Headlines

ಸ್ಕೂಟಿಯಲ್ಲಿ ತೆರಳುತ್ತಿದ್ದ ಮಹಿಳೆಯ ಸರ ಅಪಹರಣ

ಸ್ಕೂಟಿಯಲ್ಲಿ ತೆರಳುತ್ತಿದ್ದ ಮಹಿಳೆಯ ಸರ ಅಪಹರಣ

ಶಿವಮೊಗ್ಗ:   ಸ್ವಾಮಿ ವಿವೇಕಾನಂದ ಬಡವಾಣೆಯ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜು ಎದುರು ಮಹಿಳೆಯೊಬ್ಬರು ಸ್ಕೂಟಿಯಲ್ಲಿ ತೆರಳುತ್ತಿದ್ದಾಗ ಕಳ್ಳರು ಮಹಿಳೆಯ ಸರವನ್ನು ಕದ್ದು ಪರಾರಿಯಾಗಿದ್ದಾರೆ. ಈ ಹಿನ್ನೆಲೆ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿವೇಕಾನಂದ ಬಡಾವಣೆಯ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜ್ ಎದುರು ರಸ್ತೆಯಲ್ಲಿ  ಮಹಿಳೆ ಶಾಪಿಂಗ್ ಮುಗಿಸಿ ಸ್ಕೂಟಿಯಲ್ಲಿ ಮನೆಗೆ ವಾಪಸ್ ಬರುತ್ತಿದ್ದರು. ಈ ವೇಳೆ, ಹಿಂಬದಿಯಿಂದ ಬೈಕ್‌ನಲ್ಲಿ ಬಂದ ಅಪರಿಚಿತ ವ್ಯಕ್ತಿಯೊಬ್ಬರು ಏಕಾಏಕಿ ಮಹಿಳೆಯ ಕುತ್ತಿಗೆಗೆ ಕೈ ಹಾಕಿ ಮಾಂಗಲ್ಯ ಸರವನ್ನು ಕೀಳಲು ಪ್ರಯತ್ನಿಸಿದ್ದಾನೆ. ಎಚ್ಚೆತ್ತ ಮಹಿಳೆ ತಕ್ಷಣ ಕೈಯಲ್ಲಿ ಸರವನ್ನು ಗಟ್ಟಿಯಾಗಿ ಹಿಡಿದುಕೊಂಡಿದ್ದಾರೆ. ಮಹಿಳೆ ಸರ  ಹಿಡಿದಿದ್ದ ಕಾರಣಕ್ಕೆ ಸರವು ಅರ್ಧಕ್ಕೆ ತುಂಡಾಗಿದೆ. ಸುಮಾರು 6 ಗ್ರಾಂ ತೂಕದ ಸರ ಮಹಿಳೆಯ ಕೈಯಲ್ಲಿ ಉಳಿದಿದ್ದರೆ, ಉಳಿದ ಅಂದಾಜು 4 ಗ್ರಾಂ ತೂಕದ ಚಿನ್ನದ ಸರವನ್ನು ಕಳ್ಳ ಕಿತ್ತುಕೊಂಡು ಪರಾರಿಯಾಗಿದ್ದಾನೆ  ಎಂದು ಆರೋಪಿಸಲಾಗಿದೆ .

ಕಳುವಾದ ಸರದ ಮೌಲ್ಯ ಸುಮಾರು 25,000 ರೂ. ಎಂದು ಅಂದಾಜಿಸಲಾಗಿದೆ.  ಈ ಸಂದರ್ಭದಲ್ಲಿ  ಮಹಿಳೆ ಸ್ಕೂಟಿ ಸಮೇತ ರಸ್ತೆಗೆ ಬಿದ್ದಿದ್ದಾರೆ. ಪರಿಣಾಮವಾಗಿ, ಅವರ ಬಲಗಾಲು ಮತ್ತು ಕುತ್ತಿಗೆಯ ಬಳಿ ಗಾಯವಾಗಿದೆ.

Exit mobile version