್ದ ಕಾರಣಕ್ಕೆ ಸರವು ಅರ್ಧಕ್ಕೆ ತುಂಡಾಗಿದೆ. ಸುಮಾರು 6 ಗ್ರಾಂ ತೂಕದ ಸರ ಮಹಿಳೆಯ ಕೈಯಲ್ಲಿ ಉಳಿದಿದ್ದರೆ, ಉಳಿದ ಅಂದಾಜು 4 ಗ್ರಾಂ ತೂಕದ ಚಿನ್ನದ ಸರವನ್ನು ಕಳ್ಳ ಕಿತ್ತುಕೊಂಡು ಪರಾರಿಯಾಗಿದ್ದಾನೆ ಎಂದು ಆರೋಪಿಸಲಾಗಿದೆ .
ಕಳುವಾದ ಸರದ ಮೌಲ್ಯ ಸುಮಾರು 25,000 ರೂ. ಎಂದು ಅಂದಾಜಿಸಲಾಗಿದೆ. ಈ ಸಂದರ್ಭದಲ್ಲಿ ಮಹಿಳೆ ಸ್ಕೂಟಿ ಸಮೇತ ರಸ್ತೆಗೆ ಬಿದ್ದಿದ್ದಾರೆ. ಪರಿಣಾಮವಾಗಿ, ಅವರ ಬಲಗಾಲು ಮತ್ತು ಕುತ್ತಿಗೆಯ ಬಳಿ ಗಾಯವಾಗಿದೆ.
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್‌ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…