4 ವರ್ಷಗಳ ಬಳಿಕ ಕೊನೆಗೂ ಜಿಪಂ, ತಾಪಂಗಳಿಗೆ ಏಪ್ರಿಲ್ ನಲ್ಲಿ ಚುನಾವಣೆ

After 4 years, elections for Zilla Panchayats and TPAs ​​will finally be held in April.

4 ವರ್ಷಗಳ ಬಳಿಕ ಕೊನೆಗೂ ಜಿಪಂ, ತಾಪಂಗಳಿಗೆ ಏಪ್ರಿಲ್ ನಲ್ಲಿ ಚುನಾವಣೆ

After 4 years, elections for Zilla Panchayats and TPAs will finally be held in April.

ರಾಜ್ಯದ ಗ್ರಾಮ ಪಂಚಾಯತ್ ಸೇರಿದಂತೆ 6,500ಕ್ಕೂ ಹೆಚ್ಚು ಸ್ಥಳೀಯ ಸಂಸ್ಥೆಗಳ ಚುನಾವಣೆ ಏಪ್ರಿಲ್ ನಲ್ಲಿ: ಸಚಿವ ಸಂಪುಟ ತೀರ್ಮಾನ

After 4 years, elections for Zilla Panchayats and TPAs ​​will finally be held in April.

ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯ್ತಿ, ಪಂಚಾಯತ್ ರಾಜ್ ಸಂಸ್ಥೆಗಳು ಹಾಗೂ ನಗರ ಸ್ಥಳೀಯ ಸಂಸ್ಥೆಗಳನ್ನು ಒಳಗೊಂಡಂತೆ 6,500ಕ್ಕೂ ಅಧಿಕ ಸಂಸ್ಥೆಗಳ ಚುನಾವಣೆಗಳನ್ನು 2026ರ ಏಪ್ರಿಲ್‌ನಲ್ಲೇ ನಡೆಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ರಾಜ್ಯ ಸಚಿವ ಸಂಪುಟ ಗುರುವಾರ ಮಹತ್ವದ ತೀರ್ಮಾನ ಕೈಗೊಂಡಿದೆ.

ಕಳೆದ ನಾಲ್ಕು ವರ್ಷಗಳಿಂದ ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗಳು ನಡೆಯದೇ ಬಾಕಿಯಿದ್ದರೆ, ಹಲವಾರು ನಗರ ಸ್ಥಳೀಯ ಸಂಸ್ಥೆಗಳ ಅವಧಿ ಮುಗಿದಿದೆ. ಅನೇಕ ಗ್ರಾಮ ಪಂಚಾಯಿತಿಗಳ ಅವಧಿಯೂ ಮುಗಿಯುತ್ತಿರುವ ಹಿನ್ನೆಲೆ, ಜಿ.ಪಂ–ತಾ.ಪಂ ಚುನಾವಣೆಗಳ ವಿಳಂಬ ಸಂಬಂಧಿಸಿದ ಪ್ರಕರಣ ನ್ಯಾಯಾಲಯದಲ್ಲಿದೆ. ನ್ಯಾಯಾಲಯವೂ ಸರ್ಕಾರಕ್ಕೆ ಬೇಗ ಚುನಾವಣಾ ಪ್ರಕ್ರಿಯೆ ಆರಂಭಿಸಲು ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ 30 ತಿಂಗಳು ಕಳೆದರೂ ಒಂದು ಸ್ಥಳೀಯ ಸಂಸ್ಥೆಯೂ ಚುನಾವಣೆ ನಡೆದಿಲ್ಲ ಎಂಬ ಟೀಕೆಯೊಂದಿಗೂ ಸಚಿವ ಸಂಪುಟ ಸ್ಪಂದಿಸಿದೆ. ಅನಗತ್ಯ ವಿಳಂಬ ತಪ್ಪಿಸಲು ವ್ಯಾಪ್ತಿ ಪುನರ್‌ ವಿಂಗಡಣೆ ಹಾಗೂ ಅಂತಿಮ ಮತದಾರರ ಪಟ್ಟಿಯ ಪರಿಷ್ಕರಣೆ ಶೀಘ್ರ ಪೂರ್ಣಗೊಳಿಸಿ, ಬಳಿಕ ಚುನಾವಣಾ ಅಧಿಸೂಚನೆ ಹೊರಡಿಸುವಂತೆ ಸಭೆಯಲ್ಲಿ ನಿರ್ಧರಿಸಲಾಗಿದೆ.

ರಾಜ್ಯದಲ್ಲಿ ಒಟ್ಟು 195 ನಗರ ಸ್ಥಳೀಯ ಸಂಸ್ಥೆಗಳು, 5,952 ಗ್ರಾಮ ಪಂಚಾಯಿತಿಗಳು, 31 ಜಿಲ್ಲಾ ಪಂಚಾಯಿತಿಗಳು, 239 ತಾಲೂಕು ಪಂಚಾಯಿತಿಗಳು ಹಾಗೂ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಐದು ಹೊಸ ನಗರ ನಿಗಮಗಳ ಚುನಾವಣೆಗಳು ಬಾಕಿ ಇವೆ. ಈ ಐದು ನಿಗಮಗಳನ್ನು ಹೊರತುಪಡಿಸಿ ಉಳಿದ ಎಲ್ಲ ಸಂಸ್ಥೆಗಳ ಚುನಾವಣೆಗೆ ತಕ್ಷಣ ಸಿದ್ಧತೆ ಆರಂಭಿಸಲು ಸಚಿವ ಸಂಪುಟ ಸೂಚನೆ ನೀಡಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

40 minutes ago

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

18 hours ago

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…

18 hours ago

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…

20 hours ago

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

2 days ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

2 days ago