ಆನ್‌ಲೈನ್‌ನಲ್ಲಿ ಸ್ಪೋಕನ್ ಇಂಗ್ಲಿಷ್ ಕಲಿಯಲು ಹೋಗಿ ₹82 ಸಾವಿರ ಕಳೆದುಕೊಂಡ ಹುಂಚದ ಕಟ್ಟೆಯ ವ್ಯಕ್ತಿ

ಆನ್‌ಲೈನ್‌ನಲ್ಲಿ ಸ್ಪೋಕನ್ ಇಂಗ್ಲಿಷ್ ಕಲಿಯಲು ಹೋಗಿ ₹82 ಸಾವಿರ ಕಳೆದುಕೊಂಡ ಹುಂಚದ ಕಟ್ಟೆಯ ವ್ಯಕ್ತಿ

ಶಿವಮೊಗ್ಗ – ಆನ್‌ಲೈನ್‌ನಲ್ಲಿ ಸ್ಪೋಕನ್ ಇಂಗ್ಲಿಷ್ ಕಲಿಯಲು ಹೋಗಿ ತೀರ್ಥಹಳ್ಳಿ ತಾಲೂಕಿನ ಹುಂಚದಕಟ್ಟೆ ನಿವಾಸಿಯೊಬ್ಬರು ಸೈಬರ್ ವಂಚಕರ ಬಲೆಗೆ ಬಿದ್ದು ಬರೋಬ್ಬರಿ ₹82,520 ಕಳೆದುಕೊಂಡಿರುವ ಘಟನೆ ನಡೆದಿದೆ.

ಈ ಸಂಬಂಧ ಸಂತ್ರಸ್ತ ವ್ಯಕ್ತಿ ಶಿವಮೊಗ್ಗದ ಸಿಇಎನ್ (CEN) ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಹುಂಚದ ಕಟ್ಟೆಯ ನಿವಾಸಿಯೊಬ್ಬರು ಆನ್‌ಲೈನ್‌ನಲ್ಲಿ ಸ್ಪೋಕನ್ ಇಂಗ್ಲಿಷ್ ತರಗತಿಗಳಿಗಾಗಿ ಹುಡುಕಾಡುತ್ತಿದ್ದಾಗ, ಅವರಿಗೆ ‘PLANETSPARK’ ಎಂಬ ಕಂಪನಿಯ ಜಾಹೀರಾತು ಸಿಕ್ಕಿದೆ. ಆ ಜಾಹೀರಾತಿನ ಲಿಂಕ್ ಅನ್ನು ಕ್ಲಿಕ್ ಮಾಡಿದಾಗ, ಕಂಪನಿಯ ಹೋಂ ಪೇಜ್ ಓಪನ್ ಆಗಿದ್ದು, ಅವರು ತಮ್ಮ ವೈಯಕ್ತಿಕ ಮಾಹಿತಿ ಹಾಗೂ OTP ನೀಡಿ ರಿಜಿಸ್ಟರ್ ಆಗಿ ಲಾಗಿನ್ ಮಾಡಿದ್ದಾರೆ.ನವೆಂಬರ್ 30, 2025 ರಂದು ಮಧ್ಯಾಹ್ನ 12:30 ಕ್ಕೆ ಡೆಮೊ ತರಗತಿ ತೆಗೆದುಕೊಳ್ಳಲು ಪ್ರೊಸೆಸಿಂಗ್ ಫೀಜ್ ಪಾವತಿಸಬೇಕು ಎಂದು ವಂಚಕರು ತಿಳಿಸಿದ್ದು, ಅದಕ್ಕಾಗಿ ನೀಡಿದ QR ಕೋಡ್‌ಗೆ ದೂರುದಾರರು 5,000 ಹಣವನ್ನು ಹಾಕಿರುತ್ತಾರೆ. ತದನಂತರ, ಅಪರಿಚಿತ ಮೊಬೈಲ್ ನಂಬರ್‌ನಿಂದ ಅವರ ಪತ್ನಿಯ ಮೊಬೈಲ್‌ಗೆ ಕರೆ ಮಾಡಿ ತರಗತಿಗಳ ಬಗ್ಗೆ ಮಾಹಿತಿ ನೀಡಲಾಗಿದೆ.

ಆದರೆ, ತರಗತಿಗಳು ಇಷ್ಟವಾಗದ ಕಾರಣ ದೂರುದಾರರು ಕಂಪನಿಯ ಕಸ್ಟಮರ್ ಜಿ-ಮೇಲ್ ಹಾಗೂ ಮೊಬೈಲ್ ನಂಬರ್‌ಗೆ ಕರೆ ಮಾಡಿ ಹಣವನ್ನು ವಾಪಸ್ಸು ನೀಡಬೇಕೆಂದು ಕೇಳಿದ್ದಾರೆ. ಆದರೆ ಅವರಿಗೆ ಯಾವುದೇ ಪ್ರತಿಕ್ರಿಯೆ ಸಿಕ್ಕಿಲ್ಲ. ನಂತರ, ಅವರ ಪತ್ನಿಯ ಮೊಬೈಲ್‌ಗೆ ಅಪರಿಚಿತ ನಂಬರ್‌ನಿಂದ ಕರೆ ಬಂದಿದ್ದು, ತರಗತಿಗಳನ್ನು ನಿಲ್ಲಿಸಲಾಗುವುದಿಲ್ಲ ಮತ್ತು ಹಣವನ್ನು ವಾಪಸ್ಸು ನೀಡಲು ಸಾಧ್ಯವಿಲ್ಲ ಎಂದು ತಿಳಿಸಲಾಗಿದೆ.

ಡಿಸೆಂಬರ್ 12, 2025 ರಂದು ದೂರುದಾರರು ತಮ್ಮ ಬ್ಯಾಂಕ್ ಖಾತೆಯನ್ನು ಪರಿಶೀಲಿಸಿದಾಗ, ಅಸಲಿ ವಿಷಯ ಬಯಲಾಗಿದೆ. ನವೆಂಬರ್ 30, 2025 ರಂದು ಲಾಗಿನ್‌ಗೆ OTP ನೀಡಿದಾಗಲೇ, ದೂರುದಾರರಿಗೆ ತಿಳಿಯದಂತೆ ಅವರ ಮೊಬೈಲ್ ನಂಬರ್ ಬಳಸಿ ಬೇರೊಂದು HDFC ಬ್ಯಾಂಕ್‌ನಲ್ಲಿ ಲೋನ್ ಖಾತೆಯನ್ನು ತೆರೆದು, ಬರೋಬ್ಬರಿ ₹77,520 ರೂಪಾಯಿಗಳ ಲೋನ್ ಪಡೆದು ವಂಚಿಸಲಾಗಿದೆ.

ಒಟ್ಟಾರೆಯಾಗಿ, PLANETSPARK ಕಂಪನಿಯವರಂತೆ ನಟಿಸಿದ ಸೈಬರ್ ವಂಚಕರು OTP ಪಡೆದುಕೊಂಡು, ಫಿರ್ಯಾದಿಯ ಮೊಬೈಲ್ ನಂಬರ್ ಬಳಸಿ ಲೋನ್ ಖಾತೆ ತೆರೆದು, ಡೆಮೊ ಫೀಸ್ ₹5,000 ಹಾಗೂ ಲೋನ್ ಹಣ ₹77,520 ಸೇರಿ ಒಟ್ಟು ₹82,520 ಹಣವನ್ನು ಮೋಸದಿಂದ ವರ್ಗಾವಣೆ ಮಾಡಿಕೊಂಡು ವಂಚಿಸಿರುವುದು ದೂರಿನಲ್ಲಿ ತಿಳಿದು ಬಂದಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ A school bus lost control…

6 hours ago

ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ Congress leaders in Sagar have hit…

8 hours ago

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ Summa S.…

11 hours ago

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…

15 hours ago

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…

18 hours ago

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…

1 day ago